Milk Prices Increase: ರಾಜ್ಯದ ರೈತರಿಗೆ ಬಿಗ್ ಗುಡ್ ನ್ಯೂಸ್: ಹಾಲಿನ ದರ ಹೆಚ್ಚಳದ ಸುಳಿವು.!-ಎಷ್ಟು ಗೊತ್ತಾ?
ಚಾಮರಾಜನಗರ, ಅಕ್ಟೋಬರ್, 16: ಈಗಾಗಲೇ ಹಾಲಿಗೆ ಉತ್ತಮ ಬೆಲೆ ಸಿಗುತ್ತಿಲ್ಲ ಎಂದು ರೈತರು ಸರ್ಕಾರದ ವಿರುದ್ಧ ಆಕ್ರೊಶ ಹೊರಹಾಕಿದ್ದರು. ಇದರ ಬೆನ್ನಲ್ಲೇ ಇದೀಗ ಸಚಿವ ವೆಂಕಟೇಶ್ ಅವರು ಹಾಲಿನ ದರ ಹೆಚ್ಚಳ ಮಾಡುವ ಮುನ್ಸೂಚನೆ ನೀಡಿದ್ದಾರೆ. ಹಾಗಾದರೆ ಏರಿಕೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ ಅಂತಾ ಇಲ್ಲಿ ತಿಳಿಯಿರಿ.
ಹಾಲಿನ ದರ ಪ್ರತಿ ಲೀಟರ್‌ಗೆ 5 ರೂಪಾಯಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಸಚಿವ ಕೆ.ವೆಂಕಟೇಶ್ ಸುಳಿವು ನೀಡಿದರು.

ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರು ಹಾಲಿಗೆ ಪ್ರೋತ್ಸಾಹ ಧನ ಹೆಚ್ಚು ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಅದರಂತೆಯೇ ಸರ್ಕಾರ ಪರಿಷ್ಕರಿಸಿ ರೈತರಿಗೆ ಪ್ರೋತ್ಸಾಹ ಧನ ನೀಡಲಿದೆ ಎಂದು ತಿಳಿಸಿದರು. ಪ್ರತಿ ಲೀಟರ್ ಹಾಲಿಗೆ 5 ರೂಪಾಯಿವರೆಗೂ ದರ ಹೆಚ್ಚಳ ಆಬಹುದು ಎಂದು ಹೇಳುವ ಮೂಲಕ ಗ್ರಾಹಕರಿಗೆ ಶಾಕ್ ಕೊಟ್ಟಿದ್ದಾರೆ.
ಬೆಲೆ ಹೆಚ್ಚಳ ಮಾಡಲು ಸಿಎಂ ಸಿದ್ದರಾಮಯ್ಯ ಸಹ ಈಗಾಗಲೇ ಒಪ್ಪಿಗೆ ನೀಡಿದ್ದಾರೆ. ಶೀಘ್ರದಲ್ಲೇ ಬೆಲೆ ಹೆಚ್ಚಳ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಇನ್ನು ಹಾಲಿನ ದರ ಹೆಚ್ಚಳ ಮಾಡಲು ನಿರ್ಧರಿಸಿದ್ದು, ಶೀಘ್ರವೇ ಸಭೆ ಕರೆಯಲಾಗುವುದು ಎಂದರು.
ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಕಳೆದ ಜೂನ್‌ನಲ್ಲಿ ಹಾಲಿನ ಪ್ರಮಾಣ ಹೆಚ್ಚಳ ಮಾಡಿ ಪ್ರತಿ ಲೀಟರ್ ಹಾಲಿನ ದರ ಎರಡು ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿತ್ತು. ಈಗ ಮತ್ತೊಮ್ಮೆ ಹಾಲಿನ ದರ ಹೆಚ್ಚಳ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಹಾಲಿನ ದರ ಹೆಚ್ಚಳ ಮಾಡಿದರೆ, ರೈತರ ಮುಖದಲ್ಲಿ ಮಂದಹಾಸ ಮೂಡಲಿದೆ. ಮತ್ತೊಂದೆಡೆ ಗ್ರಾಹಕರಿಗೆ ಬೆಲೆ ಏರಿಕೆ ದರ ತಟ್ಟಲಿದೆ. ಒಟ್ಟಿನಲ್ಲಿ ಹೇಳುವಯದಾದರೆ, ಹಾಲಿನ ದರ ಹೆಚ್ಚಳದ ನಿರ್ಧಾರ ಉತ್ತಮವೇ ಆಗಿದೆ.












Click it and Unblock the Notifications