ಗುಂಡ್ಲುಪೇಟೆಯ ಬೇಗೂರಿನಲ್ಲಿ ಕೈ-ಕಮಲ ಕಾರ್ಯಕರ್ತರ ಸಂಘರ್ಷ

By: ಚಾಮರಾಜನಗರ ಪ್ರತಿನಿಧಿ
Subscribe to Oneindia Kannada

ಗುಂಡ್ಲುಪೇಟೆ, ಏಪ್ರಿಲ್ 9: ಗುಂಡ್ಲುಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ ಇಂದು ಮತದಾನ ನಡೆಯುತ್ತಿದ್ದು, ಈ ವೇಳೆ ಬೇಗೂರು ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯರ್ತರ ನಡುವೆ ಸಂಘರ್ಷ ನಡೆದಿದೆ.[ನಂಜನಗೂಡಲ್ಲಿ ಗೊಂದಲ ಮೂಡಿಸಿದ ಚುನಾವಣಾ ಆಯೋಗದ ಸುತ್ತೋಲೆ]

ಮತಗಟ್ಟೆ ಬಳಿ ನಿಂತುಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರ ಮಧ್ಯೆ ಜಗಳ ಆರಂಭವಾಗಿದ್ದು, ಎರಡೂ ಪಕ್ಷದ ಕಾರ್ಯಕರ್ತರು ಕೈ ಕೈ ಮಿಲಾಯಿಸೋ ಹಂತಕ್ಕೆ ತಲುಪಿತ್ತು. ಮತದಾನ ಕೇಂದ್ರದ 100 ಮೀಟರ್ ಒಳಗೆಯೇ ಗಲಾಟೆ ನಡೆದಿದ್ದರಿಂದ ತಕ್ಷಣವೇ ಪೊಲೀಸರು ಹಾಗೂ ಅರೆಸೇನಾ ಪಡೆಗಳು ಮಧ್ಯಪ್ರವೇಶಿಸಿ ಕಾರ್ಯಕರ್ತರನ್ನು ಚದುರಿಸಿದ್ದಾರೆ.

Guadalupet by- election: Clash between BJP and Congress workers in Begur

ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.[ನಂಜನಗೂಡು: ಮಹದೇವನಗರದ 700 ನಿವಾಸಿಗಳಿಂದ ಮತದಾನ ಬಹಿಷ್ಕಾರ]

Guadalupet by- election: Clash between BJP and Congress workers in Begur

ಸಹಕಾರಿ ಸಚಿವ ಮಹದೇವ ಪ್ರಸಾದ್ ಅವರ ಅಕಾಲಿಕ ನಿಧನದಿಂದ ಗುಂಡ್ಲುಪೇಟೆಯಲ್ಲಿ ಉಪಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ಸಿನಿಂದ ಗೀತಾ ಮಹದೇವ ಪ್ರಸಾದ್ ಹಾಗೂ ಬಿಜೆಪಿಯಿಂದ ನಿರಂಜನ್ ಕುಮಾರ್ ಕಣದಲ್ಲಿದ್ದು ಒಟ್ಟು ಏಳು ಮಂದಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A clash between Congress and BJP workers erupted in Beguru village of Guadalupet on the day of by-poll voting. Police entered the situation and make clear all conflicts. Voting is underway with police security.
Please Wait while comments are loading...