ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷರು
ಚಾಮರಾಜನಗರ, ಆಗಸ್ಟ್, 01: "ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಆಗುತ್ತಿರುವ ಬೆಳವಣಿಗೆ ಸರ್ಕಾರದ ಮೇಲೆ ಗಂಭೀರ ಪರಿಣಾಮ ಬೀರಲಿದೆ" ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ಕರ್ನಾಟಕದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಚಾಮರಾಜನಗರದಲ್ಲಿ ಮಾತನಾಡಿದ ಅವರು, "ಹಿಂದೂ ಪದಕ್ಕೆ ರಕ್ತ ಸೇರಿಸಲು ಹೊರಟಿದ್ದಾರೆ. ಎತ್ತಿಕಟ್ಟಿ ರಾಜಕಾರಣ ಮಾಡುವುದು ಬಹಳಷ್ಟು ದಿನ ಉಳಿಯಲ್ಲ. ಇದು ಬಿಜೆಪಿಗೆ ಮುಳುವಾಗಲಿದೆ. ಒಗ್ಗೂಡಿ ಜೀವಿಸಿದಾಗ ಮಾತ್ರ ಹಿಂದೂ ರಾಷ್ಟ್ರ" ಎಂದರು.
"ದ್ವೇಷದಿಂದ ರಾಜಕಾರಣ ಮಾಡಲಾಗುವುದಿಲ್ಲ. ಜನರೇ ಬಿಜೆಪಿ ಅವರಿಗೆ ಪಾಠ ಕಲಿಸುತ್ತಾರೆ. ಬಿಜೆಪಿ ಅವರು ಸುಳ್ಳುಗಳನ್ನು ಬೇರೆ ಬೇರೆ ರೀತಿಯಾಗಿ ಬಿಂಬಿಸುತ್ತಿದ್ದಾರೆ. ಜನರು ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ಗೆ ಮಣೆ ಹಾಕಲಿದ್ದಾರೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ಜೆಡಿಎಸ್ ಸ್ವತಂತ್ರವಾಗಿ ಬಹುಮತ ಸರ್ಕಾರ ರಚಿಸಲು ಅವಕಾಶ ಕೊಡಿ. ಭರವಸೆಗಳು ಈಡೇರದಿದ್ದರೇ ರಾಜಕಾರಣ ಮಾಡಲ್ಲ ಎಂದು ಕುಮಾರಸ್ವಾಮಿ ಸವಾಲು ಹಾಕಿ ಜನರ ಬಳಿ ಹೋಗುತ್ತಿದ್ದಾರೆ. ಜನರು ಜನತಾದಳಕ್ಕೆ ಬೆಂಬಲಿಸುತ್ತಾರೆ ಎಂದು ನಮಗೆ ವಿಶ್ವಾಸವಿದೆ" ಎಂದರು.
ರಾಜ್ಯದಲ್ಲಿ ಮುಂದಿನ ಚುನಾವಣೆಗಳಿಗೆ ಪಕ್ಷಗಳು ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿವೆ. ಬಿಜೆಪಿ, ಕಾಂಗ್ರೆಸ್ ದೊಡ್ಡಮಟ್ಟದಲ್ಲಿ ಪ್ರಚಾರಗಳನ್ನು ಪ್ರರಂಭಿಸಿದ್ದರೆ, ಇತ್ತ ಜೆಡಿಎಸ್ ಕೂಡ ಜನರಿಗೆ ಭರವಸೆಗಳನ್ನು ನೀಡುತ್ತಾ ಮತದಾರರನ್ನು ತನ್ನತ್ತ ಸೆಳೆಯುವ ಪ್ರಯತ್ನ ಮಾಡುತ್ತಿದೆ.

ಚಾಮರಾಜನಗರಕ್ಕೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಪಕ್ಷದ ಮುಂದಿನ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಲಿದ್ದಾರೆ.












Click it and Unblock the Notifications