ಚಾಮರಾಜನಗರ: ನಿಮ್ಮೂರಲ್ಲಿ ಕರೆಂಟ್ ಇಲ್ವಾ.? ಈ ನಂಬರ್‌ಗ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಿ
ಚಾಮರಾಜನಗರ, ನವೆಂಬರ್, 15: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವ್ಯಾಪ್ತಿಯ ಚಾಮರಾಜನಗರ ವಿಭಾಗದ ಅಧೀನದಲ್ಲಿ 5 ಉಪವಿಭಾಗಗಳು ಹಾಗೂ 19 ಶಾಖಾ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಇದೀಗ ಚಾಮರಾಜನಗರ ವಿಭಾಗ ವ್ಯಾಪ್ತಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಸ್ಥಳಗಳನ್ನು ಗುರುತಿಸಿ ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಉಪವಿಭಾಗಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಸಾರ್ವಜನಿಕರ ಸಹಾಯಕ್ಕಾಗಿ ಸಹಾಯವಾಣಿಯನ್ನು ಸ್ಥಾಪನೆ ಮಾಡಲಾಗಿದೆ.
ಗ್ರಾಹಕರ ಕುಂದುಕೊರತೆ, ಅಹವಾಲುಗಳನ್ನು ಪರಿಹರಿಸಲು ಪ್ರತಿ ಉಪವಿಭಾಗಕ್ಕೆ ಒಂದರಂತೆ 24×7 ಅವಧಿಯ ದೂರು ನಿರ್ವಹಣಾ ಕೇಂದ್ರಗಳಿವೆ. ಗ್ರಾಮ ಅಥವಾ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸಂಬಂಧಿತ ಅಪಾಯಕಾರಿ ಸ್ಥಿತಿಯಲ್ಲಿರುವ ಸ್ಥಳಗಳು ಕಂಡುಬಂದಲ್ಲಿ ಹಾಗೂ ವಿದ್ಯುತ್ ಸಂಬಂಧಿತ ಯಾವುದೇ ಸಮಸ್ಯೆಗಳಿದ್ದಲ್ಲಿ ಸಂಬಂಧಪಟ್ಟ ಉಪವಿಭಾಗಗಳ ದೂರವಾಣಿ ಸಂಖ್ಯೆಗೆ ಕರೆಮಾಡಿ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದಾಗಿದೆ.

ಚಾಮರಾಜನಗರ ಉಪವಿಭಾಗ ದೂರವಾಣಿ ಸಂಖ್ಯೆ 08226-225038, ಮೊಬೈ ಸಂಖ್ಯೆ 9449598686, 9449598666, ಹರದನಹಳ್ಳಿ ಉಪವಿಭಾಗ ಮೊ.ನಂ. 9448283397, ಸಂತೇಮರಹಳ್ಳಿ ಉಪವಿಭಾಗ ಮೊ.ನಂ. 9448283398, ಗುಂಡ್ಲುಪೇಟೆ ಉಪವಿಭಾಗ ಮೊ.ನಂ 9448289404, ಬೇಗೂರು ಉಪವಿಭಾಗ ಮೊ.ನಂ 9448289421 ಅನ್ನು ಸಂಪರ್ಕಿಸಬಹುದಾಗಿದೆ.
ಇನ್ನಿತರೆ ಹೆಚ್ಚಿನ ವಿದ್ಯುತ್ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ನಿಗಮದ ಕೇಂದ್ರೀಯ ದೂರು ನಿರ್ವಹಣಾ ಘಟಕದ ಉಚಿತ ದೂ.ಸಂಖ್ಯೆ 1912 ಅಥವಾ ಮೊ.ನಂ. 9448991912ಕ್ಕೆ ವಾಟ್ಸಾಪ್ ದೂರು ನೀಡಬಹುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಗ್ರೀನ್ ಟುಮಾರೋ-ಎಂಎಂ ಹಿಲ್ಸ್: ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪ್ರಸಿದ್ದ ಯಾತ್ರಾ ಸ್ಥಳಗಳಲ್ಲಿ ಒಂದಾಗಿದೆ. ಇಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆಯ ಉದ್ದೇಶದ ಸಲುವಾಗಿ 'ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ'(ಗ್ರೀನ್ ಟುಮಾರೋ- ಎಂಎಂಹಿಲ್ಸ್) ಎಂಬ ಮಹತ್ತರ ಯೋಜನೆ ಅನುಷ್ಠಾನಕ್ಕಾಗಿ ತ್ರಿಪಕ್ಷೀಯ ಒಡಂಬಂಡಿಕೆ ಮಾಡಿಕೊಳ್ಳಲಾಗಿದೆ.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು (ನವೆಂಬರ್ 14) ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಮೈಸೂರು ಕಾವೇರಿ ಪ್ರಾದೇಶಿಕ ಸಂಸ್ಥೆ (ಎಂವೈಕೆಎಪಿಎಸ್-ಮೈಕಾಪ್ಸ್)ಯ ಉಪಾಧ್ಯಕ್ಷ ತ.ಮ.ವಿಜಯ ಭಾಸ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮೋನಾ ರೋತ್ ಸಮ್ಮುಖದಲ್ಲಿ ಶ್ರೀಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು, ಮೈಸೂರು ಕಾವೇರಿ ಪ್ರಾದೇಶಿಕ ಸಂಸ್ಥೆಯ (ಎಂವೈಕೆಎಪಿಎಸ್-ಮೈಕಾಪ್ಸ್) ಕಾರ್ಯನಿರ್ವಾಹಕ ನಿರ್ದೇಶಕ ಅಶ್ರಪ್ ಉಲ್ ಹಸನ್ ಹಾಗೂ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿ ಕಿರಣ್ ಯೋಜನೆ ಅನುಷ್ಠಾನದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ (ಗ್ರೀನ್ ಟುಮಾರೊ, ಎಂಎಂ ಹಿಲ್) ಯೋಜನೆಯು ಮೂರು ವರ್ಷಗಳದಾಗಿದ್ದು, ತ್ಯಾಜ್ಯ ನಿರ್ವಹಣೆಯ ಎಲ್ಲ ವಿಭಾಗಗಳಲ್ಲಿ ಸಮರ್ಪಕವಾಗಿ ಯೋಜನೆ ಅನುಷ್ಠಾನ ಆಗಲಿದೆ. ಎಲ್ಐಸಿಹೆಚ್ಎಫ್ಎಲ್ ಸಂಸ್ಥೆಯು ಯೋಜನೆಗೆ ಅಗತ್ಯವಾದ ಅನುದಾನದ ನೆರವು ನೀಡಲಿದ್ದು, ಮೈಕಾಪ್ಸ್ ಸಂಸ್ಥೆಯು ಯೋಜನೆ ಅನುಷ್ಠಾನ ನಿರ್ವಹಣೆ ಹೊತ್ತಿದೆ.
ಯೋಜನೆಯು ಮಲೆ ಮಹದೇಶ್ವರ ಬೆಟ್ಟವನ್ನು ಹಸಿರುಮಯವಾಗಿಸುವ ಖಾತರಿಯೊಂದಿಗೆ ಅಗತ್ಯವಿರುವ ಸಮಗ್ರ ತ್ಯಾಜ್ಯ ನಿರ್ವಹಣೆ ಯೋಜನೆ, ತ್ಯಾಜ್ಯ ಸಂಗ್ರಹ ವ್ಯವಸ್ಥೆಯನ್ನ ಸುಸ್ಥಿರಗೊಳಿಸುವ, ತ್ಯಾಜ್ಯ ಸಂಗ್ರಹಣೆಯಿಂದ ಬರುವ ಆದಾಯವನ್ನು ಸ್ಥಳೀಯವಾಗಿ ನೀಡುವುದೂ ಸೇರಿದಂತೆ ಒಟ್ಟಾರೆ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆ ಮಾಡುವ ಉದ್ದೇಶ ಹೊಂದಿದೆ.
ಒಡಂಬಡಿಕೆ ಬಳಿಕ ಮೈಕಾಪ್ಸ್ ಸಂಸ್ಥೆಯ ಉಪಾಧ್ಯಕ್ಷರಾದ ತ.ಮ.ವಿಜಯ ಭಾಸ್ಕರ್ ಮಾತನಾಡಿ, ಅವರು ಕಾವೇರಿ ಪ್ರಾದೇಶಿಕ ಸಂಸ್ಥೆಯು ಕಾವೇರಿ ನದಿಯ ಜಿಲ್ಲೆಗಳಲ್ಲಿ ಬಹುಮುಖ್ಯ ಯೋಜನೆಗಳನ್ನು ಜಾರಿಗೆ ತರುವಲ್ಲಿ ಮುಂದಾಗಿದೆ. ದಕ್ಷಿಣ ಕರ್ನಾಟಕದ ಚಾಮರಾಜನಗರ ಜಿಲ್ಲೆಗೆ ಅನುಕೂಲ ಆಗುವ ಇನ್ನೂ ಹೆಚ್ಚು ಪ್ರಾಜೆಕ್ಟ್‌ಗಳನ್ನು ತೆಗೆದುಕೊಳ್ಳಲಿದ್ದೇವೆ. ಅಧಿಕ ಕೆಲಸ ಕಾರ್ಯಗಳನ್ನು ಜಿಲ್ಲೆಯಲ್ಲಿ ಕೈಗೊಳ್ಳಲಿದ್ದೇವೆ ಎಂದರು.
ಪ್ರಸ್ತುತ ಮಲೆ ಮಹದೇಶ್ವರ ಬೆಟ್ಟದಲ್ಲಿ ಅನುಷ್ಠಾನ ಮಾಡಲಿರುವ ಮಹತ್ವದ ಹಸಿರು ಯೋಜನೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಸಮನ್ವಯ ಸಹಕಾರದೊಂದಿಗೆ ಯಶಸ್ವಿಯಾಗಿ ಮಾಡೋಣ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಬದ್ಧತೆಯಿಂದ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications