ನಾಯಿ-ನರಿ ಮಾತಿಗೆಲ್ಲ ಪ್ರತಿಕ್ರಿಯಿಸಲ್ಲ: ಬಿ.ವೈ.ವಿಜಯೇಂದ್ರ ಆಪ್ತ ರುದ್ರೇಶ್‌ಗೆ ವಿ.ಸೋಮಣ್ಣ ಟಾಂಟ್‌

ಚಾಮರಾಜನಗರ, ಏಪ್ರಿಲ್‌, 14: ಚಾಮರಾಜನಗರ ಕ್ಷೇತ್ರದಿಂದ ವಿ.ಸೋಮಣ್ಣಗೆ ಬಿಜೆಪಿ ಟಿಕೆಟ್‌ ಘೋಷಣೆ ಮಾಡಿತ್ತು. ಇನ್ನು ಟಿಕೆಟ್‌ ವಂಚಿತರಾಗಿದ್ದ ಬಿ.ವೈ.ವಿಜಯೇಂದ್ರ ಆಪ್ತ ರುದ್ದೇಶ್‌ ವಿ.ಸೋಮಣ್ಣನವರ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸೋಮಣ್ಣ, ನಾಯಿ-ನರಿಗಳ ಮಾತಿಗೆಲ್ಲಾ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎನ್ನುವ ಮೂಲಕ ರುದ್ರೇಶ್‌ಗೆ ಟಾಂಗ್‌ ನೀಡಿದರು.

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ನನ್ನ ವಿರುದ್ಧ ನನ್ನ ಮೇಲ್ಪಟ್ಟವರು ಮಾತನಾಡಿದರೇ ನಾನು ಮಾತನಾಡುತ್ತೇನೆ. ಅದು ಬಿಟ್ಟು ನಾಯಿ-ನರಿಗೆಲ್ಲಾ ಪ್ರತಿಕ್ರಿಯಿಸಲ್ಲ. ಆ ರೀತಿಯ ಮನಸ್ಥಿತಿಯವರ ಬಗ್ಗೆ ನೀವು ಕೂಡ ಪ್ರಶ್ನೆ ಕೇಳಬೇಡಿ ಎಂದು ಗರಂ ಆದರು.

Karnataka election 2023: V.Somanna outrage against BY Vijayendra close aide Rudresh

ನಾಮಪತ್ರ ಸಲ್ಲಿಕೆ ಬಗ್ಗೆ ಸೋಮಣ್ಣ ಹೇಳಿದ್ದೇನು?

ಇನ್ನು ಬಂಡಾಯದ ವಿಚಾರ ಬಗ್ಗೆ ಪ್ರತಿಕ್ರಿಯಿಸಿದ ಸೋಮಣ್ಣ, ಅದು ಪಕ್ಷದ ಆಂತರೀಕ ವಿಚಾರವಾಗಿದೆ. ಪಕ್ಷದ ನಾಯಕರು ಎಲ್ಲವನ್ನೂ ಸರಿ ಮಾಡುತ್ತಾರೆ. ಏಪ್ರಿಲ್‌ 17 ರಂದು ವರುಣದಲ್ಲಿ ಮತ್ತು 19 ರಂದು ಚಾಮರಾಜನಗರದಲ್ಲಿ ನಾಮಪತ್ರ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ನಮ್ಮ ವರಿಷ್ಟರ ಸೂಚನೆಯ ಮೇರೆಗೆ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಜನರು ಬದಲಾವಣೆ ಬಯಸಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದೆ. ಚುನಾವಣೆಯಲ್ಲಿ ಕಾರ್ಯಕರ್ತರೇ ಸ್ಟಾರ್ ಪ್ರಚಾರಕರಾಗಿದ್ದಾರೆ. ಆದ್ದರಿಂದ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲ್ಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಗೋವಿಂದರಾಜನಗರದಲ್ಲಿ ಸೋಲುತ್ತೇನೆ ಅಂತಾ ಚಾಮರಾಜನಗರಕ್ಕೆ ಬಂದಿಲ್ಲ. ಆ ಕೆಲಸನಾ ನನ್ನ ಎಕ್ಡನೂ ಮಾಡುವುದಿಲ್ಲ ಎಂದು ವಸತಿ ಸಚಿವ ವಿ.ಸೋಮಣ್ಣ ಕಿಡಿಕಾರಿದರು. ಬಿಜೆಪಿ ಟಿಕೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಾಮರಾಜನಗರಕ್ಕೆ ಆಗಮಿಸಿದ ವಿ‌.ಸೋಮಣ್ಣ, ಬಿಜೆಪಿ ಕಚೇರಿಯಲ್ಲಿ ಪದಾಧಿಕಾರಿಗಳ ಸಭೆ ನಡೆಸಿದರು.

ಈ ವೇಳೆ ಅವರು ಮಾತನಾಡಿ, ಗೋವಿಂದರಾಜನಗರದಲ್ಲಿ ಸೋಲುತ್ತೇನೆ ಅಂತಾ ಸೋಮಣ್ಣ ಇಲ್ಲಿಗೆ ಬಂದಿದ್ದಾರೆ ಅಂತೆಲ್ಲಾ ಕೆಲವರು ಹೇಳುತ್ತಾರೆ. ಆದರೆ ಆ ಕೆಲಸವನ್ನು ನನ್ನ ಎಕ್ಡನೂ ಮಾಡುವುದಿಲ್ಲ. ಬೆಂಗಳೂರಿನಲ್ಲಿ 5-6 ಕ್ಷೇತ್ರ ಗೆಲ್ಲಿಸುವ ಸಾಮರ್ಥ್ಯ ನನಗಿದೆ ಎಂದರು.

ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟಿದೆ

ನನಗೆ ಇದು ಬಯಸದೇ ಬಂದ ಭಾಗ್ಯ ಅಂತಲ್ಲಾ, ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇಟ್ಟು ಈ ಕೆಲಸವನ್ನು ಕೊಟ್ಟಿದೆ. ನಾನೋರ್ವ ಜಾತ್ಯಾತೀತ ನಾಯಕ, ಸಿದ್ದರಾಮಯ್ಯನವರನ್ನು ಸೋಲಿಸುವ ಉದ್ದೇಶದಿಂದ ನನ್ನನ್ನು ಕಣಕ್ಕಿಳಿಸಿದ್ದಾರೆ. ವರುಣದಲ್ಲಿ ನನ್ನನ್ನು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ತಕಥೈ ಅಂಥಾ ಕುಣಿತ್ತಿದ್ದಾರೆ, ಚಾಮರಾಜನಗರಕ್ಕೆ ಏನಾಗಿದೆ. ಪುಟ್ ಬಾಲ್, ವಾಲಿಬಾಲ್, ಗೋಲಿ ಎಲ್ಲಾ ಆಡುತ್ತಿದ್ದೀರಾ ಎಂದು ಬಂಡಾಯ ಸಾರಿದ್ಧವರಿಗೆ ನಯವಾಗಿ ಚೇಡಿಸಿದರು.

ಜಿಲ್ಲೆ ಘೋಷಣೆ ಆಗಿದ್ದಾಗಿನಿಂದ ಈಗಲೂ ಚಾಮರಾಜನಗರ ಹಾಗೇ ಇದೆ. ಇದರ ಸಮಗ್ರ ಅಭಿವೃದ್ಧಿಯನ್ನು ಸೋಮಣ್ಣ ಮಾಡುತ್ತಾನೆ. ಬಳಿಕ ನಿಮ್ಮ ಸೇವಕನಾಗಿರುತ್ತೇನೆ. ಹೀಗೆ ಮೋದಿ ಕಾರ್ಯಕ್ರಮದ ಮೇಲೆ ನಂಬಿಕೆ ಇದ್ದರೇ ನನ್ನನ್ನು ಬೆಂಬಲಿಸುವ ಮೂಲಕ ಜನರ ಬಳಿ ತೆರಳಿ ಮತಯಾಚನೆ ಮಾಡಿ ಎಂದು ಮನವಿ ಮಾಡಿದರು.

ಬಂಡಾಯಕ್ಕೆ ಮುಲಾಮು ಹಚ್ಚುವ ಪ್ಲಾನ್‌

ಹಾಗೆಯೇ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿಯಿಂದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ಟಿಕೆಟ್‌ ಸಿಗದವರು ಬಂಡಾಯ ಎದ್ದಿದ್ದಾರೆ. ಆದ್ದರಿಂದ ಬಂಡಾಯಕ್ಕೆ ಮುಲಾಮು ಹಚ್ಚಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಟಿಕೆಟ್ ಘೋಷಣೆಯಾದ ಬಳಿಕ ಸ್ಫೋಟಗೊಂಡಿದ್ದ ಬಂಡಾಯಕ್ಕೆ ಬಿಜೆಪಿ ಮುಲಾಮು ಹಚ್ಚುವ ಕೆಲಸಕ್ಕೆ ಮುಂದಾಗಿದ್ದು, ಟಿಕೆಟ್ ವಂಚಿತರ ಮನೆಗೆ ನಾಯಕರು ಪರೇಡ್ ಆರಂಭಿಸಿದ್ದಾರೆ. ಚಾಮರಾಜನಗರ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗಶ್ರೀ ಪ್ರತಾಪ್ ಮತ್ತು ಅವರ ಬೆಂಬಲಿಗರು ಟಿಕೆಟ್ ಘೋಷಣೆಯಾದ ಬಳಿಕ ಕೆರಳಿ ಕೆಂಡವಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ವಸತಿ ಸಚಿವ ವಿ.ಸೋಮಣ್ಣ, ಚಾಮರಾಜನಗರ ಜಿಲ್ಲಾ ಚುನಾವಣಾ ಉಸ್ತುವಾರಿ ಹೊತ್ತಿರುವ ಬಿಹಾರದ ಎಂಎಲ್‌ಸಿ ಜೈಸ್ವಾಲ್, ಮಾಜಿ ಎಂಪಿ ಕೋಟೆ ಶಿವಣ್ಣ ನಾಗಶ್ರೀ ಪ್ರತಾಪ್ ಅವರ ಮನೆಗೆ ಭೇಟಿಕೊಟ್ಟು ಬಂಡಾಯ ಶಮನಕ್ಕೆ ಮುಂದಾಗಿದ್ದಾರೆ. ಇನ್ನು, ಬಂಡಾಯ ಶಮನದ ಸಭೆಯಲ್ಲಿ ನಾಗಶ್ರೀ ಪ್ರತಾಪ್, ರಾಮಚಂದ್ರು ಮತ್ತು ಅವರ ಬೆಂಬಲಿಗರು ಭಾಗಿ ಆಗಿದ್ದರು.

ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದ ನಾಗಶ್ರೀ ಪ್ರತಾಪ್ ಅವರ ಬೆಂಬಲಿಗರು ಗುರುವಾರ (ಏಪ್ರಿಲ್‌ 14) ಚಾಮರಾಜನಗರದಲ್ಲಿ ಸಭೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಸಭೆಯಲ್ಲಿ ನಾಗಶ್ರೀ ಪ್ರತಾಪ್ ಅವರ ಸಾವಿರಾರು ಬೆಂಬಲಿಗರು ಭಾಗಿ ಆಗಿದ್ದರು. ಈ ವೇಳೆ ಅವರು ಬಿ.ಎಸ್‌.ಯಡಿಯೂರಪ್ಪ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜೊತೆಗೆ ವಿ.ಸೋಮಣ್ಣ ಅವರ ವಿರುದ್ಧವೂ ಕೆಲವರು ಬೆಂಬಲಿಗರು ಕಿಡಿಕಾರಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+