• search
  • Live TV
ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಲೈ ಮಹದೇಶ್ವರ ಬೆಟ್ಟ ಪ್ರದೇಶಗಳಲ್ಲಿ ಭಾರಿ ಮಳೆ

|

ಚಾಮರಾಜನಗರ, ಜುಲೈ 10: ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಗುರುವಾರ ಸಂಜೆಯಿಂದ ಅಹೋರಾತ್ರಿವರೆಗೂ ಮಳೆ ಸುರಿದಿದೆ.

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಜುಲೈ 14 ರವರಗೆ ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜುಲೈ 14ರವರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ

ಭಾರಿ ಮಳೆಯಿಂದಾಗಿ ಬೆಟ್ಟದ ಪ್ರದೇಶದಲ್ಲಿ ಮಳೆ ನೀರು ನದಿಯಂತೆ ಹರಿದಿದೆ. ಮಲೆ ಮಹದೇಶ್ವರ ಬೆಟ್ಟದ ಕಾಲು ದಾರಿಯ ಮೆಟ್ಟಿಲುಗಳಲ್ಲಿ ಮಳೆ ನೀರು ಝರಿಯಂತೆ ಹರಿಯುತ್ತಿದೆ.

ಈ ಬಾರಿ ಮಹದೇಶ್ವರ ಬೆಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬೆಟ್ಟ ಪ್ರದೇಶದ ಅರಣ್ಯ ಸಮೃದ್ಧವಾಗಿ ಬೆಳೆದಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

English summary
Heavy rainfall in the hill station of Male Mahadeshwara, a famous religious site in Chamarajanagar district, has been raining from Thursday evening till late at night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X