ಚಾಮರಾಜನಗರದಲ್ಲಿ ಮಳೆ; ಗೋಪಿನಾಥಂ ಸೇತುವೆ ಜಲಾವೃತ
ಚಾಮರಾಜನಗರ, ಆಗಸ್ಟ್, 04: ಚಾಮರಾಜನಗರ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಹಳ್ಳ-ಕೊಳ್ಳ ಉಕ್ಕಿ ಹರಿಯುತ್ತಿದ್ದು, ಅಲ್ಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇನ್ನು ಮೆಟ್ಟೂರು ಜಲಾಶಯದ ಹಿನ್ನೀರು ಹೆಚ್ಚಾದ ಪರಿಣಾಮ ಹನೂರು ತಾಲೂಕಿನ ಗೋಪಿನಾಥಂನ ಚಿಕ್ಕ ಸೇತುವೆ ಸಂಪೂರ್ಣ ಜಲಾವೃತವಾಗಿದೆ.
ಗೋಪಿನಾಥಂನಿಂದ ಆಲಂಬಾಡಿ, ಜಂಬಲ್ ಪಟ್ಟಿ, ಮಾರಿಕೊಟ್ಟಾಯಂ ಹಾಗೂ ಹೊಗೆನಕಲ್ ಜಲಪಾತಕ್ಕೆ ತೆರಳುವ ಮಾರ್ಗ ಕಡಿತಗೊಂಡಿದೆ. ಹೊಗೆನಕಲ್ ಬಳಿ ನೀರು ಸೇತುವೆ ಮೇಲೆ ಹರಿದ ಕಾರಣ ಸಾರಿಗೆ ಸಂಸ್ಥೆ ಬಸ್‌ವೊಂದು ಅರ್ಧದಲ್ಲಿಯೇ ನಿಂತಿದ್ದು, ಪ್ರಯಾಣಿಕರು ಪರದಾಡಿದ್ದಾರೆ.
ಸ್ವಲ್ಪ ಸಮಯದ ನಂತರ ಬಸ್ ಅನ್ನು ನೀರಿನಿಂದ ಹೊರಗೆ ತರಲು ಸಿಬ್ಬಂದಿಗಳು ಹರಸಾಹಸವನ್ನೇ ಪಟ್ಟರು. ನದಿಗಳು ಉಕ್ಕಿ ಹರಿಯುತ್ತಿರುವ ಕಾರಣ ಆ ಮಾರ್ಗದಲ್ಲಿ ಸಾರಿಗೆ ಸಂಚಾರ ಸ್ಥಗಿತವಾಗುವ ಎಲ್ಲಾ ಲಕ್ಷಣಗಳು ಎದ್ದುಕಾಣುತ್ತಿವೆ.

ಮಳೆ ಹೆಚ್ಚಾಗಿ ರಸ್ತೆ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಶಾಲೆಗೆ ಹಲವು ಮಕ್ಕಳು ಹಾಜರಾಗಿಲ್ಲ ಎಂದು ಗೋಪಿನಾಥಂ ಗ್ರಾಮದ ಸ್ಥಳೀಯರು ತಿಳಿಸಿದ್ದಾರೆ. ಹಳ್ಳ, ಕೊಳ್ಳಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಮಕ್ಕಳು ಅತಂಕಕ್ಕೆ ಒಳಗಾಗಿ ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಮಳೆ ಅಬ್ಬರದ ಭಯದಿಂದ ಪೋಷಕರು ಕೂಡ ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ತಿರಸ್ಕರಿಸುತ್ತಿದ್ದಾರೆ.
ಮತ್ತೊಂದೆಡೆ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳಲ್ಲಿ ಒಂದಾದ ಹೊಗೆನಕಲ್ ಜಲಪಾತದಲ್ಲಿ ನೀರಿನ ರಭಸ ಹೆಚ್ಚಾದ ಹಿನ್ನೆಲೆಯಲ್ಲಿ ಮೊಸಳೆಯೊಂದು ದರ್ಶನ ನೀಡಿದೆ. ಭಾರೀ ಗಾತ್ರದ ಮೊಸಳೆಯೊಂದು ದಡದಲ್ಲಿ ಬಂದು ಠಿಕಾಣಿ ಹೂಡಿದ್ದ ವಿಡಿಯೋವೊಂದನ್ನು ಸ್ಥಳೀಯರು ಸೆರೆ ಹಿಡಿದಿದ್ದಾರೆ.

ಇನ್ನು ಚಾಮರಾಜನಗರ ಜಿಲ್ಲೆಯ ಹಲವೆಡೆ ಬೆಳಗ್ಗೆಯಿಂದಲೂ ಬಿಟ್ಟು ಬಿಡದೇ ಜೋರಾಗಿ ಮಳೆಯಾಗುತ್ತಿದ್ದು, ಕೊಳ್ಳೇಗಾಲದ 7-8 ಊರುಗಳು ಮತ್ತೇ ನೆರೆ ಭೀತಿಯಲ್ಲಿವೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜಿಲ್ಲೆಯಲ್ಲಿ ಹಲವು ಗ್ರಾಮಗಳ ಜನರಿಗೆ ಆತಂಕ ಶುರುವಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications