ಹನೂರು: ಚರ್ಚ್‌ನಲ್ಲಿ ನೂರಾರು ಮಂದಿ ಕ್ರೈಸ್ಥರಿಂದ ಆಯುಧ ಪೂಜೆ ಸಂಭ್ರಮ
ಚಾಮರಾಜನಗರ, ಅಕ್ಟೋಬರ್, 23: ಕ್ರೈಸ್ತ ಸಮುದಾಯದವರು ಹಿಂದೂಗಳ ಪವಿತ್ರ ಆಚರಣೆಯಾದ ಆಯುಧ ಪೂಜೆಯನ್ನು ಮಾಡುವ ಮೂಲಕ ಗಮನ ಸೆಳೆದ ಘಟನೆ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾರ್ಟಳ್ಳಿ ಗ್ರಾಮದಲ್ಲಿ ಕ್ರೈಸ್ತ ಸಮುದಾಯವರೇ ಅಧಿಕ ಸಂಖ್ಯೆಯಲ್ಲಿದ್ದು, ಇಂದು ವಾಹನಗಳನ್ನು ಶುಚಿಗೊಳಿಸಿ, ಅಲಂಕೃತಗೊಳಿಸಿ ಚರ್ಚ್‌ಗೆ ಕೊಂಡೊಯ್ದು ಆಯುಧ ಪೂಜೆ ನೆರವೇರಿಸಿದ್ದಾರೆ. ಅಲ್ಲಿನ ಪಾದ್ರಿ ಪ್ರಾರ್ಥನೆ, ಶುಭ ಸಂದೇಶ ತಿಳಿಸಿ ಪವಿತ್ರ ಜಲವನ್ನು ನೂರಾರು ವಾಹನಗಳಿಗೆ ಪ್ರೋಕ್ಷಣೆ ಮಾಡಿ ಯಾವುದೇ ಅಪಘಾತಗಳಾಗದಿರಲಿ, ಶುಭ-ಲಾಭ ತರಲಿ ಎಂದು ಹಾರೈಸಿದ್ದಾರೆ.

ಹಿಂದಿನ ತಲೆಮಾರುಗಳಲ್ಲಿ ಇವರು ಹಿಂದೂಗಳೇ ಆಗಿದ್ದರಿಂದ ಅಂದು ನಡೆಸಿದ್ದ ಸಂಪ್ರದಾಯವನ್ನು ಮತ ಬದಲಿಸಿದ ನಂತರವೂ ಉಳಿಸಿಕೊಂಡು ಬಂದಿದ್ದಾರೆ.
ದಸರಾ ವಜ್ರಮುಷ್ಠಿ ಕಾಳಗದಲ್ಲಿ ರಕ್ತ ಚಿಮ್ಮಿಸಲಿರುವ ಜಟ್ಟಿಗಳು
ಮೈಸೂರು ದಸರಾದ ಜಂಬೂಸವಾರಿಯ ದಿನದಂದು ಅಂಬಾವಿಲಾಸ ಅರಮನೆಯ ಕರಿಕಲ್ಲುತೊಟ್ಟಿಯಲ್ಲಿ ಜಟ್ಟಿಗಳು ವಜ್ರಮುಷ್ಠಿ ಕಾಳಗ ಮಾಡುವುದರೊಂದಿಗೆ ವಿಜಯದಶಮಿಯ ಕಾರ್ಯಕ್ರಮಗಳು ಆರಂಭವಾಗುವುದು ಸಂಪ್ರದಾಯವಾಗಿದೆ. ಹೀಗಾಗಿ ವಜ್ರಮುಷ್ಠಿ ಕಾಳಗ ನಡೆಸಲು ಜಟ್ಟಿಗಳ ಎರಡು ಜೋಡಿಯನ್ನು ಕಟ್ಟಲಾಗಿದೆ.
ಅಕ್ಟೋಬರ್ 24ರಂದು ನಡೆಯುವ ವಜ್ರಮುಷ್ಠಿ ಕಾಳಗದಲ್ಲಿ ಮೈಸೂರಿನ ಉಸ್ತಾದ್ ಬಾಲಾಜಿ ಅವರ ಶಿಷ್ಯ ಎಸ್.ಪ್ರದೀಪ್ ಜಟ್ಟಿ ಮತ್ತು ಚನ್ನಪಟ್ಟಣದ ಉಸ್ತಾದ್ ಪುರುಷೋತ್ತಮ್ ಜಟ್ಟಿ ಶಿಷ್ಯ ಪ್ರವೀಣ್ ಜಟ್ಟಿಯನ್ನು ಜೋಡಿ ಹಾಗೂ ಚಾಮರಾಜನಗರದ ಉಸ್ತಾದ್ ಬಂಗಾರ ಜಟ್ಟಿ ಶಿಷ್ಯ ವೆಂಕಟೆಶ್ ಜಟ್ಟಿ ಮತ್ತು ಬೆಂಗಳೂರಿನ ಬೆಂಗಳೂರಿನ ಉಸ್ತಾದ್ ಕೃಷ್ಣ ಜಟ್ಟಿ ಶಿಷ್ಯ ಬಂಗಾರ ಪ್ರಮೋದ್ ಅವರನ್ನು ಜೋಡಿಯನ್ನು ಕಟ್ಟಲಾಗಿದೆ.
ಅಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬನ್ನಿಮರಕ್ಕೆ ಪೂಜೆ ಸಲ್ಲಿಸುವ ಮುನ್ನ ಕಾಳಗ ನಡೆಯಲಿದೆ. ಕಾಳಗಕ್ಕೆ ಮುನ್ನ ಕೇಶಮುಂಡನ ಮಾಡಿಸಿಕೊಂಡು, ಮೈ ತುಂಬಾ ಕೆಂಪು ಮಣ್ಣು ಬಳಿದುಕೊಂಡ ಜಟ್ಟಿಗಳ ಜೋಡಿ ಕುಲದೇವತೆ ನಿಂಬುಜಾಂಬೆಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಅರಮನೆ ಕರಿಕಲ್ಲುತೊಟ್ಟಿಯಲ್ಲಿ ಸಿದ್ಧಗೊಂಡ ಅಖಾಡದಲ್ಲಿ ವಜ್ರನಖ ಎಂಬ ಹರಿತವಾದ ಆಯುಧ ಧರಿಸಿ ಕಾದಾಡಲಿದ್ದಾರೆ. ಅಲ್ಲದೆ ಜಟ್ಟಿಯ ಮೈಯಿಂದ ರಕ್ತ ಚಿಮ್ಮಿದ ಕೂಡಲೇ ಕಾದಾಟ ಅಂತ್ಯಗೊಳ್ಳಲಿದೆ.
ಇನ್ನು ವಜ್ರಮುಷ್ಠಿ ಕಾಳಗದ ಕುರಿತಂತೆ ಇತಿಹಾಸದ ಪುಟಗಳನ್ನು ತಿರುವಿ ನೋಡಿದರೆ ವಿಜಯದ ಸಂಕೇತವಾಗಿ ಆಚರಣೆ ಮಾಡಿಕೊಂಡು ಬರುತ್ತಿರುವುದು ಸಂಪ್ರದಾಯವಾಗಿದೆ. ಮೈಸೂರು ಮಹಾರಾಜರು ಕುಸ್ತಿಯಲ್ಲಿ ಪ್ರಾವಿಣ್ಯತೆ ಹೊಂದಿದ್ದರಲ್ಲದೆ, ಕುಸ್ತಿಯನ್ನು ಪ್ರೋತ್ಸಾಹಿಸುತ್ತಿದ್ದರು. ತಮ್ಮ ಆಸ್ಥಾನದಲ್ಲಿ ಜಗಜಟ್ಟಿಗಳನ್ನಿಟ್ಟುಕೊಂಡಿದ್ದ ಮಹಾರಾಜರು ಅವರಿಗೆ ಕುಸ್ತಿ ಪಂದ್ಯಾವಳಿಗಳನ್ನು ಏರ್ಪಡಿಸಿ ಗೆದ್ದವರಿಗೆ ಸನ್ಮಾನ ಮಾಡಿ ಪ್ರೋತ್ಸಾಹಿಸುತ್ತಿದ್ದರಂತೆ. ಬಹಳಷ್ಟು ಪರಾಕ್ರಮ ಮೆರೆದ ಜಟ್ಟಿಗಳು ಆಸ್ಥಾನದಲ್ಲಿದ್ದರು.
ವಜ್ರಮುಷ್ಠಿ ಕಾಳಗ ಹೇಗೆ ರೂಢಿಗೆ ಬಂತು ಎಂಬುವುದನ್ನು ನೋಡುವುದಾದರೆ, ಮೈಸೂರು ಒಡೆಯರ್ ದುರ್ಗಾ ಮಾತೆಯ ಶಾಂತಿಗಾಗಿ ನವರಾತ್ರಿ ಸಂದರ್ಭ ಈ ಆಚರಣೆಯನ್ನು ಜಾರಿಗೆ ತಂದರು ಎಂದು ಹೇಳಲಾಗುತ್ತದೆ. ಇದು ಎಲ್ಲರಿಗೂ ಸಾಧ್ಯವಿಲ್ಲ. ಇದು ಇತರೆ ಕುಸ್ತಿಗಿಂತ ಅಪಾಯಕಾರಿ. ತಲೆಬೋಳಿಸಿ ದೃಢಕಾಯವಾಗಿರುವ ಅನುಭವಿ ವಸ್ತಾದ್ ತನ್ನ ಬಲಗೈಗೆ (ಆನೆದಂತ ಅಥವಾ ಸಾರಂಗದ ಕೊಂಬಿನಿಂದ ತಯಾರಿಸಿದ ಆಯುಧ) ವಜ್ರನಖವನ್ನು ಹಿಡಿದು ಎಡಗೈಗೆ ಬಟ್ಟೆ ಕಟ್ಟಿಕೊಂಡಿರುತ್ತಾನೆ.
ಇಂತಹ ನಾಲ್ವರು ಅಖಾಡದಲ್ಲಿ ಸೆಣೆಸಾಡುತ್ತಾರೆ. ತನ್ನ ಬಳಿಯಿರುವ ವಜ್ರನಖದಿಂದ ಎದುರಾಳಿಯ ಮೇಲೆ ಹೋರಾಡಬೇಕು. ಹೊಡೆತವನ್ನು ಕೂಡ ಆತನ ತಲೆ ಮೇಲೆಯೇ ಹೊಡೆಯಬೇಕು. ಹೀಗೆ ಹೊಡೆದ ಏಟು ತಲೆಗೆ ತಾಗಿ ರಕ್ತ ಚಿಮ್ಮಿದರೆ ಆತ ಸೋತ ಎಂದರ್ಥ. ಈ ಒಂದು ದಿನದ ಕಾಳಗಕ್ಕಾಗಿ ಜಟ್ಟಿಗಳು ಆರು ತಿಂಗಳಿನಿಂದ ತಾಲೀಮು ನಡೆಸುವುದರೊಂದಿಗೆ ಕಟ್ಟುನಿಟ್ಟಿನ ವ್ರತವನ್ನು ಸುಮಾರು ಒಂಬತ್ತು ದಿನಗಳ ಕಾಲ ಮಾಡುವುದು ವಿಶೇಷವಾಗಿದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications