ಜಯಾ ನಿಧನಕ್ಕೆ ಚಾಮರಾಜನಗರದಲ್ಲಿ ಶೋಕಾಚರಣೆ

By: ಚಾಮರಾಜನಗರ ಪ್ರತಿನಿಧಿ
Subscribe to Oneindia Kannada

ಚಾಮರಾಜನಗರ, ಡಿಸೆಂಬರ್: ತಮಿಳುನಾಡು ಜನರ ಪಾಲಿನ ಅಮ್ಮ ಮುಖ್ಯಮಂತ್ರಿ ಜೆ. ಜಯಲಲಿತಾ ನಿಧನದ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಾದ್ಯಂತ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಏರಿಸಿ ಶೋಕಾಚರಣೆ ಸಲ್ಲಿಸಲಾಯಿತು.[ಜಯಲಲಿತಾ ಅಪರೂಪದ ಚಿತ್ರಗಳು]

[In Pics : ಜಯಾ ಸಾವು, ಶೋಕಸಾಗರದಲ್ಲಿ 'ಅಮ್ಮ'ನ ಮಕ್ಕಳು]

ಚಾಮರಾಜನಗರ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ರಾಮು ಅಧ್ಯಕ್ಷತೆಯಲ್ಲಿ ವಿವಿಧ ಸರ್ಕಾರಿ ಇಲಾಖೆಯ ಅಧಿಕಾರಿಗಳು ಜನಪ್ರತಿನಿಧಿಗಳು ಸಭೆ ಸೇರಿ ಅಗಲಿದ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾರವರ ನಿಧನಕ್ಕೆ ಕಂಬನಿ ಮಿಡಿದರು.

Jayalalithaa’s demise Mourning in Chamarajanagar district all government offices

ಚಾಮರಾಜನಗರ ಜಿಲ್ಲೆಯ ಶಕ್ತಿ ಕೇಂದ್ರ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಏರಿಸುವ ಮೂಲಕ ಜಯಲಲಿತಾ ಅವರಿಗೆ ಅಂತಿಮ ಗೌರವ ಸಲ್ಲಿಸಲಾಯಿತು.

ಇನ್ನು ಚಾಮರಾಜನಗರ ಜಿಲ್ಲೆಯಾದ್ಯಂತ ಇರುವ ತಾಲೂಕು ಕಚೇರಿ, ಗ್ರಾಮ ಪಂಚಾಯಿತಿ ಕಚೇರಿ, ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತಿತ್ತರ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜ ಅರ್ಧಕ್ಕೆ ಇಳಿಸಿ ಶೋಕಾಚರಣೆ ಮಾಡಲಾಯಿತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Tamil Nadu CM Jayalalithaa’s demise Mourning in all government offices Chamarajanagar district on December 6.
Please Wait while comments are loading...