ಗುಂಡ್ಲುಪೇಟೆ: ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸಾವು
ಚಾಮರಾಜನಗರ, ಜನವರಿ, 30: ಜಮೀನಿನಲ್ಲಿ ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನಲ್ಲಿನ ಮಡಹಳ್ಳಿ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.
ಮಡಹಳ್ಳಿ ಗ್ರಾಮದ ಮಾದಪ್ಪ(53) ಮೃತ ವ್ಯಕ್ತಿಯಾಗಿದ್ದು, ಈತ ಮಡಹಳ್ಳಿಯ ಚೇತನ ಎಂಬುವವರ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಉಳುಮೆ ಮಾಡುತ್ತಿದ್ದ ವೇಳೆ ತಿರುವಿನಲ್ಲಿ ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರಾಕ್ಟರ್ ಕೆಳಗೆ ಚಾಲಕ ಸಿಲುಕಿ ಹಾಕಿಕೊಂಡ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಮಾಹಿತಿ ಅರಿತ ಸುತ್ತಮುತ್ತಲಿನ ಜಮೀನು ಮಾಲೀಕರು ಹಾಗೂ ರೈತರು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಚಾಲಕನನ್ನು ಟ್ರ್ಯಾಕ್ಟರ್‌ನಿಂದ ಹೊರ ತೆಗೆದರು ಕೂಡ ಯಾವುದೇ ಪ್ರಯೋಜನವಾಗಲಿಲ್ಲ.

ಘಟನೆ ಅರಿತ ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಚಾಲಕನ ಮೃತ ದೇಹವನ್ನು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಂತರ ಟ್ರಾಕ್ಟರ್ ಅನ್ನು ವಶಕ್ಕೆ ಪಡೆದ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು
ಚಲಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿಯಾದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಅಸುನೀಗಿದ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ಡೆದಿದೆ.
ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಲಂಬಾಣಿಹಟ್ಟಿ ಸಮೀಪದ ಈ ಅವಘಡ ಸಂಭವಿಸಿದೆ. ಮೃತರನ್ನು ಚಳ್ಳಕೆರೆಯ ವೆಂಕಟೇಶ( 57 ), ಚಿತ್ರಯ್ಯನಟ್ಟಿ ವೆಂಕಟೇಶ್ (55 ) ಎಂದು ಗುರುತಿಸಲಾಗಿದೆ. ಇನ್ನು ಕಿಶೋರ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಚಿಕಿತ್ಸೆಗಾಗಿ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಟಿವಿ ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.












Click it and Unblock the Notifications