Kerala landslide: ಕೇರಳ ಭೂಕುಸಿತದಲ್ಲಿ 7 ಮಂದಿ ಕನ್ನಡಿಗರು ಸಾವು-ಯಾವ್ಯಾವ ಜಿಲ್ಲೆಯವರು?
ಚಾಮರಾಜನಗರ, ಜುಲೈ, 31: ಕೇರಳದಲ್ಲಿ ಉಂಟಾಗಿರುವ ಭೂ ಕುಸಿತದಲ್ಲಿ ಒಟ್ಟು 7 ಮಂದಿ ಕನ್ನಡಿಗರು ಅಸುನೀಗಿದ್ದು, ಐವರ ಶವ ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಕೇರಣದಲ್ಲಿ ಕ್ಷಣ ಕ್ಷಣಕ್ಕೂ ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇದೆ. ಹಾಗಾದರೆ ಭೂಕುಸಿತದಲ್ಲಿ ಸಾವನ್ನಪ್ಪಿದ 7 ಕನ್ನಡಿಗರು ಯಾವ್ಯಾವ ಜಿಲ್ಲೆಯವರು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚಾಮರಾಜನಗರದ ಮೂಲದ ನಾಲ್ವರು, ಮಂಡ್ಯ ಜಿಲ್ಲೆಯ ಮೂವರು ಸಾವನ್ನಪ್ಪಿರುವುದಾಗಿ ಗುಂಡ್ಲುಪೇಟೆ ತಹಶೀಲ್ದಾರ್ ರಮೇಶ್ ಬಾಬು ಮಾಹಿತಿ ನೀಡಿದ್ದಾರೆ. ಮಂಗಳವಾರಂದು ಚಾಮರಾಜನಗರದ ಪುಟ್ಟಸಿದ್ದಿ, ರಾಣಿ ಎಂಬವರ ಶವ ಪತ್ತೆಯಾಗಿತ್ತು. ಇನ್ನು ಇಂದು (ಜುಲೈ 31) ಮಂಡ್ಯ ಮೂಲದ ಮೂವರ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ನಾಪತ್ತೆಯಾಗಿದ್ದ ಮಳವಳ್ಳಿ ಮೂಲದ 9 ಮಂದಿಯಲ್ಲಿ ಸಾವಿತ್ರಿ ಎಂಬುವವರ ಮೊಮ್ಮಗ, ಸಬಿತಾ ಮಗ ಅಚ್ಚು ಹಾಗೂ ಶ್ರೀಕುಟ್ಟಿ ಎಂಬವವರು ಮೃತಪಟ್ಟಿದ್ದು, ವೈತ್ರಿ ಆಸ್ಪತ್ರೆಯಲ್ಲಿ ಇವರ ಶವ ಪತ್ತೆಯಾಗಿದೆ. ಇನ್ನು, ಚಾಮರಾಜನಗರ ತಾಲೂಕಿನ ಇರಸವಾಡಿ ಮೂಲದ ರಾಜನ್ ಮತ್ತು ರಜಿನಿ ದಂಪತಿ ಮೃತಪಟ್ಟಿದ್ದು, ಶವ ಇನ್ನಷ್ಟೇ ಪತ್ತೆಯಾಗಬೇಕಿದೆ. ಒಟ್ಟಾರೆಯಾಗಿ 7 ಮಂದಿ ಕನ್ನಡಿಗರು ಕೇರಳ ಭೂ ಕುಸಿತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ಶವಗಳಿಗೆ ಕೊನೇ ನಮನ ಸಲ್ಲಿಸಿದ ಸ್ಥಳೀಯರು: ಕೇರಳ ಭೂ ಕುಸಿತದಲ್ಲಿ ಮೃತಪಟ್ಟವರಿಗೆ ಮೇಪ್ಪಾಡಿಯಲ್ಲಿ ಸ್ಥಳೀಯರು ಪುಷ್ಪಾರ್ಚನೆ ಸಲ್ಲಿಸಿ ಅಂತಿಮ ನಮನ ಸಲ್ಲಿಸಿದರು.
ಭೂ ಕುಸಿತದಿಂದ ಹತ್ತಾರು ಕಿಲೋ ಮೀಟರ್ ದೂರದ ಚಾಲಿಯಾರ್ ನದಿಯಲ್ಲಿ ಸಿಲುಕಿದ್ದ ಶವಗಳನ್ನು ಹೊತ್ತುಬಂದ ಸಾಲು ಸಾಲು ಆ್ಯಂಬುಲೆನ್ಸ್‌ಗಳಿಗೆ ಸ್ಥಳೀಯರು ಸಾಲಾಗಿ ನಿಂತು ಪುಷ್ಪ ನಮನ ಸಲ್ಲಿಸಿ ಕಂಬನಿ ಮಿಡಿದಿದ್ದಾರೆ.
ಯಾರೂ ಊಹಿಸದಂತೆ ಜರುಗಿದ ದುರಂತದಲ್ಲಿ ಮಡಿದವರಿಗೆ ಮೇಪ್ಪಾಡಿ ವೃತ್ತದಲ್ಲಿ ಹೂವು ಹಿಡಿದು ನಿಂತ ಹತ್ತಾರು ಮಂದಿ ಆ್ಯಂಬುಲೆನ್ಸ್‌ಗಳು ತೆರಳುವಾಗ ಪುಷ್ಪಾರ್ಚನೆ ಮಾಡಿ ಅಂತಿಮ ನಮನ ಸಲ್ಲಿಸುವ ಕರುಳು ಹಿಡಿದಂತಾಯಿತು. ಕೇರಳ ಭೂ ಕುಸಿತದಲ್ಲಿ ಕನ್ನಡಿಗರು ಸಹ ಮರಣ ಅಪ್ಪಿದ್ದು, ಶೋಧಕಾರ್ಯ ಮುಂದುವರೆದಿದೆ. ಚಾಮರಾಜನಗರ ಅಧಿಕಾರಿಗಳ ತಂಡ ಕೇರಳದಲ್ಲೇ ಮೊಕ್ಕಾಂ ಹೂಡಿ ರಕ್ಷಣಾ ಕಾರ್ಯಾದಲ್ಲಿ ತೊಡಗಿಸಿಕೊಂಡಿದ್ದಾರೆ.












Click it and Unblock the Notifications