ಚಾಮರಾಜನಗರ ಜಿಲ್ಲೆಯ ಹಲವೆಡೆ ಭಾರೀ ಮಳೆ-ರಸ್ತೆಗಳು ಜಲಾವೃತ
ಚಾಮರಾಜನಗರ, ಆಗಸ್ಟ್, 19: ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆರಾಯನ ಆರ್ಭಟ ಕಡಿಮೆಯಾಗಿದ್ದು, ಇನ್ನು ಕೆಲವು ಜಿಲ್ಲೆಗಳಲ್ಲಿ ಆರ್ಭಟ ಮುಂದುವರೆಸಿದ್ದಾನೆ. ಇನ್ನು ಎರಡನೇ ದಿನವೂ ಗಡಿಜಿಲ್ಲೆ ಚಾಮರಾಜನಗರ ಜಿಲ್ಲೆಯಲ್ಲಿ ಬೊಬ್ಬೆರೆದಿದ್ದು, ವರುಣಾರ್ಭಟಕ್ಕೆ ಇಲ್ಲಿನ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಅಲ್ಲದೆ, ಹಲವೆಡೆ ರಸ್ತೆಗಳು ಜಲಾವೃತವಾದ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಒಂದು ತಾಸಿಗೂ ಅಧಿಕ ಕಾಲ ಸುರಿದ ಜೋರು ಮಳೆಗೆ ರಸ್ತೆಗಳ ಮೇಲೆಲ್ಲಾ ಮಳೆ ನೀರು ಹೊಳೆಯಂತೆ ಹರಿದಿದ್ದು, ಪರಿಣಾಮ ವಾಹನ ಸವಾರರು ಪರದಾಡಿದರು. ಬಿ.ರಾಚಯ್ಯ ಜೋಡಿ ರಸ್ತೆ, ಭುವನೇಶ್ವರಿ ವೃತ್ತದ ರಸ್ತೆಯಲ್ಲಿ ಒಂದು ಅಡಿಗೂ ಹೆಚ್ಚು ಮಳೆ ನೀರು ನಿಂತಿದ್ದರಿಂದ ದ್ವಿಚಕ್ರ , ತ್ರಿಚಕ್ರ ವಾಹನಗಳು ಸಂಚರಿಸುವುದೇ ದುಸ್ತರವಾಗಿತ್ತು.

ದಿಢೀರ್ ಸುರಿದ ಮಳೆಗೆ ಪರದಾಡಿದ ವಾಹನ ಸವಾರರು ಬೈಕ್ ಚಲಾಯಿಸಲು ಹೋಗಿ ಕೆಲವರು ಬಿದ್ದ ಘಟನೆಗಳು ಜರುಗಿದವು. ಗುಂಡ್ಲುಪೇಟೆ ತಾಲ್ಲೂಕಿನ ವಿವಿಧೆಡೆ ಕೂಡ ಉತ್ತಮ ಮಳೆಯಾಗಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬೈಕ್ ಸವಾರರು ಪರಾದಡಿದ ಘಟನೆಗಳು ನಡೆದಿವೆ.
ಇನ್ನು ರಾಜ್ಯಾದ್ಯಂತ ಮಳೆಯು ನಾಳೆಯಿಂದ ಚುರುಕು ಪಡೆಯಲಿದೆ. ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಇದೀದ ಮಳೆರಾಯನ ಆರ್ಭಟ ಪಡೆದಿದ್ದು, ನಾಳೆಯಿಂದ ಮತ್ತೆ ಚುರುಕು ಪಡೆಯುವ ಸಾಧ್ಯತೆಯಿದೆ. ಇನ್ನು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಇನ್ನು ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಸುರಿಯಲಿದೆ ಎನ್ನುವ ಮುನ್ಸೂಚನೆ ಇದೆ.
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆಯಾಗುತ್ತಿದ್ದಂತೆ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಣಿ ವಿಲಾಸ ಜಲಾಶಯಕ್ಕೆ 3,004 ಕ್ಯೂಸೆಕ್ ಒಳಹರಿವು: ಭಾರೀ ಮಳೆಯಿಂದ ಈಗಾಗಲೇ ರಾಜ್ಯದ ಬಹುತೇಕ ಪ್ರಮುಖ ಜಲಾಶಯಗಳು ತುಂಬಿದ್ದು, ಇನ್ನು ಕೆಲವು ತುಂಬುವ ಹಂತವನ್ನು ತಲುಪಿವೆ. ಹಾಗೆಯೇ ಇದೀಗ ಹಿರಿಯೂರು ತಲ್ಲೂಕಿನ ವಾಣಿ ವಿಲಾಸ ಸಾಗರಕ್ಕೆ ಒಳಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಾಗಾದರೆ ಇದೀಗ ಇದರ ಪ್ರಸ್ತುತ ನೀರಿನ ಮಟ್ಟ ಎಷ್ಟಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮಧ್ಯ ಕರ್ನಾಟಕ ಏಕೈಕ ರೈತರ ಜೀವನ ರೆಡಿಯಾಗಿರುವ ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯಕ್ಕೆ ಒಳಹರಿವು ಮುಂದುವರೆದಿದ್ದು, ಇಂದು (ಆಗಸ್ಟ್ 18) ಭಾನುವಾರದ ವರದಿಯಲ್ಲಿ 3,004 ಕ್ಯೈಸೆಕ್ ನೀರು ಜಲಾಶಯಕ್ಕೆ ಒಳಹರಿವು ಇದೆ.
ಚಿಕ್ಕಮಗಳೂರು, ಅಜ್ಜಂಪುರ ಭಾಗದಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆ ವಾಣಿ ವಿಲಾಶ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳ ಆಗಿದೆ. ಶನಿವಾರ 2,668 ಕ್ಯೂಸೆಕ್ ಒಳಹರಿವು ನೀರು ಹರಿದು ಬಂದಿತ್ತು. ಇದೀಗ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 116.65 ಅಡಿ ಇದೆ. 30 ಟಿಎಂಸಿ ನೀರಿನ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ವಾಣಿ ವಿಲಾಸ ಸಾಗರದಲ್ಲಿ ಸದ್ಯ 19.97 ಟಿಎಂಸಿ ನೀರು ಇದೆ.
ಡ್ಯಾಂ ಒಟ್ಟು 135 ಅಡಿ ಎತ್ತರದಲ್ಲಿದ್ದು, ಕಳೆದ 2022ರಲ್ಲಿ ಡ್ಯಾಂ ಕೋಡಿ ಬಿದ್ದಿತ್ತು. 2023ರಲ್ಲಿ ಮಳೆ ಇಲ್ಲದ ಕಾರಣ ಡ್ಯಾಂಗೆ ಯಾವುದೇ ಹೇಳಿಕೊಳ್ಳುವಂತಹ ಒಳಹರಿವು ನೀರು ಬಂದಿರಲಿಲ್ಲ. ಇದೀಗ ಈ ವರ್ಷದಲ್ಲಿ ಸುಮಾರು 4ರಿಂದ 5 ಅಡಿ ನೀರು ಸಂಗ್ರಹವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications