ನೀತಿ ಸಂಹಿತೆ ಉಲ್ಲಂಘನೆ, ಈಶ್ವರಪ್ಪ ವಿರುದ್ಧ ಎಫ್ಐಆರ್
ಗುಂಡ್ಲುಪೇಟೆ ಉಪ ಚುನಾವಣಾ ಪ್ರಚಾರದ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಹಾಗೂ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪದಲ್ಲಿ ಅವರ ಮೇಲೆ ಎಫ್ಐಆರ್ ದಾಖಲಾಗಿದೆ.
ಚಾಮರಾಜನಗರ, ಏಪ್ರಿಲ್ 2: ಗುಂಡ್ಲುಪೇಟೆ ಉಪ ಚುನಾವಣಾ ಪ್ರಚಾರದ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಹಾಗೂ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪದಲ್ಲಿ ಅವರ ಮೇಲೆ ಎಫ್ಐಆರ್ ದಾಖಲಾಗಿದೆ.
ಗುಂಡ್ಲುಪೇಟೆ ತಾಲ್ಲೂಕು ಚಿಕ್ಕಾಟಿ ಗ್ರಾಮದಲ್ಲಿ ಮಾ.30 ರಂದು ಕೆ.ಎಸ್. ಈಶ್ವರಪ್ಪ ಪ್ರಚಾರ ಭಾಷಣ ಮಾಡಿದ್ದರು. ಈ ಸಂದರ್ಭ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಹೇಳಿ ಇಲ್ಲಿನ ಸೆಕ್ಟರ್ ಅಧಿಕಾರಿ ಸಿಡಿ ಸಹಿತ ದೂರು ನೀಡಿದ್ದರು. ಈ ದೂರನ್ನಾಧರಿಸಿ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗಿದೆ.[ಗುಂಡ್ಲುಪೇಟೆ: ಸಚಿವ ಯು.ಟಿ.ಖಾದರ್ ವಿರುದ್ಧ ಎಫ್‍ಐಆರ್]

ಈಶ್ವರಪ್ಪ ವಿರುದ್ಧ ದೂರು ದಾಖಲಾಗಿದ್ದನ್ನು ಚುನಾವಣಾಧಿಕಾರಿ ನಲಿನ್ ಅತುಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.[ಕಾಂಗ್ರೆಸ್ ನಿಂದ ಹಣ ಪಡೀರಿ, ಲಿಂಗಾಯಿತ್ರ ಮನೆಗೆ ಹೋಗ್ಬೇಡಿ: ಈಶ್ವರಪ್ಪ]
ಇದೇ ವೇಳೆ ಗುಂಡ್ಲುಪೇಟೆ ತಾಲ್ಲೂಕು ಹಂಗಳ ಗ್ರಾಮದ ವೆಂಕಟೇಶ್ವರ ವೈನ್ಸ್ ರವರು ನಿಷೇಧಿತ ಪ್ರದೇಶದಲ್ಲಿ ಮದ್ಯ ಸೇವಿಸಲು ಅವಕಾಶ ನೀಡಿದ್ದಾರೆ ಎಂಬ ಬಗ್ಗೆಯೂ ದೂರು ದಾಖಲಾಗಿದೆ.












Click it and Unblock the Notifications