ಜೆಡಿಎಸ್ ಇನ್ಮುಂದೆ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು: ಸಿಎಂ ಸಿದ್ದರಾಮಯ್ಯ
ಚಾಮರಾಜನಗರ, ಸೆಪ್ಟೆಂಬರ್, 27: ಜೆಡಿಎಸ್ ಇನ್ಮುಂದೆ ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದು ಸಿಎಂ ಸಿದ್ದರಾಮಯ್ಯ ಚಾಮರಾಜನಗರದಲ್ಲಿ ಹೇಳಿದರು.
ಹನೂರು ತಾಲೂಕಿನ ಕೋಣನಕೆರೆ ಗ್ರಾಮದ ಬುಡಕಟ್ಟು ಶಾಲೆಗೆ ಭೇಟಿಕೊಟ್ಟ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ಯಾತೀತ ಎಂದು ಹೇಳಿಕೊಳ್ಳುವ ಜೆಡಿಎಸ್ ಕೋಮುವಾದಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡ ಮೇಲೆ ಜಾತ್ಯಾತೀತವಾಗಿ ಉಳಿದಿದೆಯೇ? ಜೆಡಿಎಸ್ ಅವರು ಬಿಜೆಪಿಯ ಜೊತೆ ಅಥವಾ ಇನ್ನಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡರೂ ನಮಗೆ ಯಾವುದೇ ತಕರಾರಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್, ಬಿಜೆಪಿಯ ಬಿ ಟೀಂ ಆಗಿದ್ದಿದ್ದರೆ 5 ವರ್ಷ ತಾವೇ ಮುಖ್ಯಮಂತ್ರಿಯಾಗಿರುತ್ತಿದ್ದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಕೊಂಡಿರುವ ಜೆಡಿಎಸ್ ಅನ್ನು ಏನೆಂದು ಕರೆಯಬೇಕು.
ಜೆಡಿಎಸ್ - ಜಾತ್ಯಾತೀತ ಎಂದು ಹೇಳಿಕೊಳ್ಳಬಾರದು ಎಂದರು.
2004ರಲ್ಲಿ ಸಿದ್ದರಾಮಯ್ಯರ ಅವರು ಬಿಜೆಪಿಯ ವೆಂಕಯ್ಯನಾಯ್ಡು ಅವರನ್ನು ಭೇಟಿಯಾಗಿದ್ದರೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿದ ಸಿದ್ದರಾಮಯ್ಯ ಅವರು, ಅಡ್ವಾಣಿಯವರು ಹಿಂದೆ ಜನತಾ ಪಕ್ಷದಲ್ಲಿದ್ದಾಗ ಅವರನ್ನು ಭೇಟಿ ಮಾಡಿದ್ದು ನಿಜ ಎಂದು ತಿಳಿಸಿದರು.












Click it and Unblock the Notifications