ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಬಂಡೀಪುರದಲ್ಲಿ ಗಾಯಗೊಂಡಿದ್ದ ಗಂಡು ಹುಲಿ ಸೆರೆ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಅಕ್ಟೋಬರ್ 21; ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಸಫಾರಿ ಝೋನ್‌ನಲ್ಲಿ ಕಾಣಿಸಿಕೊಂಡಿದ್ದ ಗಾಯಗೊಂಡಿದ್ದ ಗಂಡು ಹುಲಿಯನ್ನು ಗುರುವಾರ ಸೆರೆ ಹಿಡಿಯಲಾಗಿದೆ. ಹುಲಿಯನ್ನು ಚಿಕಿತ್ಸೆಗಾಗಿ ಮೈಸೂರು ಮೃಗಾಲಯಕ್ಕೆ ರವಾನಿಸಲಾಗಿದೆ.

ಹುಲಿಯು ಸುಮಾರು ಏಳರಿಂದ ಎಂಟು ವರ್ಷದ ಪ್ರಾಯದ್ದಾಗಿದ್ದು, ನಿತ್ರಾಣ ಸ್ಥಿತಿಯಲ್ಲಿ ಸಂಚರಿಸುತ್ತಿದ್ದ ದೃಶ್ಯ ಬಂಡೀಪುರ ಪ್ರವಾಸೋದ್ಯಮ ಪ್ರದೇಶದ ಗಂಜಿಕಟ್ಟೆ ಬಳಿ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಮಯದಲ್ಲಿ ಕಂಡು ಬಂದಿತ್ತು. ಹುಲಿಯ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ಕಣ್ಗಾವಲು ಇಟ್ಟಿದ್ದರು.

ಬಂಡೀಪುರ; ಗಾಯಾಳು ಹುಲಿ ಪತ್ತೆ, ಅರಣ್ಯ ಇಲಾಖೆ ಕಣ್ಗಾವಲು ಬಂಡೀಪುರ; ಗಾಯಾಳು ಹುಲಿ ಪತ್ತೆ, ಅರಣ್ಯ ಇಲಾಖೆ ಕಣ್ಗಾವಲು

ಹುಲಿಯಿರುವ ಪರಿಸ್ಥಿತಿಯನ್ನು ಗಮನಿಸಿದರೆ ಹುಲಿಯು ಮತ್ತೊಂದು ಹುಲಿಯೊಂದಿಗೆ ಕಾದಾಡಿದ ಪರಿಣಾಮ ಬೆನ್ನಿನ ಕೆಳಭಾಗದ ಎರಡು ಕಡೆಗಳಲ್ಲಿ ದೊಡ್ಡ ಗಾಯವಾಗಿತ್ತು. ಹೀಗಾಗಿ ಬೇಟೆಯಾಡಲು ಸಾಧ್ಯವಾಗದೆ ನಿತ್ರಾಣ ಸ್ಥಿತಿಗೆ ತಲುಪಿರಬಹುದೆಂದು ಶಂಕಿಸಲಾಗಿತ್ತು.

ನಿಟ್ಟುಸಿರು ಬಿಟ್ಟ ನೀಲಗಿರಿ ಜಿಲ್ಲೆ ಜನ; ನರಭಕ್ಷಕ ಹುಲಿ ಸೆರೆ ನಿಟ್ಟುಸಿರು ಬಿಟ್ಟ ನೀಲಗಿರಿ ಜಿಲ್ಲೆ ಜನ; ನರಭಕ್ಷಕ ಹುಲಿ ಸೆರೆ

Injured Tiger Captured In Bandipur Forest

ಹುಲಿಯನ್ನು ಪತ್ತೆ ಹಚ್ಚಲು ಕ್ಯಾಮರಾ ಟ್ರಾಪ್ ಅಳವಡಿಸಿ ನಿಗಾ ಇಡಲಾಗಿತ್ತು, ಹುಲಿ ಚೇತರಿಕೆ ಕಾಣುವ ಲಕ್ಷಣಗಳು ಕಂಡು ಬಾರದ ಕಾರಣ ಗುರುವಾರ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಪಶು ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಬಂಡೀಪುರ; ಹುಲಿ ಜೊತೆ ಸಸ್ಯಾಹಾರಿ ಪ್ರಾಣಿಗಳ ಗಣತಿ ಬಂಡೀಪುರ; ಹುಲಿ ಜೊತೆ ಸಸ್ಯಾಹಾರಿ ಪ್ರಾಣಿಗಳ ಗಣತಿ

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಮೃಗಾಗಲಯಕ್ಕೆ ರವಾನಿಸಿದ್ದಾರೆ. ಹುಲಿಯ ಮೈ ಮೇಲಿನ ಗಾಯ ಗಮನಿಸಿದ ವೇಳೆ, ಕಾಡಾನೆಯ ಜತೆ ಕಾದಾಟದಲ್ಲಿ ಆನೆಯ ಕೊಂಬಿನಿಂದ ಚುಚ್ಚಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ತಿಳಿದುಬಂದಿದೆ. ಸದ್ಯ, ಹುಲಿ ಚಿಕಿತ್ಸೆಗೆ ಸ್ಪಂದಿಸುತ್ತಿದೆ ಎಂದು ತಿಳಿದು ಬಂದಿದೆ.

ಹುಲಿ ಸಂರಕ್ಷಿತ ಅರಣ್ಯವಾದ ಬಂಡೀಪುರದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾದ ಕಾರಣದಿಂದ ಹುಲಿಗಳ ನಡುವೆ ಕಾದಾಟ ಹೆಚ್ಚಾಗುತ್ತಿರುವುದು ಇತ್ತೀಚೆಗಿನ ಬೆಳವಣಿಗೆಯಾಗಿದೆ.

Recommended Video

ಅನನ್ಯಾ ಪಾಂಡೆ ಮತ್ತು ಶಾರುಖ್ ಮಗನಿಗೂ ಇತ್ತಾ ಡ್ರಗ್ಸ್ ಲಿಂಕ್?? | Oneindia Kannada

ಗಾಯಗೊಂಡ ಹುಲಿ ಪತ್ತೆಯಾದಾಗ ಮಾತನಾಡಿದ್ದ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್‌.ಆರ್.ನಟೇಶ್, "ಒಂದು ವೇಳೆ ಹುಲಿಯು ಚೇತರಿಸಿಕೊಳ್ಳದೆ ಇದ್ದಲ್ಲಿ, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಹೇಳಿದ್ದರು.

English summary
Injured tiger that found in Bandipur safari area captured and sent to Mysuru zoo for treatment. Tiger injured during fight with another tiger.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X