ಚಾಮರಾಜನಗರ ಜಿಲ್ಲೆಯಲ್ಲಿ ಮುಂಗಾರು ಅಬ್ಬರ: ರಸ್ತೆಗಳು, ಜಮೀನುಗಳು ಜಲಾವೃತ: ಪರದಾಟ

ಚಾಮರಾಜನಗರ, ಜೂನ್‌, 06: ಚಾಮರಾಜನಗರ ಜಿಲ್ಲೆಯಲ್ಲಿ ಗುರುವಾರ (ಜೂನ್‌ 06) ಸಂಜೆ ಮಳೆರಾಯ ಬೊಬ್ಬಿರಿದಿದ್ದು, ಮುಂಗಾರು ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕು ಭಾಗದಲ್ಲಿ ಜೋರು ಮಳೆಯಾಗಿದ್ದು, ರಸ್ತೆಗಳ ಮೇಲೆ ಹೊಳೆಯಂತೆ ನೀರು ಹರಿದ ಪರಿಣಾಮ ವಾಹನ ಸಂಚಾರವೇ ದುಸ್ತರವಾಗಿದೆ. ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಕರ್ನಾಟಕ ಗಡಿಯಾದ ಪುಣಜನೂರು ಗೇಟ್‌ನಲ್ಲೂ ವರುಣಣ ಆರ್ಭಟಕ್ಕೆ ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.

Heavy rain in Chamarajanagar district Road land flooded

ಗುಂಡ್ಲುಪೇಟೆ ತಾಲೂಕಿನ ಅಣ್ಣೂರುಕೇರಿ ಗ್ರಾಮದ ಸೇತುವೆ ಮೇಲೆ ನೀರು ಹರಿದ ಪರಿಣಾಮ ವಡ್ಡರ ಹೊಸಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಬಂದ್ದಾಗಿದ್ದು, ನೀರಿನ ಹರಿವು ಕಡಿಮೆ ಆಗುವುದನ್ನೇ ಜನರು ಕಾಯುತ್ತಿದ್ದಾರೆ.

ಅಣ್ಣೂರುಕೇರಿ ಗ್ರಾಮದ ಉಪ್ಪಾರ ಸಮುದಾಯ ಭವನಕ್ಕೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದ್ದು, ಅಣ್ಣೂರುಕೇರಿ ಗ್ರಾಮದ ಹಲವು ಬೀದಿಗಳು ಜಲಾವೃತವಾಗಿದೆ.

ಗುಂಡ್ಲುಪೇಟೆ ತಾಲೂಕಿನ ಹಾಲಹಳ್ಳಿ ಹಾಗೂ ತೊಂಡವಾಡಿ ಸ‌ಂಪರ್ಕ ರಸ್ತೆಯೇ ಮುಳುಗಡೆಯಾಗಿದ್ದು, ವಾಹನ ಸಂಚಾರ ಬಂದ್ದಾಗಿದೆ. ಮೈಸೂರು-ಊಟಿ ರಾಷ್ಟ್ರೀಯ ಹೆದ್ದಾರಿ ಹಾದು ಹೋಗುವ ಹಿರಿಕಾಟಿ ಗೇಟ್‌ನಲ್ಲಿ ನೀರು ಹರಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಕಷ್ಟಸಾಧ್ಯವಾಗಿದೆ.

ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ, ಶಿವಪುರ, ನೇನೆಕಟ್ಟೆ, ಮಂಚಹಳ್ಳಿ ಭಾಗಗಳಲ್ಲಿ ಜೋರು ಮಳೆಗೆ ಜಮೀನುಗಳು ಜಲಾವೃತವಾಗಿದ್ದು, ಹಲವು ಕಟ್ಟೆಗಳು ತುಂಬಿ ಹರಿಯುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+