Get Updates
Get notified of breaking news, exclusive insights, and must-see stories!

ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಭರ್ಜರಿ ಮಳೆ-ಪ್ರವಾಸಿಗರ ಪರದಾಟ

ಚಾಮರಾಜನಗರ, ಮೇ, 20: ಹವಾಮಾನ ಇಲಾಖೆ ವರದಿ ಪ್ರಕಾರದಂತೆ, ಇಂದು (ಮೇ 20) ಮಧ್ಯಾಹ್ನವೇ, ಚಾಮರಾಜನಗರ ಜಿಲ್ಲೆಯ ಹಲವೆಡೆ ಮಳೆ ಆರ್ಭಟ ಮುಂದುವರೆದಿದೆ. ಹಾಗಾದರೆ ಎಲ್ಲೆಲ್ಲೆ ಮಳೆಯಾಗಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ

ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕಿನಲ್ಲಿ ಸೋಮವಾರ ಮಧ್ಯಾಹ್ನ ಭಾರೀ ಮಳೆಯಾಗಿದೆ. ಇನ್ನು ಗುಂಡ್ಲುಪೇಟೆ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಜೋರು ಮಳೆ ಸುರಿದ ಪರಿಣಾಮ, ದೇವಸ್ಥಾನಕ್ಕೆ ತೆರಳಲು ಚೆಕ್ ಪೋಸ್ಟ್ ಬಳಿ ಬಸ್‌ಗೆ ಕಾಯುತ್ತಿದ್ದ ಸಂದರ್ಭದಲ್ಲಿ ನೂರಾರು ಮಂದಿ ಪರದಾಡಿ ಘಟನೆ ನಡೆದಿದೆ.

Heavy rain in Himavad Gopalaswamy Hill today

ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದರಿಂದ ಬೆಟ್ಟದ ಮೇಲಿಂದ ಮಳೆ ನೀರು ಹೊಳೆ ರೂಪದಲ್ಲಿ ಹರಿಯಿತು. ಅಕ್ಕಪಕ್ಕದ ರಸ್ತೆ ಬದಿ ಅಂಗಡಿಗಳಿಗೆ ನೀರು ನುಗ್ಗಿದವು. ಇನ್ನು ಗೋಪಾಲಸ್ವಾಮಿ ಬೆಟ್ಟದ ಭಾಗದಲ್ಲಿ ಜೋರು ಮಳೆ ಆಗಿದ್ದರಿಂದ ಹಂಗಳ ಹಿರಿಕೆರೆಗೆ ನೀರು ಹರಿದು ಬರುತ್ತಿದೆ.

ಇನ್ನು ಇಂದು ಜಿಲ್ಲೆಯ ಹಂಗಳ, ಗುಂಡ್ಲುಪೇಟೆ, ಚೆನ್ನಮಲ್ಲಿಪುರ, ಗೋಪಾಲಪುರ, ದೇವರಲ್ಲಿ, ಹೊಂಗಳ್ಳಿ, ಬರಗಿ ಭಾಗದಲ್ಲಿ ಉತ್ತಮ ಮಳೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಳೆಗೆ ಕೊಚ್ಚಿಹೋದ ಬೆಳೆಗಳು: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಅಬ್ಬರದ ಮಳೆಯಿಂದ ರಾಜ್ಯದ ಹಲವೆಡೆ ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಮೇ 18ರಂದು ಸುರಿದ ಭಾರೀ ಮಳೆಯಿಂದ ಗಡಿಜಿಲ್ಲೆಯ ಹಲವೆಡೆ ಹೊಲ, ಗದ್ದೆಗಳು ಜಲಾವೃತವಾಗಿರುವ ಘಟನೆಗಳು ನಡೆದಿವೆ.

ಶನಿವಾರ ಮಧ್ಯಾಹ್ನ ಮಳೆರಾಯ ಅಬ್ಬರಿದ ಹಿನ್ನೆಲೆ ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜಗಳು ನೀರಲ್ಲಿ ಕೊಚ್ಚಿಹೋದ ಘಟನೆ ಚಾಮರಾಜನಗರ ತಾಲೂಕಿನ ಹಿರೇಬೇಗೂರು, ಕುಲಗಾಣ, ಅರಳಿಕಟ್ಟೆ ಗ್ರಾಮಗಳಲ್ಲಿ ನಡೆದಿದೆ.

ಹಿರೇಬೇಗೂರಿನ ಚೇರ್ಮನ್ ಮಧು, ರಾಜೇಶ್ ಸೇರಿದಂತೆ ಹತ್ತಾರು ರೈತರು ಬಿತ್ತನೆ ಮಾಡಿದ್ದ ಸೂರ್ಯಕಾಂತಿ, ಹತ್ತಿ ಬೀಜಗಳು ಮಳೆ ಆರ್ಭಟಕ್ಕೆ ಕೊಚ್ಚಿ ಹೋಗಿದ್ದು, ಮತ್ತೊಮ್ಮೆ ಬಿತ್ತನೆ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಹಿರೇಬೇಗೂರಲ್ಲಿ ಟೊಮೊಟೊ ಪೈರು ಕೂಡ ಕೊಚ್ಚಿ ಹೋಗಿದ್ದು, ವೀರಭದ್ರಪ್ಪ ಒಂದು ಹೆಕ್ಟೇರ್‌ಗೆ ಹಾಕಿದ್ದ ಟೊಮ್ಯಾಟೊ ಪೈರು ಮಳೆ ಪಾಲಾಗಿದೆ. ಚೇರ್ಮನ್ ಮಧು ಅವರು 8 ಬ್ಯಾಗ್ ಸೂರ್ಯಕಾಂತಿ ಬಿತ್ತಿದ್ದರು. ಈಗ ಎಲ್ಲವೂ ಕೊಚ್ಚಿಹೋಗಿದ್ದು, ಸೂಕ್ತ ಪರಿಹಾರ ಕೊಡಬೇಕೆಂದು ಆಗ್ರಹಿಸಿದ್ದಾರೆ.

ವಾಹನ ಸವಾರರ ಪರದಾಟ: ಗಡಿಜಿಲ್ಲೆ ಚಾಮರಾಜನಗರದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಶನಿವಾರ ಮಧ್ಯಾಹ್ನದ ಜಿಲ್ಲಾ ಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

ಗುಡುಗು ಸಿಡಿಲಿನೊಂದಿಗೆ ಮಳೆರಾಯ ಚಾಮರಾಜನಗರ ಜಿಲ್ಲಾಕೇಂದ್ರ ಹಾಗೂ ಚಾಮರಾಜನಗರ ತಾಲೂಕಿನ ಮರಿಯಾಲ, ಹರದನಹಳ್ಳಿ, ಉತ್ತುವಳ್ಳಿ ಭಾಗದಲ್ಲಿ ಎಡಬಿಡದೇ ಆರ್ಭಟಿಸಿದ್ದಾನೆ. ದಿಢೀರನೇ ಮಳೆ ಸುರಿದ ಪರಿಣಾಮ, ವಾಹನ ಸವಾರರು ಮಳೆಯಲ್ಲಿ ಸಿಲುಕಿ ಪರದಾಡಿದರು. ಚಾಮರಾಜನಗರಕ್ಕೆ ಪ್ರವೇಶಿಸುವ ಮುನ್ನ ಮೂಡಲಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡಡಿ ಗುಂಡಿಗಳಾಗಿದ್ದು, ಭಾರೀ ವಾಹನಗಳ ಸವಾರರು ಪರದಾಡಿದ ಘಟನೆ ನಡೆದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+