Cauvery Dispute: ಸರ್ಕಾರಗಳು ತಮಿಳುನಾಡಿಗೆ ಮಾರಾಟವಾಗಿವೆ: ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳ ಆಕ್ರೋಶ

ಚಾಮರಾಜನಗರ, ಸೆಪ್ಟೆಂಬರ್‌, 07: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯಾದ್ಯಂತ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಅದೇ ರೀತಿ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಕನ್ನಡಪರ ಸಂಘಟನೆಗಳ ಒಕ್ಕೂಟವು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದೆ

ಕನ್ನಡಪರ ಸಂಘಟನೆಗಳ ಒಕ್ಕೂಟವು ಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಭುವನೇಶ್ವರಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದು, ಈ ವೇಳೆ ಕಾವೇರಿಯನ್ನು ತಮಿಳುನಾಡಿಗೆ ಹರಾಜು ಹಾಕಿದ್ದಾರೆ. ಅಲ್ಲದೆ ಸರ್ಕಾರಗಳು ತಮಿಳುನಾಡಿಗೆ ಹರಾಜಾಗಿವೆ ಎಂದು ಘೋಷಣೆ ಕೂಗುವ ಮೂಲಕ ತಮಟೆ ಬಾರಿಸಿ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

governments-sold-out-to-tamil-nadu

ಚಡ್ಡಿ ಮೆರವಣಿಗೆ ನಡೆಸಿ ಆಕ್ರೋಶ

ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ. ಅಲ್ಲದೆ ಮತ್ತೊಂದೆಡೆ ಕಾವೇರಿ ಕೊಳ್ಳದ ಜಲಾಶಯದ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪಟ್ಟಿಯಂತಹ ಚಡ್ಡಿ ಧರಿಸಿ ಖಾಲಿ ಬಿಂದಿಗೆಯೊಂದಿಗೆ ಬೀದಿಗಿಳಿದ ಕಾರ್ಯಕರ್ತರು ರಾಜ್ಯ ಸರ್ಕಾರ, ಶಾಸಕರು, ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರ ವಿರುದ್ಧವೂ ಘೋಷಣೆ ಕೂಗಿದ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪರ ಕಾರ್ಯಕರ್ತರು ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ವತಿಯಿಂದ ಸರ್ ಎಂ.ವಿ. ಪ್ರತಿಮೆ ಬಳಿ ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ತೆರಳಿ ಚಳವಳಿಯಲ್ಲಿ ಪಾಲ್ಗೊಂಡರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕಾವೇರಿ ಕಣಿವೆ ಜಿಲ್ಲೆಗಳ ರೈತರ ಹಿತ ಕಾಪಾಡಲು ಒತ್ತಾಯಿಸಿದರು.

ಕಾವೇರಿ ಕೊಳ್ಳದ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು. ಈಗಾಗಲೇ ನೆರೆ ರಾಜ್ಯಕ್ಕೆ ಕೆ.ಆರ್.ಎಸ್.ನಲ್ಲಿದ್ದ ನೀರು ಹರಿದುಹೋಗಿದ್ದು, ಇದಿರಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಮಂಡ್ಯ ಜಿಲ್ಲೆಗೆ 100 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ರೈತರ ಬೆಳೆಗೆ ನೀರಿಲ್ಲದಂತೆ ಮಾಡಿರುವ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು ಎಂದು ಆಗ್ರಹಿಸಿದರು.

ಈ ವೇಳೆ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಗುತ್ತಲು ಚಂದ್ರು, ಜಯಮ್ಮ, ದರ್ಶನ್, ರಾಜೇಶ್, ನಂದೀಶ್ ಸೇರಿದಂತೆ ಮತ್ತಿತರರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+