ಕೇವಲ ಒಂದು ತಿಂಗಳಲ್ಲಿ ಮಲೆ ಮಾದಪ್ಪನ‌ ಹುಂಡಿಯಲ್ಲಿ ಕೋಟಿ..ಕೋಟಿ ಹಣ ಸಂಗ್ರಹ.!-ಅಂಕಿಅಂಶಗಳ ವಿವರ ಇಲ್ಲಿದೆ

ಚಾಮರಾಜನಗರ, ಜೂನ್‌, 29: ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ (ಜೂನ್‌ 28) ನಡೆದ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಈ ಬಾರಿ 30 ದಿನಗಳ ಅವಧಿಯಲ್ಲಿ 2.20 ಕೋಟಿ ರೂಪಾಯಿ ಸಂಗ್ರಹವಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಗಿದ್ದು, ಎಣಿಕೆ ಕಾರ್ಯವು ಸಂಜೆ 7 ಗಂಟೆಯವರೆಗೂ ನಡೆಯಿತು.

Hundi Counting at Male Mahadeshwara temple Do you know how much money collected in just 30 days

ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,20,97,533 ರೂಪಾಯಿ ನಗದು 106 ಗ್ರಾಂ ಚಿನ್ನ ಹಾಗೂ 2.1000 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಅಷ್ಟೇ ಅಲ್ಲದೆ, 3,38,830 ವಿದೇಶಿ ನೋಟುಗಳು‌, ಡಾಲರ್ 3, ಅರಬ್ 1, ನೇಪಾಳ 1, ಉಮನ್ ದೇಶದ 1 ಒಟ್ಟು 6 ಹುಂಡಿಯಲ್ಲಿ ಪತ್ತೆಯಾಗಿವೆ. ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2,000 ಮುಖಬೆಲೆಯ 19 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ.

ಈ ವೇಳೆ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾ ಅಧೀಕ್ಷಕ ನಾಗೇಶ್, ಜಿಲ್ಲಾಡಳಿತ ಕಚೇರಿ ಮುಜರಾಯಿ ಶಾಖೆಯ ಶ್ವೇತ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

2.58 ಕೋಟಿ ರೂಪಾಯಿ ಸಂಗ್ರಹ: ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು, ಈ ಬಾರಿ ಕೇವಲ 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂಪಾಯಿ ಸಂಗ್ರಹವಾಗಿದೆ ಎನ್ನುವ ಮಾಹಿತಿ ಮೇ ತಿಂಗಳಿನಲ್ಲಿ ಲಭ್ಯವಾಗಿತ್ತು. ಹಾಗಾದರೆ ಈ ಯಾವೆಲ್ಲ ಮೂಲಗಳಿಂದ ಬಂದಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು.

ಬೇಸಿಗೆ ರಜೆ ಇದ್ದಿದ್ದರಿಂದ ಪೋಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಅಲ್ಲದೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇದರಿಂದ ಹರಕೆಯ ರೂಪದಲ್ಲಿ 2,58,44,097 ನಗದು 93 ಗ್ರಾಂ ಚಿನ್ನ ಹಾಗೂ 3.350 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಇದಲ್ಲದೆ, ಸೌದಿ ಅರೇಬಿಯಾ, ಜಪಾನ್, ನೇಪಾಳ, ಕತಾರ್ ದೇಶದ 4 ವಿದೇಶಿ ನೋಟುಗಳು‌, ಚಲಾವಣೆಯಲ್ಲಿ ಇಲ್ಲದ 2,000 ರೂಪಾಯಿ ಮುಖಬೆಲೆಯ 25 ನೋಟುಗಳು ಹುಂಡಿಯಲ್ಲಿ ಪತ್ತೆಯಾಗಿದೆ. ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+