Karnataka bandh: ನಾಳೆ ಚಾಮರಾಜನಗರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಚಾಮರಾಜನಗರ, ಸೆಪ್ಟೆಂಬರ್, 29: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್‌ಗೆ ಕರೆ ಕೊಡಲಾಗಿದೆ. ಈ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಚಾಮರಾಜನಗರದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಆದೇಶ ಹೊರಡಿಸಿದ್ದಾರೆ.
ಹಾಗೆಯೇ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ, ಬೇಲೂರು, ಅರಕಲಗೂಡು, ಹಾಸನ, ಆಲೂರು 5 ತಾಲೂಗಳಲ್ಲಿ ಪ್ರಾಥಮಿಕ ಪ್ರೌಢ-ಶಾಲೆಗಳಿಗೆ ಬಿಇಓಗಳು ರಜೆ ಘೋಷನೆ ಮಾಡಿದ್ದಾರೆ. ಇನ್ನು ಪದವಿ ಪೂರ್ವ ಕಾಲೇಜುಗಳಿಗೆ ರಜೆಯ ಒತ್ತಾಯ ಬಂದರೆ ಪ್ರಾಂಶುಪಾಲರು ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಗುಂಡ್ಲುಪೇಟೆ ಎಪಿಎಂಸಿಗೆ ರಜೆ ಘೋಷಣೆ
ಸೆಪ್ಟೆಂಬರ್ 29ರಂದು ಕರ್ನಾಟಕ ಬಂದ್ ಪ್ರಯುಕ್ತ ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ(ಎಪಿಎಂಸಿ)ಗೆ ರಜೆ ಘೋಷಣೆ ಮಾಡಲಾಗಿದೆ.
ಗುಂಡ್ಲುಪೇಟೆ ಕೃಷಿ ಉತ್ಪನ್ನ ಮಾರುಕಟ್ಟೆ ವರ್ತಕರು, ದಲ್ಲಾಳಿಗಳು ಹಾಗೂ ಕೂಲಿ ಕಾರ್ಮಿಕರು ಸೆಪ್ಟೆಂಬರ್ 29ರ ಕರ್ನಾಟಕ ಬಂದ್ಗೆ ಬೆಂಬಲ ಸೂಚಿಸುವ ಹಿನ್ನೆಲೆ ಮಾರುಕಟ್ಟೆಗೆ ರಜೆ ಘೋಷಣೆ ಮಾಡಬೇಕು ಎಂದು ಮನವಿ ಸಲ್ಲಿಸಿದ್ದು, ಈ ಹಿನ್ನೆಲೆ ಎಪಿಎಂಸಿ ಕಾರ್ಯದರ್ಶಿ ಎಸ್.ಶ್ರೀಧರ್ ನಾಳೆ ರಜೆ ಘೋಷಣೆ ಮಾಡಿ ಪ್ರಕಟಣೆ ಹೊರಡಿಸಿದ್ದಾರೆ. ಜೊತೆಗೆ ರಜೆ ಕಾರಣ ಶುಕ್ರವಾರ ಯಾವುದೇ ರೈತರು ಮಾರುಕಟ್ಟೆಗೆ ಹಣ್ಣು, ತರಕಾರಿ ತರದಂತೆ ಮನವಿ ಮಾಡಿದ್ದಾರೆ.
ಹಲವು ಸಂಘಟನೆ ಬೆಂಬಲ
ಕರ್ನಾಟಕ ಬಂದ್‍ಗೆ ಗುಂಡ್ಲುಪೇಟೆ ತಾಲೂಕು ಕೇಂದ್ರದಲ್ಲೂ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ರೈತ ಸಂಘಟನೆ ಹಾಗೂ ವಿವಿಧ ಪ್ರಗತಿಪರ ಮತ್ತು ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ರೈತ ಸಂಘ, ಕರವೇ(ಪ್ರವೀಣ್ ಶೆಟ್ಟಿ ಬಣ), ಮಾನವ ಹಕ್ಕುಗಳ ಸಮಿತಿ, ಮಾನವ ಬಂಧುತ್ವ ವೇದಿಕೆ, ಕಾವಲು ಪಡೆ ಸಂಘಟನೆ, ಎಸ್‍ಡಿಪಿಐ ಸಂಘಟನೆ, ಬಿಎಸ್‍ಪಿ ಮತ್ತು ವೈಭವ ಕರ್ನಾಟಕ ಸೇರಿಂತೆ ವಿವಿಧ ಪ್ರಗತಿ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಬೆಂಬಲ ಸೂಚಿಸಿದ್ದಾರೆ.












Click it and Unblock the Notifications