ಹನೂರು: ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ: 2.53 ಕೋಟಿ ರೂ. ಸಂಗ್ರಹ

ಚಾಮರಾಜನಗರ, ಮೇ, 31: ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಮಂಗಳವಾರ ನಡೆದ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ 2.53 ಕೋಟಿ ರೂಪಾಯಿ ಸಂಗ್ರಹವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್‌ನಲ್ಲಿ ಹುಂಡಿ ಎಣಿಕೆ ಕಾರ್ಯವನ್ನು ಪ್ರಾರಂಭ ಮಾಡಲಾಯಿತು. ಈ ಎಣಿಕೆ ಕಾರ್ಯವು ರಾತ್ರಿ 10 ಗಂಟೆಯವರೆಗೂ ನಡೆಯಿತು.

Hanur: Hundi count in Male Mahadeshwara Hills: Rs 2.53 crore money Collection

ಈ ಬಾರಿ ಅಮಾವಾಸ್ಯೆ, ವಿಶೇಷ ದಿನಗಳಲ್ಲಿ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಸಾವಿರರು ಜನರು ಮಾದಪ್ಪನ ದರ್ಶನಕ್ಕೆ ಆಗಮಿಸಿದ್ದರು. ಅಲ್ಲದೆ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಹಾಗೂ ವಿಧಾನಸಭಾ ಚುನಾವಣೆಯಿದ್ದ ಹಿನ್ನೆಲೆ ಕಳೆದ 32 ದಿನಗಳ ಅವಧಿಯಲ್ಲಿ 2.53,58,519 ರೂಪಾಯಿ ಹಣ, 65 ಗ್ರಾಂ ಚಿನ್ನ ಹಾಗೂ 3.358 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.

ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪಕಾರ್ಯದರ್ಶಿ ಬಸವರಾಜು, ದ್ವಿತೀಯ ದರ್ಜೆ ಸಹಾಯಕ ಸರಗೂರು ಮಹದೇವಸ್ವಾಮಿ ಬ್ಯಾಂಕ್ ಆಫ್ ಬರೋಡದ ವ್ಯವಸ್ಥಾಪಕರು, ಮಲೆಮಹದೇಶ್ವರ ಬೆಟ್ಟದ ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+