ಹನೂರು: ಮಾದಪ್ಪನ ದರ್ಶನ ಪಡೆದು ಜನರೆದುರೇ ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಆಘಾತಕಾರಿ ಆತ್ಮಹತ್ಯೆ ಯತ್ನ ಪ್ರಕರಣ ನಡೆದಿದೆ. ಇದನ್ನು ನೋಡಿದ ಭಕ್ತಾದಿಗಳು ಬೆಚ್ಚಿ ಬಿದ್ದಿದ್ದಾರೆ.
ಚಾಮರಾಜನಗರ, ಫೆಬ್ರವರಿ, 20: ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಆಘಾತಕಾರಿ ಆತ್ಮಹತ್ಯೆ ಯತ್ನ ಪ್ರಕರಣ ನಡೆದಿದ್ದು, ಇದನ್ನು ನೋಡಿದ ಭಕ್ತಾದಿಗಳು ಬೆಚ್ಚಿ ಬಿದ್ದಿದ್ದಾರೆ.
ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ನಾಗಮಲೆ ಎಂಬಲ್ಲಿ ಬಂಡೆ ಮೇಲಿಂದ ಹಾರಿ ಬೆಂಗಳೂರಿನ ಕೆಂಗೇರಿಯ ಶ್ರೀನಿಧಿ ಎಂಬ ಯುವಕ ಆತ್ಮಹತ್ಯೆ ಯತ್ನ ಮಾಡಿಕೊಂಡಿದ್ದಾನೆ. ನಾಗಮಲೆಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಭಕ್ತರೊಟ್ಟಿಗೆ ಸೇರಿಕೊಂಡ ಶ್ರೀನಿಧಿ ತನ್ನ ತಾಯಿಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡಿದ್ದಾನೆ. ನಂತರ ಹರಕೆ ಘಂಟೆಯನ್ನು ದೇವರಿಗೆ ಅರ್ಪಿಸಿದ್ದಾರೆ. ಇನ್ನೇನು ಪೂಜೆ ಸಲ್ಲಿಸಿ ಹಿಂತಿರುಗುವಾಗ ಬಂಡೆಯೊಂದರ ಮೇಲೆ ಹತ್ತಿ ಜಿಗಿದಿದ್ದಾನೆ ಎಂದು ಪ್ರತ್ಯೇಕ್ಷದರ್ಶಿಗಳು ತಿಳಿಸಿದ್ದಾರೆ. ಗಾಯಗೊಂಡ ಆತನನ್ನು ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹಾಗೆಯೇ ಹೆಚ್ಚಿನ ಚಿಕಿತ್ಸೆಗಾಗಿ ಸಂಬಧಿಕರು ಬೇರೆಡೆಗೆ ಕರೆದೊಯ್ದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಂತಸ ಮೂಡಿಸಿದ ಪ್ರಧಾನಿ ಟ್ವೀಟ್
ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದ ಟ್ವೀಟ್‌ವೊಂದು ಬಂಡೀಪುರ ಅರಣ್ಯ ಇಲಾಖೆಯ ಅಧಿಕಾರಿಗಳ ಮುಖದಲ್ಲಿ ಸಂತಸ ಮೂಡಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿದ್ದು ಯಾವ ಕಾರಣಕ್ಕೆ ಅನ್ನುವುದನ್ನು ಇಲ್ಲಿ ತಿಳಿಸಲಾಗಿದೆ ನೀವೆ ನೋಡಿ.
ಆನೆಯನ್ನು ಬದುಕಿಸಿದ ಅರಣ್ಯ ಇಲಾಖೆ
ಕಳೆದ ಮಂಗಳವಾರ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯಕ್ಕೆ ಒಳಪಡುವ ಗುಂಡ್ಲುಪೇಟೆ ತಾಲೂಕಿನ ಬರಗಿ ಗ್ರಾಮದ ಖಾಸಗಿ ಜಮೀನಿನಲ್ಲಿ ಅಕ್ರಮ ವಿದ್ಯುತ್ ಪ್ರವಹಿಸಿ ಅಂದಾಜು 25 ವರ್ಷದ ಹೆಣ್ಣಾನೆ ನರಳುತ್ತಿತ್ತು. ಇದನ್ನು ಗಮನಿಸಿದ ಬಂಡೀಪುರ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪಶು ವೈದ್ಯರು ಚಿಕಿತ್ಸೆ ಕೊಟ್ಟು ಆನೆಯನ್ನು ಬದುಕಿಸಿದ್ದಾರೆ. ಇದಕ್ಕೆ ಶನಿವಾರ (ಫೆಬ್ರವರಿ 18) ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದರು. ಜೊತೆಗೆ, ಅರಣ್ಯ ಇಲಾಖೆಯ ಕಾರ್ಯವನ್ನು ಪ್ರಶಂಸಿದ್ದಾರೆ. ಕೇಂದ್ರ ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರೂ ಕೂಡ ಅರಣ್ಯ ಇಲಾಖೆಯ ಮಹತ್ವದ ಕಾರ್ಯವನ್ನು ಶ್ಲಾಘಿಸಿದರು.
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications