ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗುಂಡ್ಲುಪೇಟೆ: ವಿ. ಸೋಮಣ್ಣ ಕಪಾಳಮೋಕ್ಷ, ಸಚಿವರು ಹಲ್ಲೆ ಮಾಡಿಲ್ಲ ಎಂದ ಮಹಿಳೆ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಅಕ್ಟೋಬರ್‌, 23: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಮಹಿಳೆಗೆ ಸಚಿವ ವಿ.ಸೋಮಣ್ಣ ಕಪಾಳಮೋಕ್ಷ ಮಾಡಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಈ ಘಟನೆ ಅಕ್ಟೋಬರ್‌ 22ರಂದು ಸಂಜೆ ನಡೆದಿದೆ. ಗ್ರಾಮದಲ್ಲಿ 175 ಜನರಿಗೆ ನಿವೇಶನ ಹಕ್ಕುಪತ್ರ ವಿತರಣೆ ಕಾರ್ಯಕ್ರಮವನ್ನು ನಿಗದಿ ಮಾಡಲಾಗಿತ್ತು. ತನ್ನ ಸಮಸ್ಯೆ ಹೇಳಿಕೊಳ್ಳಲು ಮಹಿಳೆಯೋರ್ವರು ಸಚಿವರ ಬಳಿ ತೆರಳಿದ್ದರು. ಈ ಸಂದರ್ಭದಲ್ಲಿ ಸಚಿವ ವಿ.ಸೋಮಣ್ಣ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ಇದೀಗ ಸ್ಪಷ್ಟನೆ ನೀಡಿದ ಮಹಿಳೆ ಕೆಂಪಮ್ಮ ನನಗೆ ಸಚಿವರು ಕಪಾಳಮೋಕ್ಷ ಮಾಡಿಲ್ಲ ಎಂದಿದ್ದಾರೆ.

ಈ ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ನಂತರ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮಹಿಳೆಗೆ ಗೌರವ ನೀವು ಕೊಡುವು ಹೀಗೇನಾ? ಎಂದು ವಿಪಕ್ಷಗಳು ಪ್ರಶ್ನೆ ಮಾಡಿದ್ದವು.

ವಿ. ಸೋಮಣ್ಣ ಪ್ರತಿಷ್ಠಾನದ ವತಿಯಿಂದ 'ವಿಜಯ ಪಥ' ಗ್ರಂಥದ ಲೋಕಾರ್ಪಣೆವಿ. ಸೋಮಣ್ಣ ಪ್ರತಿಷ್ಠಾನದ ವತಿಯಿಂದ 'ವಿಜಯ ಪಥ' ಗ್ರಂಥದ ಲೋಕಾರ್ಪಣೆ

ಸಚಿವರ ಕೊಟ್ಟ ಸ್ಪಷ್ಟನೆ ಏನು?

ಘಟನೆ ಬಗ್ಗೆ ಮಾತನಾಡಿದ ವಿ ಸೋಮಣ್ಣ, ನಿನ್ನೆ 173 ಜನರಿಗೆ ನಿವೇಶನ ಹಂಚಿಕೆ ಮಾಡಲಾಗಿತ್ತು. ಇನ್ನು 9-10 ನಿವೇಶನಗಳಿದ್ದು, ಸುಮಾರು 25 ಜನರು ಅವುಗಳನ್ನು ಕೇಳುತ್ತಿದ್ದಾರೆ. ಈ ಮಹಿಳೆ ಐದಾರು ಬಾರಿ ಕಾಲಿಗೆ ನಮಸ್ಕಾರ ಮಾಡಿದರು. ನಾಲ್ಕೂವರೆ ಸಾವಿರ ರೂಪಾಯಿ ಯಾರಿಗೋ ಕೊಟ್ಟಿದ್ದೀನಿ ಅಂದರು. ಆ ವೇಳೆ ನಾನೇ ಹಣ ನೀಡಿದೆ. ನಾನು ಎಲ್ಲಾ ಹೆಣ್ಣು ಮಕ್ಕಳನ್ನು ಸೋದರಿಯ ಭಾವನೆಯಲ್ಲಿ ನೋಡುತ್ತೇನೆ. ಒಂದು ವೇಳೆ ಈ ಘಟನೆ ನಡೆದಿದ್ದರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಕಾಲಿಗೆ ಬೀಳಲು ಬಂದಾಗ ತಡೆಯಲು ಹೋದಾಗ ಕೈ ತಾಗಿದೆಯೇ ಹೊರತು ಹೊಡೆದಿಲ್ಲ ಎಂದು ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದರು.

Gundlupet; Woman clarifies Minister V. Somanna didnt slap her

ಸಚಿವರು ಕಪಾಳಮೋಕ್ಷ ಮಾಡಿಲ್ಲ -ಮಹಿಳೆ

ಇದೇ ವೇಳೆ ಮಾತನಾಡಿದ ಮಹಿಳೆ, ನನ್ನ ಮೇಲೆ ಹಲ್ಲೆ ಆಗಿಲ್ಲ. ನಾನು ಕಾಲಿಗೆ ನಮಸ್ಕಾರ ಮಾಡಲು ಹೋದಾಗ ಸಚಿವರು ತಡೆದರು. ನನ್ನ ಮೇಲೆ ಯಾರೂ ಒತ್ತಡ ಹಾಕಿಲ್ಲ. ನನಗೆ ಸಚಿವರು ಹೊಡೆದಿಲ್ಲ, ತಾನು ಭಾವುಕಳಾದಾಗ ಸಚಿವ ಸೋಮಣ್ಣ ನನ್ನನ್ನು ಸಮಾಧಾನಪಡಿಸಿದರು. ಪದೇಪದೆ ಸಚಿವರ ಕಾಲಿಗೆ ನಮಸ್ಕರಿಸುತ್ತಿದ್ದಾಗ ಬೇಡ ಎಂದು ತಿಳಿಸಿದರು. ಆ ಸಂದರ್ಭದಲ್ಲಿ ಸ್ವಲ್ಪ ಹೊತ್ತು ಭಾವುಕಳಾದೆ. ತಕ್ಷಣವೇ ಸಚಿವರು ಕೆಂಪಮ್ಮನನ್ನು ಸಮಾಧಾನಪಡಿಸಿ ನಿನಗೆ ವಸತಿ ಕಲ್ಪಿಸಿ ಕೊಡುತ್ತೇನೆ ಎಂದು ಸೂಚಿಸಿದರು. ಅವರು ತನಗೆ ಒಳ್ಳೆಯದು ಮಾಡಿದ್ದಾರೆಯೇ ಹೊರತು ಕೆಟ್ಟದ್ದನ್ನು ಮಾಡಿಲ್ಲ ಎಂದು ಹೇಳಿಕೆ ಮೂಲಕ ಸ್ಪಷ್ಟಪಡಿಸಿದ್ದಾರೆ.

English summary
News spread Minister V. Somanna slapped woman come to complain about her problem in Hangala village of Gundlupet taluk on Saturday. Now woman clarified minister has not slapped her, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X