ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಳೆ ಅಬ್ಬರಕ್ಕೆ ಹೊಗೆನಕಲ್ ಜಲಪಾತವೇ ಮುಳುಗಡೆ!!

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಆಗಸ್ಟ್‌ 6: ಪ್ರಸಿದ್ಧ ಪ್ರವಾಸಿತಾಣ, ಭಾರತದ ನಯಾಗರ ಎಂದು ಕರೆಯುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತ ಮಳೆಯ ಆರ್ಭಟಕ್ಕೆ ಹರಿಯುತ್ತಿರುವ ನೀರಿನ ಪ್ರಮಾಣಕ್ಕೆ ಕಣ್ಮರೆಯಾಗಿದೆ. ಜಲಪಾತದ ಮೇಲೆ ನೀರು ಹರಿಯುತ್ತಿರುವುದರಿಂದ ಜಲಪಾತವೇ ಮುಳುಗಡೆಯಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿರುವುದೆ, ಜೊತೆಗೆ ಕಾವೇರಿ ಹೊರಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಲಪಾತವೇ ಸಂಪೂರ್ಣ ಮುಳುಗಡೆಯಾಗಿದೆ. ಹೊಗೆನಕಲ್‌ನಲ್ಲಿ ಧುಮ್ಮಿಕ್ಕುವ ದೃಶ್ಯ ಬದಲಾಗಿ ಎಲ್ಲಿ ನೋಡಿದರೂ ಕಾವೇರಿ ಹರಿದಾಟವೇ ಕಾಣುತ್ತಿದೆ.

ಹಳ್ಳ ದಾಟಲು ಹಗ್ಗವನ್ನೇ ಆಸರೆ ಮಾಡಿಕೊಂಡ ಪುಟ್ಟೇಗೌಡನದೊಡ್ಡಿ ಜನರುಹಳ್ಳ ದಾಟಲು ಹಗ್ಗವನ್ನೇ ಆಸರೆ ಮಾಡಿಕೊಂಡ ಪುಟ್ಟೇಗೌಡನದೊಡ್ಡಿ ಜನರು

ತಮಿಳುನಾಡು ಭಾಗದಲ್ಲಿ ಜಲಪಾತ ವೀಕ್ಷಣೆ ಮಾಡುವ ಜಾಗ ಹಾಗೂ ನೀರಾಟ ಆಡುವ ಸ್ಥಳವೂ ಜಲಾವೃತವಾಗಿದ್ದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

Hogenakkal Falls Area Submerged after water Level Rises in Cauvery River

ಕರ್ನಾಟಕ ಭಾಗದಲ್ಲೂ ಭಾರೀ ನೀರು ಹರಿಯುತ್ತಿದೆ. ನದಿ ಅಂಚಿನ ಆಲಂಬಾಡಿ, ಜಂಬಲ್‌ಪಟ್ಟಿ ,ಆತೂರು ಗ್ರಾಮಗಳು ಪ್ರವಾಹ ಭೀತಿ ಎದುರಿಸುತ್ತಿವೆ. ಹೊಗೆನಕಲ್‌, ಗೋಪಿನಾಥಂಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಸೇತುವೆ ನೀರಿನಿಂದ ಆವೃತಗೊಂಡಿದ್ದು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಪ್ರವಾಸಿಗರನ್ನು ವಾಪಾಸ್ ಕಳುಹಿಸಲಾಗುತ್ತಿದೆ.

ಗೋಪಿನಾಥಂಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿರುವ ಸೇತುವೆ ನೀರಿನಿಂದ ಆವೃತವಾಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮೆಟ್ಟೂರು ಜಲಾಶಯದಲ್ಲಿ ಹಿನ್ನೀರು ಹೆಚ್ಚಳವಾಗಿರುವ ಕಾರಣ ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಪರಿಣಾಮ ಆಲಂಬಾಡಿ, ಜಂಬಲ್ ಪಟ್ಟಿ ಮಾರಿಕೊಟ್ಟಾಯಂ ಹಾಗೂ ಹೊಗೆನಕಲ್ ಜಲಪಾತಕ್ಕೆ ತೆರಳುವ ಮಾರ್ಗ ಕಡಿತಗೊಂಡಿದೆ.

ಮಳೆ ಅಬ್ಬರ: ಚಾಮರಾಜನಗರ ಜಿಲ್ಲೆಯ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆಮಳೆ ಅಬ್ಬರ: ಚಾಮರಾಜನಗರ ಜಿಲ್ಲೆಯ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ

ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಅತೀ ಹೆಚ್ಚು ಮಳೆ ಬೀಳುವ ವರದಿ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲಾದ್ಯಂತ ಎಲ್ಲಾ ಶಾಲೆ ಹಾಗೂ ಅಂಗನವಾಡಿಗಳಿಗೆ ಶನಿವಾರವೂ ರಜೆ ಮುಂದುವರಿದಿದೆ. ಮಕ್ಕಳ ಹಿತದೃಷ್ಟಿಯಿಂದ ಗುರುವಾರವೇ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

Hogenakkal Falls Area Submerged after water Level Rises in Cauvery River

ಹವಾಮಾನ ಇಲಾಖೆ ಬೆಂಗಳೂರು ಸೇರಿದಂತೆ ಮುಂದಿನ ನಾಲ್ಕು ದಿನಗಳವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚನೆ ನೀಡಿದೆ. ರಾಜಧಾನಿಯಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದೆ. ಶನಿವಾರವೂ ಮೋಡ ಮುಸುಕಿದ ವಾತಾವರಣವಿದ್ದು, ಮಳೆ ಬೀಳುವ ಸಾಧ್ಯತೆ ಹೆಚ್ಚಿದೆ.

English summary
Chamarajanagar: Hogenakkal Falls Area Submerged after water Level Rises in Cauvery River, flood threat to river surrounding areas,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X