KRS and Kabini Dams Outflow Increase: ಭರಚುಕ್ಕಿ, ಹೊಗೆನಕಲ್ ಫಾಲ್ಸ್‌ಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
ಚಾಮರಾಜನಗರ, ಜುಲೈ, 31: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಕೃಷ್ಣರಾಜಸಾಗರ ಹಾಗೂ ಕಬಿನಿ ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ನದಿಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿಪಾತ್ರದಲ್ಲಿ ಬರುವ ಕೊಳ್ಳೇಗಾಲ ಹಾಗೂ ಹನೂರು ತಾಲೂಕಿನ ಪ್ರವಾಸಿ ತಾಣಗಳಿಗೆ ಮುನ್ನೆಚ್ಚರಿಕೆಯಾಗಿ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದೆ.
ಕೊಳ್ಳೇಗಾಲ ಹಾಗೂ ಹನೂರು ತಾಲೂಕಿನ ಪ್ರವಾಸಿ ತಾಣಗಳಾದ ವೆಸ್ಲಿ ಸೇತುವೆ, ಶಿವನಸಮುದ್ರ, ಭರಚುಕ್ಕಿ ಹಾಗೂ ಹೊಗೇನಕಲ್ ಜಲಪಾತ ಪ್ರದೇಶಗಳಿಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತಿದ್ದು, ಯಾವುದೇ ಅವಘಡಗಳು ಸಂಭವಿಸದಂತೆ ಆಗಸ್ಟ್ 2ರ ತನಕ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಕಾಳಜಿ ಕೇಂದ್ರಕ್ಕೆ ರವಾನೆ: ಇನ್ನು, 2 ಲಕ್ಷ ಕ್ಯೂಸೆಕ್ ಹೊರಹರಿವು ಉಂಟಾಗುವ ಸಾಧ್ಯತೆ ಹಿನ್ನೆಲೆ ಮತ್ತೆ ನದಿ ಪಾತ್ರದ ಗ್ರಾಮಗಳು ಪ್ರವಾಹ ಭೀತಿಯಲ್ಲಿ ಸಿಲುಕಿದೆ. ಕಬಿನಿ ಜಲಾಶಯದಿಂದ 80,000 ಕ್ಯೂಸೆಕ್, ಕೆಆರ್‌ಎಸ್ ಜಲಾಶಯದಿಂದ 1.10 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗಿದೆ.
ಆದ್ದರಿಂದ ತಾಲ್ಲೂಕಿನ ದಾಸನಪುರ, ಮುಳ್ಳೂರು, ಹಳೆ ಹಂಪಾಪುರ, ಹಳೆ ಅಣ್ಣಗಳ್ಳಿ, ಹರಳೆ, ಸರಗೂರು, ಧನಗೆರೆ, ಸತ್ತೇಗಾಲ, ಯಡಕುರಿಯ, ಗ್ರಾಮಗಳು ಮತ್ತೆ ಪ್ರವಾಹದಲ್ಲಿ ಸಿಲುಕಿದೆ. ಹಾಗಾಗಿ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ನದಿ ಪಾತ್ರದ ಗ್ರಾಮಗಳ ಜನರು ಗ್ರಾಮಗಳನ್ನು ತೊರೆಯಬೇಕು ಎಂದು ಅಧಿಕಾರಿಗಳು ಗ್ರಾಮಸ್ಥರಲ್ಲಿ ಮನವಿ ಮಾಡುತ್ತಿದ್ದಾರೆ. ಅಧಿಕಾರಿಗಳು ಗ್ರಾಮಸ್ಥರನ್ನು ಮನವಿ ಮಾಡಿದರೂ ಸಹ ಗ್ರಾಮದವರು ನಾವು ಗ್ರಾಮವನ್ನು ತೊರೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ದಾಸನಪುರ ಗ್ರಾಮದ ಪ್ರತಿಯೊಂದು ಮನೆಮನೆಗೂ ಉಪವಿಭಾಗಕಾರಿ ಮಹೇಶ್ ನೇತೃತ್ವ ತಂಡ ಭೇಟಿ ನೀಡಿ ಗ್ರಾಮಸ್ಥರನ್ನು ಮನವೊಲಿಸುತ್ತಿದ್ದಾರೆ. ಈಗಾಗಲೇ 10 ಮನೆಯವರನ್ನು ಮನವೊಲಿಸಿ ಎರಡು ಕಾರಿನಲ್ಲಿ 25ಕ್ಕೂ ಹೆಚ್ಚು ಮಂದಿಯನ್ನು ಕಾಳಜಿ ಕೇಂದ್ರಕ್ಕೆ ಕರೆತರಲಾಗಿದೆ.
ಹುಚ್ಚಾಟ ಮೆರೆದವರಿಗೆ ಬಸ್ಕಿ ಹೊಡೆಸಿದ ಪೊಲೀಸರು: ಈಗಾಲೇ ಭಾರೀ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಜಲಮೂಲಗಳು ಉಕ್ಕಿ ಹರಿಯುತ್ತಿದ್ದು, ಈ ಅದ್ಭುತ ದೃಶ್ಯಗಳನ್ನು ಸವಿಯಲು ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಅಲ್ಲಿ ಕೆಲವರು ಇಂತಹ ತಾಣಗಳಲ್ಲಿ ಹುಚ್ಚಾಟ ಮೆರೆದು ಸಂಕಷ್ಟಕ್ಕೆ ಸಿಲುಕಿರುವ ಉದಾಹರಣೆಗಳಿವೆ. ಅಂತಹದ್ದೇ ಘಟನೆ ಇದೀಗ ಭರಚಿಕ್ಕಿ ಜಲಪಾತದ ಬಳಿ ನಡೆದಿದೆ.
ಕಾವೇರಿ ಹೊರಹರಿವು ಹೆಚ್ಚಾಗಿರುವ ಹಿನ್ನೆಲೆ ಕೊಳ್ಳೇಗಾಲದ ಭರಚುಕ್ಕಿ ಜಲಪಾತ ಮೈ ದುಂಬಿ ಹರಿಯುತ್ತಿದ್ದು, ಈ ಮೂಲಕ ಮನಮೋಹಕ ಜಲಸಿರಿ ಸೃಷ್ಟಿಯಾಗಿದೆ. ಈ ಜಲವೈಯ್ಯಾರ ಕಾಣಲು ಪ್ರವಾಸಿಗರ ದಂಡೇ ಹರಿದು ಬರುತ್ತಿದ್ದು, ಹಲವರು ಫೋಟೋಗಾಗಿ ಹುಚ್ಚಾಟವನ್ನು ಮೆರೆಯುತ್ತಿದ್ದಾರೆ. ಇನ್ನು ಭರಚುಕ್ಕಿ ಜಲಪಾತದ ತುದಿಗೆ ತೆರಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ಹುಚ್ಚಾಟ ಮೆರೆಯುತ್ತಿದ್ದವರಿಗೆ ಪೊಲೀಸರು ಬಸ್ಕಿ ಹೊಡೆಸಿ ಪಾಠ ಕಲಿಸಿದ ಘಟನೆ ನಡೆದಿದೆ.
ಭರಚುಕ್ಕಿ ಜಲಪಾತದ ನೀರು ಧುಮ್ಮಿಕ್ಕುವ ಹಿಂಭಾಗಕ್ಕೆ ಬಂದು ಫೋಟೋ ಕ್ರೇಜ್‌ಗಾಗಿ ಅಪಾಯಕಾರಿ ಸ್ಥಳದಲ್ಲಿ ಕೆಳಗಿಳಿಯುತ್ತಿದ್ದ ಮಾಹಿತಿ ಅರಿತ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪೊಲೀಸರು ಯುವಕರನ್ನು ಹಿಂದಕ್ಕೆ ಕರೆಸಿ ಬಸ್ಕಿ ಹೊಡೆಸಿದ್ದಾರೆ. ಬಳಿಕ ಒಂದು ಫೋಟೋಗಾಗಿ ಜೀವಕ್ಕೆ ಅಪಾಯ ತಂದುಕೊಳ್ಳಬೇಡಿ ಎಂದು 15ಕ್ಕೂ ಹೆಚ್ಚು ಯುವಕರಿಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications