Karnataka budget 2024: ಗಡಿ ಜಿಲ್ಲೆ ಜನರ ಎಷ್ಟು ನಿರೀಕ್ಷೆಗಳು ಈಡೇರಿದ್ವು?
ಚಾಮರಾಜನಗರ: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15 ನೇ ಬಜೆಟ್ ಮಂಡನೆ ಮಾಡಿದ್ದು ಗಡಿಜಿಲ್ಲೆ ಜನರು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಅಲ್ಪ ಅನುದಾನಕ್ಕಷ್ಟೇ ಬಜೆಟ್ ಸೀಮಿತಗೊಂಡಿದೆ.
ಯಳಂದೂರು ತಾಲೂಕು ಆಸ್ಪತ್ರೆಯನ್ನು 100 ಹಾಸಿಗೆಗೆ ಮೇಲ್ದರ್ಜೆಗೇರಿಸಬೇಕು ಎನ್ನುವ ಬೇಡಿಕೆ ಬಜೆಟ್‌ನಲ್ಲಿ ಈಡೇರಿದೆ. ಚಾಮರಾಜನಗರ ಜಿಲ್ಲಾಸ್ಪತ್ರೆಯ ಅಗತ್ಯ ವೈದ್ಯಕೀಯ ಉಪಕರಣ ಖರೀದಿಗಾಗಿ 2025-26 ನೇ ಸಾಲಿನಲ್ಲಿ 150 ಕೋಟಿ ಹಣ ಕೊಡುವುದಾಗಿ ಸಿಎಂ ಹೇಳಿದ್ದಾರೆ.
ವಿದ್ಯಾರ್ಥಿಗಳಲ್ಲಿ ವಿಜ್ಞಾನ ಅಧ್ಯಯನಕ್ಕೆ ತೊಡಗಲು, ಆಸಕ್ತಿ ಬೆಳೆಸಿಕೊಳ್ಳಲು ಚಾಮರಾಜನಗರದಲ್ಲಿ ವಿಜ್ಞಾನ ಕೇಂದ್ರ ಇಲ್ಲವೇ ತಾರಾಲಯ ಕಾರ್ಯಾರಂಭ ಮಾಡುವುದಾಗಿ ಹೇಳಿದ್ದಾರೆ. ಜೊತೆಗೆ ಪ್ರಾಣಿ- ಮಾನವ ಸಂಘರ್ಷ ತಡೆಗೆ ಬಂಡೀಪುರದಲ್ಲಿ ಕಾರ್ಯಪಡೆ ರಚನೆ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.

ಗಡಿಜಿಲ್ಲೆ ಚಾಮರಾಜನಗರದಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿದ್ದು, ಬಂಪರ್ ಅನುದಾನ ಸಿಗುವ ನೀರಿಕ್ಷೆ ಇತ್ತು. ಆದರೆ, ಅಲ್ಪ ಅನುದಾನ ಘೋಷಣೆ ಮಾಡಿದ್ದು, ಬಂಡೀಪುರದಲ್ಲಿ ಇಂಟರ್ ಪ್ರಿಟೇಷನ್ ಸೆಂಟರ್ ತೆರೆಯಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಒಟ್ಟಿನಲ್ಲಿ ಸಿದ್ದರಾಮಯ್ಯ ಬಜೆಟ್ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದ ಗಡಿಜಿಲ್ಲೆ ಜನರು ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಜಗದೀಶ್ ಶೆಟ್ಟರ್ ವಿರುದ್ಧ ಆಕ್ರೋಶ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿರುದ್ಧ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ ಘಟನೆ ಚಾಮರಾಜನಗರ ತಾಲೂಕಿನ ಕೆ.ಗುಡಿಯಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟಿಸಿದ ವಿಚಾರಕ್ಕೆ ಶೆಟ್ಟರ್ ಹರಿಹಾಯ್ದಿದ್ದರು. ಶೆಟ್ಟರ್ ಅವರ ಹೇಳಿಕೆ ಖಂಡಿಸಿ ಕಾಂಗ್ರೆಸ್ ಯುವ ಘಟಕ, ವಿದ್ಯಾರ್ಥಿ ಘಟಕ ವತಿಯಿಂದ ಇಂದು ಜಗದೀಶ್ ಶೆಟ್ಟರ್ ಅವರ ಕಾರನ್ನು ತಡೆಯಲು ಯತ್ನಿಸಿ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಕಳೆದ ಮೂರು ದಿನಗಳಿಂದ ಜಗದೀಶ್ ಶೆಟ್ಟರ್ ಕುಟುಂಬದ ಒಟ್ಟಿಗೆ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡು ಕೆ.ಗುಡಿ ಜಂಗಲ್ ಲಾಡ್ಜ್‌ನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಅವರು ಬೆಂಗಳೂರಿಗೆ ಹಿಂತಿರುಗುವಾಗ ಕೈ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ.












Click it and Unblock the Notifications