• search
 • Live TV
ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಾಮರಾಜನಗರ ಲಾಕ್‌ಡೌನ್‌: ಮೊದಲ ದಿನ ಉತ್ತಮ ಪ್ರತಿಕ್ರಿಯೆ

|
Google Oneindia Kannada News

ಚಾಮರಾಜನಗರ, ಜೂನ್ 29: ಚಾಮರಾಜನಗರದಲ್ಲಿ ಸ್ವಯಂ ಪ್ರೇರಿತ ಲಾಕ್‌ಡೌನ್‌ ಮಾಡಲಾಗಿದೆ. ಮೊದಲ ದಿನ ಲಾಕ್‌ಡೌನ್‌ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇಂದಿನಿಂದ ಸಂಜೆ 4 ರಿಂದ ಬೆಳಗ್ಗೆ 6 ರವರೆಗೆ ಚಾಮರಾಜನಗರ ಲಾಕ್‌ಡೌನ್ ಆಗಿರಲಿದೆ.

   Lunar Eclipse July 5th : ಜುಲೈ 5ಕ್ಕೆ ಚಂದ್ರ ಗ್ರಹಣ , ಇಲ್ಲಿದೆ ಕಂಪ್ಲೀಟ್ ಮಾಹಿತಿ | Oneindia Kannada

   ಸಂಜೆ ನಾಲ್ಕು ಗಂಟೆಯಾಗುತ್ತಿದ್ದಂತೆ ವರ್ತಕರು ಸ್ವಯಂ ಪ್ರೇರಿತವಾಗಿ ವ್ಯಾಪಾರ ವಹಿವಾಟು ನಿಲ್ಲಿಸಿದ್ದಾರೆ. ಔಷಧ ಅಂಗಡಿಗಳು, ಹಾಲಿನ ಮಳಿಗೆಗಳು ಬಿಟ್ಟರೆ, ಉಳಿದ ಎಲ್ಲಾ ವ್ಯಾಪಾರ ವಹಿವಾಟು ಬಂದ್ ಆಗಿವೆ. ಕೊರೊನಾ ವೈರಸ್‌ ಇರುವ ಕಾರಣ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

   ಚಾಮರಾಜನಗರದಲ್ಲಿ ಸಂಜೆ 4 ರಿಂದ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಚಾಮರಾಜನಗರದಲ್ಲಿ ಸಂಜೆ 4 ರಿಂದ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿ

   ಬೀದಿ ಬದಿ ವ್ಯಾಪಾರಿಗಳು ಸಹ ಪೊಲೀಸರ ಎಚ್ಚರಿಕೆಗೆ ಮುಂಚೆಯೇ ವ್ಯಾಪಾರ ನಿಲ್ಲಿಸಿದ್ದಾರೆ. ಟೀ ಶಾಪ್‌ಗಳು ಹಾಗೂ ಗೂಡಂಗಡಿಗಳು ಸಹ ಇದಕ್ಕೆ ತಮ್ಮ ಬೆಂಬಲ ನೀಡಿವೆ. ಚಾಮರಾಜನಗರ ಜಿಲ್ಲೆಯಲ್ಲಿ ಕೊರೊನಾ ಅಬ್ಬರದ ಹಿನ್ನಲೆಯಲ್ಲಿ ಸ್ವಯಂ ನಿರ್ಬಂಧ ಹಾಕಿಕೊಳ್ಳಲಾಗಿದೆ.

   ಲಾಕ್‌ಡೌನ್ ತೀರ್ಮಾನಕ್ಕೆ ಸಾರ್ವಜನಿಕರು ಸ್ವಾಗತಿಸಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಬರುವವರೆಗೂ ಬಂದ್ ಮಾಡಲು ವರ್ತಕರು ನಿರ್ಧರಿಸಿದ್ದಾರೆ. ಚಾಮರಾಜನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.

   English summary
   Good response for 1st day lockdown in Chamrajnagar. All shop will be will be closed after 4 pm.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X