• search
  • Live TV
ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಲೆ ಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಸಿಎಂ ಭರವಸೆ

|

ಚಾಮರಾಜನಗರ, ನವೆಂಬರ್ 26: ಜಿಲ್ಲೆಯ ಮಲೆಮಹದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಯಡಿಯೂರಪ್ಪನವರು, ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದ ಸಭಾಂಗಣದಲ್ಲಿ ಪ್ರಾಧಿಕಾರದ ಸಭೆ ನಡೆಸಿದರು. ಈ ಸಂದರ್ಭ ಮಾತನಾಡಿದ ಅವರು, "ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಪ್ರಾಧಿಕಾರದ ಸಭೆಯಲ್ಲಿ ಸವಿಸ್ತಾರವಾಗಿ ಚರ್ಚಿಸಲಾಗಿದೆ. ಮಲೆ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಾಧಿಕಾರದ ವತಿಯಿಂದ 15 ಶಾಲೆಗಳನ್ನು ಗುರುತಿಸಲಾಗಿದೆ. ಈ ಶಾಲೆಗಳನ್ನು ದತ್ತು ತೆಗೆದುಕೊಂಡು ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಿ ಶಾಲೆಗಳ ಸರ್ವಾಂಗೀಣ ಪ್ರಗತಿಗೆ ಒತ್ತು ನೀಡಲಾಗುವುದು" ಎಂದು ತಿಳಿಸಿದರು.

ನ.25 ರಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪನ.25 ರಂದು ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಲಿರುವ ಸಿಎಂ ಯಡಿಯೂರಪ್ಪ

ಕ್ಷೇತ್ರದ ಅಭಿವೃದ್ಧಿಗೆ ಹಾಗೂ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಮಾಡಿಕೊಡಲಾಗುವುದು. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ತಿಳಿಸಿದ್ದಾರೆ.

ಪ್ರಾಧಿಕಾರದ ಸಭೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಧಾರ್ಮಿಕ ಮತ್ತು ಧರ್ಮದಾಯ ದತ್ತಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್, ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿಗಳು, ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ, ಶಾಸಕ ಆರ್ ನರೇಂದ್ರ, ಎನ್ ಮಹೇಶ್, ಸಿ.ಪುಟ್ಟರಂಗಶೆಟ್ಟಿ, ಸಿ.ಎಸ್.ನಿರಂಜನ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಮಲೆ ಮಹದೇಶ್ವರ ಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರು ಇದ್ದರು.

English summary
Chief Minister BS Yediyurappa said that the government is committed to the overall development of the Male mahadeshwara constituency in Chamarajanagar district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X