ಮಲೆ ಮಾದಪ್ಪನ ಹುಂಡಿ ಎಣಿಕೆ: ಕೇವಲ 28 ದಿನಗಳಲ್ಲಿ 2 ಕೋಟಿಗೂ ಅಧಿಕ ಹಣ ಸಂಗ್ರಹ, ಮಾಹಿತಿ
ಚಾಮರಾಜನಗರ, ನವೆಂಬರ್, 08: ಪ್ರಸಿದ್ಧ ಯಾತ್ರಸ್ಥಳಗಳಲ್ಲಿ ಒಂದಾದ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ (ನವೆಂಬರ್ 08) ಹುಂಡಿ ಏಣಿಕೆ ನಡೆದಿದ್ದು, 28 ದಿನಗಳ ಅವಧಿಯಲ್ಲಿ 2.10 ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ತಿಳಿದುಬಂದಿದೆ.
ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಈ ಎಣಿಕೆ ಕಾರ್ಯವು ಸಂಜೆ 7.30ರ ಗಂಟೆಯವರೆಗೂ ನಡೆಯಿತು.

ರಾಜ್ಯ ಸರ್ಕಾರದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ
2.28 ಕೋಟಿ ರೂಪಾಯಿ ಸಂಗ್ರಹ
ಹಾಗೆಯೇ ಇತ್ತೀಚೆಗಷ್ಟೇ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ 2.28 ಕೋಟಿ ರೂಪಾಯಿ ಸಂಗ್ರಹ ಆಗಿತ್ತು.
ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ, ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ಕಾರ್ಯ 12 ತಾಸಿನಷ್ಟು ನಡೆದಿದ್ದು, 39 ದಿನಗಳಲ್ಲಿ ಬರೋಬ್ಬರಿ 2,28,63,914 ರೂಪಾಯಿ ಹಣ ಸಂಗ್ರಹ ಆಗಿತ್ತು
ಸರ್ಕಾರದ ಮಹತ್ವಾಕಾಂಕ್ಷಿಯ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭೇಟಿ ನೀಡುತ್ತಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ, ಹಾಗೂ ಸರ್ಕಾರಿ ರಜೆ ದಿನಗಳು, ಸಾಮೂಹಿಕ ವಿವಾಹ, ಕಾರ್ಯಕ್ರಮಕ್ಕೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದರು.
ಈ ಮೂಲಕ 2.28 ಕೋಟಿ ರೂಪಾಯಿ ನಗದು, 92.5 ಗ್ರಾಂ ಚಿನ್ನ ಹಾಗೂ 2.7 ಕೆ.ಜಿ. ಬೆಳ್ಳಿ ಸಂಗ್ರಹವಾಗಿತ್ತು.
ಸಂಖ್ಯೆಯಲ್ಲಿ ಮಹಿಳೆಯರು ಭೇಟಿ ನೀಡಿದ್ದಾರೆ. ಜೊತೆಗೆ ಹುಣ್ಣಿಮೆ, ಅಮಾವಾಸ್ಯೆ, ಹಾಗೂ ಸರ್ಕಾರಿ ರಜೆ ದಿನಗಳು, ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವ ಹಿನ್ನೆಲೆ ಹೆಚ್ಚಿನ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಹರಕೆಯ ರೂಪದಲ್ಲಿ ಹಣ ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.
ಹುಂಡಿಗಳ ಎಣಿಕೆಯಲ್ಲಿ ಈ ಬಾರಿ 2,10,78,014 ರೂಪಾಯಿ ಸಂಗ್ರಹವಾಗಿದೆ. ಚಿನ್ನ ಮತ್ತು ಬೆಳ್ಳಿ ಮೌಲ್ಯಮಾಪಕರಿಗೆ ಅನಾರೋಗ್ಯದ ಹಿನ್ನೆಲೆ ಚಿನ್ನ ಮತ್ತು ಬೆಳ್ಳಿಯನ್ನು ಶೇಖರಿಸಿ ಇಡಲಾಗಿದೆ. ಇನ್ನು ಪ್ರಾಧಿಕಾರದ ವತಿಯಿಂದ ಭಕ್ತಾದಿಗಳಿಗೆ ಎಷ್ಟೇ ಅರಿವು ಮೂಡಿಸಿದರೂ ಸಹ ಚಲಾವಣೆಯಲ್ಲಿಲ್ಲದ 2 ಸಾವಿರ ಮುಖಬೆಲೆಯ 32 ನೋಟ್‌ಗಳನ್ನು ಹುಂಡಿಗೆ ಹಾಕಿದ್ದಾರೆ.












Click it and Unblock the Notifications