ಒಂದೇ ಜಿಲ್ಲೆಯಲ್ಲಿ ಪತಿ ಅಬಕಾರಿ ಇಲಾಖೆ ಉಪ ಆಯುಕ್ತ, ಪತ್ನಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕ
ಚಾಮರಾಜನಗರ, ಜುಲೈ, 03: ಚಾಮರಾಜನಗರ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಅವರು ಇಂದು (ಜುಲೈ 03) ಸ್ವೀಕರಿಸಿದ್ದು, ವಿಶೇಷ ಎಂದರೆ ಇವರ ಪತಿ ಚಾಮರಾಜನಗರ ಅಬಕಾರಿ ಇಲಾಖೆ ಉಪ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಚಾಮರಾಜನಗರದಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪದ್ಮಿನಿ ಸಾಹು ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದ್ದು, ಕವಿತಾ ಅವರು ನಾಗರಿಕ ಹಕ್ಕು ನಿರ್ದೇಶನಾಲಯದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಕವಿತಾ ಅವರು 2016ರ ಕರ್ನಾಟಕ ಕೇಡರ್‌ನ ಅಧಿಕಾರಿ ಆಗಿದ್ದಾರೆ. ಬುಧವಾರ (ಜುಲೈ 03) ಮಧ್ಯಾಹ್ನ ಚಾಮರಾಜನಗರ ಎಎಸ್ಪಿ ಉದೇಶ್ ಅವರಿಂದ ಚಾಮರಾಜನಗರ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಪತಿ ನಾಗಶಯನ ಅಬಕಾರಿ ಇಲಾಖೆ ಉಪ ಆಯುಕ್ತರಾಗಿದ್ದರೆ, ಪತ್ನಿ ಈಗ ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿ ಆಗಿ ಬಂದಿರುವುದೇ ವಿಶೇಷವಾಗಿದೆ.
ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರ ನೇಮಕ: ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿತ್ರದುರ್ಗ ಜಿಲ್ಲೆಯ ಜೆ.ಎಸ್.ಮಂಜುನಾಥ್ ಇವರನ್ನು ಅಧ್ಯಕ್ಷರನ್ನಾಗಿ, ನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ ಕಂಪನಿ ಆಕ್ಟ್ 2013ರ ಆರ್ಟಿಕಲ್ ಆಫ್ ಅಸೋಸಿಯೇಷನ್ ಆಫ್ ದಿ ಕರ್ನಾಟಕ ಹಾದಿ ಜಾಂಬವ ಅಭಿವೃದ್ಧಿ ನಿಗಮದ ಕಾಲಂ 29(1)ರ ಅನ್ವಯ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.
2008ರ ಹಿರಿಯೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿ.ಎಸ್.ಮಂಜುನಾಥ್ ಪರಾಭವಗೊಂಡಿದ್ದರು. ನಂತರ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ರಾಜ್ಯಾಧ್ಯಕ್ಷರಾಗಿದ್ದರು. ಇದೀಗ ಕೆಪಿಸಿಸಿ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾಗಿದ್ದಾರೆ.
ಲೋಕಸಭಾ ಚುನಾವಣೆ ಪೂರ್ವದಲ್ಲಿ ಹಿರಿಯೂರು ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಕೈಗೆ ಸಿಕ್ಕರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆಂದು ಭಾಷಣ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪುಲ್ ವೈರಲ್ ಆಗಿ, ಸುದ್ದಿಯಾಗಿದ್ದರು. ಅಲ್ಲದೆ ಇವರ ಮೇಲೆ ಪ್ರಕರಣ ಕೂಡ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಿ.ಎಸ್. ಮಂಜುನಾಥ್ ಅವರಿಗೆ ಜಾಮೀನು ಕೂಡ ಸಿಕ್ಕಿತು.












Click it and Unblock the Notifications