ಚಾಮರಾಜನಗರ: ಗೆಲುವಿನ ಬಳಿಕ ಶಾಸಕರ ಟೆಂಪಲ್‌ ರನ್, ಮುಡಿ ಕೊಟ್ಟ ಶಾಸಕರ ಪುತ್ರ

ಚಾಮರಾಜನಗರ, ಮೇ 14: ಭಾರೀ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಫಲಿತಾಂಶ ಬಹಿರಂಗವಾಗಿದೆ. ಜನಾಶೀರ್ವಾದ ಪಡೆದ ಬಳಿಕ ಭಗವಂತನ ಆಶೀರ್ವಾದ ಪಡೆಯಲು ನೂತನ ಶಾಸಕರು ದೇವರ ಮೊರೆ ಹೋಗಿದ್ದು ಕಾಲ್ನಡಿಗೆ, ದೇವರಿಗೆ ಮುಡಿ ಕೊಟ್ಟಿದ್ದಾರೆ.

ಹನೂರು ವಿಧಾನಸಭಾ ಕ್ಷೇತ್ರದ ನೂತನ ಶಾಸಕ, ಜೆಡಿಎಸ್‌ನ ಎಂ.ಆರ್.ಮಂಜುನಾಥ್ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ಮಡಿಗೆಯಲ್ಲಿ ತೆರಳಿ ದೇವರ ದರ್ಶನ ಮಾಡುವ ಮೂಲಕ ಹರಕೆ ತೀರಿಸಿದ್ದಾರೆ.

JDS MLA MR Manjunath Visit Male Mahadeshwara Temple

ರಾಜ್ಯದ ಪ್ರಸಿದ್ಧ ತೀರ್ಥ ಕ್ಷೇತ್ರವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ತಮ್ಮ ಬೆಂಬಲಿಗರೊಂದಿಗೆ ಕಾಲ್ನಡಿಗೆಯಲ್ಲಿ ತೆರಳಿ ನಿನ್ನೆ ರಾತ್ರಿ ಹಾಗೂ ಇಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಶಾಸಕನಾಗಿ ಆಯ್ಕೆಯಾದರೇ ತಾಳಬೆಟ್ಟದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ದರ್ಶನ ಪಡೆಯುವುದಾಗಿ ಮಂಜುನಾಥ್ ಹರಕೆ ಹೊತ್ತಿದ್ದರು.‌ ಅದರಂತೆ, ಗೆಲುವು ಸಾಧಿಸಿದ ದಿನವೇ ಬೆಂಬಲಿಗರೊಂದಿಗೆ ತೆರಳಿ ಮಾದಪ್ಪನಿಗೆ ನಮಿಸಿದ್ದಾರೆ.

JDS MLA MR Manjunath Visit Male Mahadeshwara Temple

ಮುಡಿ ಕೊಟ್ಟ ಶಾಸಕರ ಪುತ್ರ

ಚಾಮರಾಜನಗರ ಕ್ಷೇತ್ರದಲ್ಲಿ ಸತತ ನಾಲ್ಕನೇ ಬಾರಿಗೆ ಗೆಲುವು ಸಿ.ಪುಟ್ಟರಂಗಶೆಟ್ಟಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಶಾಸಕರ ಪುತ್ರ ಕುಸುಮರಾಜ್ ದೇವರಿಗೆ ಮುಡಿ ಕೊಟ್ಟಿದ್ದಾರೆ. ಸೋಮಣ್ಣ ಸ್ಪರ್ಧೆ ಬಳಿಕ ಚಾಮರಾಜನಗರ ಹೈ ವೋಲ್ಟೇಜ್ ಕ್ಷೇತ್ರವಾಗಿ ಬದಲಾಗಿತ್ತು, ಗೆಲ್ಲುವ ಉಮೇದಿನಲ್ಲಿ ಸೋಮಣ್ಣ ಇದ್ದರು. ‌ಆದರೆ, ಎಲ್ಲಾ ಲೆಕ್ಕಾಚಾರವನ್ನು ಮತದಾರ ಉಲ್ಟಾ ಮಾಡಿದ್ದು ಪುಟ್ಟರಂಗ ಶೆಟ್ಟಿ ಅವರಿಗೆ ಅನಾಯಸ ಗೆಲುವನ್ನು ತಂದುಕೊಟ್ಟಿದ್ದಾನೆ. ಹಿರಿತನ, ಉಪ್ಪಾರ ಸಮುದಾಯದ ಏಕೈಕ ಶಾಸಕ ಆಗಿರುವ ಪುಟ್ಟರಂಗ ಶೆಟ್ಟಿ ಸಚಿವರಾಗುವ ರೇಸ್‌ನಲ್ಲೂ ಇದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+