ಬಂಡೀಪುರ ಸಫಾರಿಗರಿಗೆ ಭರ್ಜರಿ ಗುಡ್‌ ನ್ಯೂಸ್‌ ಕೊಟ್ಟ ಅರಣ್ಯ ಇಲಾಖೆ

ಚಾಮರಾಜನಗರ, ಅಕ್ಟೋಬರ್‌, 07: ಸಫಾರಿ ನಡೆಸುವ ವೇಳೆ ಪ್ರಾಣಿಗಳು ಅಟ್ಟಾಡಿಸಿಕೊಂಡು ಬರುವುದು, ದಾಳಿಗೆ ಮುಂದಾಗುವ ಸಾಕಷ್ಟು ಸುದ್ದಿಗಳು, ವೀಡಿಯೋಗಳನ್ನು ನೋಡಿರುತ್ತೀರಿ. ಈಗ ಸಫಾರಿಗರಿಗೆ ಬಂಡೀಪುರ ಅರಣ್ಯ ಇಲಾಖೆ ಭರ್ಜರಿ ಯೋಜನೆಯನ್ನೇ ಆರಂಭಿಸಿದೆ. ಹಾಗಾದರೆ ಆ ಶುಭಸುದ್ದಿ ಏನು ಎಂದು ಇಲ್ಲಿ ತಿಳಿಯಿರಿ.

ಭಾರತದ ಜನಪ್ರಿಯ ಹುಲಿ ಯೋಜನೆ ಹಾಗೂ ಸಫಾರಿ ಕೇಂದ್ರಗಳಲ್ಲಿ ಒಂದಾದ ಬಂಡೀಪುರದಲ್ಲಿ ಸಫಾರಿ ನಡೆಸುವವರಿಗೆ ಈಗ ವಿಮಾ ಬಲವೂ ಜೊತೆಯಾಗಿದ್ದು, ಸಫಾರಿಗೆ ವೇಳೆ ಪ್ರಾಣ ಹಾನಿ ಸಂಭವಿಸಿದರೆ 1 ಕೋಟಿ ವಿಮೆ ಸೌಲಭ್ಯ ಸಿಗಲಿದೆ. ಕಾಡು ಪ್ರಾಣಿಗಳ ದಾಳಿಯಿಂದ ವ್ಯಕ್ತಿ ಮೃತಪಟ್ಟರೆ 1 ಕೋಟಿ ರೂಪಾಯಿ ವಿಮೆ ಮಾಡಿಸಲಾಗಿದ್ದು, ಅರಣ್ಯ ಇಲಾಖೆಯಿಂದ ಈ ನೂತನ ಯೋಜನೆ ಜಾರಿಯಾಗಿದೆ.

Good news for Bandipur tourists from Forest Department

ಈ ಯೋಜನೆಗೆ ಅರ್ಹರಾಗಲು ಯಾವುದೇ ನೋಂದಣಿ ಅಗತ್ಯವಿಲ್ಲ. ಸಫಾರಿಗೆ ಹೋಗಿರುವ ಟಿಕೆಟ್ ಇದ್ದರೆ ಸಾಕು, ಕಾಡಿನೊಳಗೆ ಪ್ರಾಣ ಹಾನಿ ಸಂಭವಿಸಿದರೆ ಅರಣ್ಯ ಇಲಾಖೆಯಿಂದ ಆರ್ಥಿಕ ನೆರವು ಸಿಗಲಿದೆ ಎಂದು ಬಂಡಿಪುರ ಸಿಎಫ್ ರಮೇಶ್ ಕುಮಾರ್ ಮಾಹಿತಿ ಕೊಟ್ಟಿದ್ದಾರೆ. ಪ್ರತಿವರ್ಷ 1ರಿಂದ 1.5 ಲಕ್ಷ ಮಂದಿ ಸಫಾರಿ ಮೂಲಕ ಬಂಡೀಪುರದ ಕಾಡಿನ ಚೆಲುವು ತುಂಬಿಕೊಳ್ಳುತ್ತಿದ್ದರು. ಈಗ, ಪ್ರವಾಸಿಗರು ವಿಮಾ ರಕ್ಷಣೆಗೂ ಒಳಗಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಾಡಾನೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಇತ್ತೀಚೆಗಷ್ಟೇ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ಓಂಕಾರ ವನ್ಯಜೀವಿ ವಲಯ ವ್ಯಾಪ್ತಿಯ ಕುರುಬರಹುಂಡಿಯ ಆಲದ ಮರದ ಹಳ್ಳ ಅರಣ್ಯ ಪ್ರದೇಶದಲ್ಲಿ 35 ವರ್ಷದ ಗಂಡು ಕಾಡಾನೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಕಾಡಾನೆಯು ಮತ್ತೊಂದು ಕಾಡಾನೆಯ ಜೊತೆ ಕಾದಾಟ ನಡೆಸಿ ಮೃತಪಟ್ಟಿರುವುದಾಗಿ ಅರಣ್ಯ ಅಧಿಕಾರಿಗಳು ದೃಢಪಡಿಸಿದ್ದರು.

ಕಾಡಾನೆಯ ಕಣ್ಣಿನ ಕೆಳಭಾಗದಲ್ಲಿ ಎದುರಾಳಿ ಕಾಡಾನೆಯ ದಂತ ಚುಚ್ಚಿರುವುದು ಕಂಡು ಬಂದಿದ್ದು, ರಕ್ತಸ್ರಾವ ಹಾಗೂ ನಿತ್ರಾಣದಿಂದ ಮೃತಪಟ್ಟಿದೆ. ಎದುರಾಳಿ ಕಾಡಾನೆಯ ದಂತ ಚುಚ್ಚಿ ದಂತವು ಮೃತ ಕಾಡಾನೆಯ ಮೇಲ್ದವಡೆಯವರೆಗೆ 30 ಸೆ.ಮೀ ಆಳದವರೆಗೆ ಹೊಳಹೊಕ್ಕಿದ್ದು, ದವಡೆಯ ಒಳಗೆ ದಂತವು ಮುರಿದಿರುವುದರಿಂದ ಕಾಡಾನೆಯು ಸಾವನ್ನಪ್ಪಿದೆ ಎಂದು ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್‍ಕುಮಾರ್ ಮಾಹಿತಿ ನೀಡಿದ್ದರು.

ಎದುರಾಳಿ ಆನೆಯ ಮುರಿದ ದಂತದ ಭಾಗ ಹಾಗೂ ಮೃತ ಕಾಡಾನೆಯ ಎರಡು ದಂತಗಳನ್ನು ಇಲಾಖೆಯು ವಶಪಡಿಸಿಕೊಂಡು ಮೃತ ಕಾಡಾನೆಯ ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕಳೆಬರವನ್ನು ನಿಯಮಾನುಸಾರ ಅರಣ್ಯ ಪ್ರದೇಶದಲ್ಲೇ ಬಿಡಲಾಗಿತ್ತು.

ಈ ಸಂದರ್ಭದಲ್ಲಿ ಬಂಡೀಪುರ ಹುಲಿ ಯೋಜನೆ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್ ಕುಮಾರ್, ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ಓಂಕಾರ ವನ್ಯಜೀವಿ ವಲಯದ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್ ಕುಮಾರ್, ಇಲಾಖಾ ಪಶುವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿಂ, ಗಸ್ತು ವನಪಾಲಕ ಸಂತೋಷ್ ಸೇರಿದಂತೆ ಅರಣ್ಯ ವೀಕ್ಷಕ ಹಾಗೂ ಇಲಾಖಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+