ಚಾಮರಾಜನಗರ ಕ್ಷೇತ್ರದ ಬಿಜೆಪಿ ಬಂಡಾಯ ಶಮನಕ್ಕೆ ವಿ.ಸೋಮಣ್ಣ ಮುಲಾಮು, ಟಿಕೆಟ್ ವಂಚಿತರ ಮನೆಗೆ ಭೇಟಿ

ಚಾಮರಾಜನಗರ, ಏಪ್ರಿಲ್‌, 14: ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿಯಿಂದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಇದೀಗ ಟಿಕೆಟ್‌ ಸಿಗದವರು ಬಂಡಾಯ ಎದ್ದಿದ್ದಾರೆ. ಆದ್ದರಿಂದ ಬಂಡಾಯಕ್ಕೆ ಮುಲಾಮು ಹಚ್ಚಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

ಟಿಕೆಟ್ ಘೋಷಣೆಯಾದ ಬಳಿಕ ಸ್ಫೋಟಗೊಂಡಿದ್ದ ಬಂಡಾಯಕ್ಕೆ ಬಿಜೆಪಿ ಮುಲಾಮು ಹಚ್ಚುವ ಕೆಲಸಕ್ಕೆ ಮುಂದಾಗಿದ್ದು, ಟಿಕೆಟ್ ವಂಚಿತರ ಮನೆಗೆ ನಾಯಕರು ಪರೇಡ್ ಆರಂಭಿಸಿದ್ದಾರೆ. ಚಾಮರಾಜನಗರ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗಶ್ರೀ ಪ್ರತಾಪ್ ಮತ್ತು ಅವರ ಬೆಂಬಲಿಗರು ಟಿಕೆಟ್ ಘೋಷಣೆಯಾದ ಬಳಿಕ ಕೆರಳಿ ಕೆಂಡವಾಗಿದ್ದಾರೆ.

Karnataka election 2023: V.Somanna visited BJP rebel candidates house in Chamarajanagar

ಈ ಹಿನ್ನೆಲೆಯಲ್ಲಿ ವಸತಿ ಸಚಿವ ವಿ.ಸೋಮಣ್ಣ, ಚಾಮರಾಜನಗರ ಜಿಲ್ಲಾ ಚುನಾವಣಾ ಉಸ್ತುವಾರಿ ಹೊತ್ತಿರುವ ಬಿಹಾರದ ಎಂಎಲ್‌ಸಿ ಜೈಸ್ವಾಲ್, ಮಾಜಿ ಎಂಪಿ ಕೋಟೆ ಶಿವಣ್ಣ ನಾಗಶ್ರೀ ಪ್ರತಾಪ್ ಅವರ ಮನೆಗೆ ಭೇಟಿಕೊಟ್ಟು ಬಂಡಾಯ ಶಮನಕ್ಕೆ ಮುಂದಾಗಿದ್ದಾರೆ. ಇನ್ನು, ಬಂಡಾಯ ಶಮನದ ಸಭೆಯಲ್ಲಿ ನಾಗಶ್ರೀ ಪ್ರತಾಪ್, ರಾಮಚಂದ್ರು ಮತ್ತು ಅವರ ಬೆಂಬಲಿಗರು ಭಾಗಿ ಆಗಿದ್ದರು.

ರೊಚ್ಚಿಗೆದ್ದ ಬಂಡಾಯ ಅಭ್ಯರ್ಥಿಗಳು

ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ್ದ ನಾಗಶ್ರೀ ಪ್ರತಾಪ್ ಅವರ ಬೆಂಬಲಿಗರು ಗುರುವಾರ (ಏಪ್ರಿಲ್‌ 14) ಚಾಮರಾಜನಗರದಲ್ಲಿ ಸಭೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಸಭೆಯಲ್ಲಿ ನಾಗಶ್ರೀ ಪ್ರತಾಪ್ ಅವರ ಸಾವಿರಾರು ಬೆಂಬಲಿಗರು ಭಾಗಿ ಆಗಿದ್ದರು. ಈ ವೇಳೆ ಅವರು ಬಿ.ಎಸ್‌.ಯಡಿಯೂರಪ್ಪ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜೊತೆಗೆ ವಿ.ಸೋಮಣ್ಣ ಅವರ ವಿರುದ್ಧವೂ ಕೆಲವರು ಬೆಂಬಲಿಗರು ಕಿಡಿಕಾರಿದರು.

ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು. ಹಣಕಾಸಿನ ಬಗ್ಗೆ ಚಿಂತಿಸಬೇಡಿ, ಜನರೇ ತಮ್ಮ ಕೈಲಾದಷ್ಟು ಸಹಾಯ ಮಾಡಿ ಗೆಲ್ಲಿಸುತ್ತಾರೆ. ಈ ಹಿಂದೆ ವಾಟಾಳ್ ನಾಗರಾಜ್ ಅವರೂ ಕೂಡ ಪಕ್ಷೇರವಾಗಿ ನಿಂತು ಗೆದ್ದಿರುವ ನಿದರ್ಶನ ಇರುವುದರಿಂದ ಬೆಂಬಲಿಗರೇ ಸವಾಲಾಗಿ ಸ್ವೀಕರಿಸಿ ನಿಮ್ಮನ್ನು ಗೆಲ್ಲಿಸುತ್ತೇವೆ ಎಂದು ಘೋಷಿಸಿದರು.

4 ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ, ಬಿಜೆಪಿಯು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಅದೇ ರೀತಿ ಮೊದಲನೇ ಪಟ್ಟಿಯಲ್ಲೇ ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಚಾಮರಾಜನಗರ ವಿ.ಸೋಮಣ್ಣ, ಹನೂರು ಡಾ.ಪ್ರೀತಂ ನಾಗಪ್ಪ, ಕೊಳ್ಳೇಗಾಲ ಎನ್‌.ಮಹೇಶ್‌, ಗುಂಡ್ಲುಪೇಟೆಯಿಂದ ಸಿ.ಎಸ್.ನಿರಂಜನ್‌ಕುಮಾರ್ ಅವರಿಗೆ ಟಿಕೆಟ್‌ ನೀಡಲಾಗಿದೆ.

ಚಾಮರಾಜನಗರ ಜಿಲ್ಲೆಯಿಂದ ಸ್ಪರ್ಧಿಸಬೇಕೆಂಬ ವಸತಿ ಸಚಿವ ವಿ. ಸೋಮಣ್ಣ ಅವರ ಬಹುಕಾಲದ ಕನಸು ನನಸಾಗಿದ್ದು, ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ ಬಿಟ್ಟುಕೊಟ್ಟು, ಗಡಿ ಜಿಲ್ಲೆ ಚಾಮರಾಜನಗರ ರಾಜಕೀಯ ಅಖಾಡಕ್ಕೆ ಕಾಲಿಟ್ಟಿದ್ದಾರೆ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವರುಣಾ ಮತ್ತು ಚಾಮರಾಜನಗರ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹ್ಯಾಟ್ರಿಕ್ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರನ್ನು ಒಮ್ಮೆಗೆ ಎದುರಿಸಲು ಸಜ್ಜಾಗಿದ್ದಾರೆ.

ಈ ಕ್ಷೇತ್ರದಿಂದ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ವಿಧಾನಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ, ಜಿಲ್ಲಾ ಪಂಚಾಯತ್‌ ಮಾಜಿ ಅಧ್ಯಕ್ಷರಾದ ಜಿ. ನಾಗಶ್ರೀ ಪ್ರತಾಪ್, ಎಂ. ರಾಮಚಂದ್ರ, ಕಾಡಾ ಮಾಜಿ ಅಧ್ಯಕ್ಷ ಜಿ. ನಿಜಗುಣರಾಜು, ರೈತ ಮುಖಂಡ ಅಮ್ಮನಪುರ ಮಲ್ಲೇಶ್, ಕಿವಿ ಮೂಗು ಗಂಟಲು ತಜ್ಞರ ಸಂಘದ ರಾಜ್ಯಾಧ್ಯಕ್ಷ ಡಾ.ಎ.ಆರ್. ಬಾಬು, ಮಾಜಿ ಜಿಲ್ಲಾಧ್ಯಕ್ಷ ಸುಂದರ್, ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯನೂರೊಂದು ಶೆಟ್ಟಿ, ಕೆಆರ್‌ಐಡಿಎಲ್ ಅಧ್ಯಕ್ಷ ರುದ್ರೇಶ್ ಟಿಕೆಟ್ ಬಯಸಿದವರಾಗಿದ್ದರು.

ದರೆ ಆರಂಭದಿಂದಲೂ ಸಚಿವ ವಿ.ಸೋಮಣ್ಣನವರ ಹೆಸರು ಮಾತ್ರ ಪ್ರಬಲವಾಗಿ ಕೇಳಿ ಬರುತ್ತಿತ್ತು. ಸೋಮಣ್ಣ ಅವರಿಗೆ ಟಿಕೆಟ್ ತಪ್ಪಿಸುವ ಸಲುವಾಗಿ ಸಾಕಷ್ಟು ಪ್ರಯತ್ನಗಳು ನಡೆಸಿದ್ದು, ಕೊನೆಗೂ ಹೈಕಮಾಂಡ್ ಮಾತ್ರ ಸೋಮಣ್ಣ ಅವರ ಕೈ ಹಿಡಿದಿದೆ. ಇನ್ನು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಹಾಲಿ ಬಿಜೆಪಿ ಶಾಸಕ ಸಿ.ಎಸ್.ನಿರಂಜನ್‌ಕುಮಾರ್ ಮತ್ತು ಚಾಮುಲ್ ನಿರ್ದೇಶಕ ಎಂ.ಪಿ. ಸುನೀಲ್ ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದರು. ಆದರೆ ನಿರಂಜನ್‌ಕುಮಾರ್ ಅವರಿಗೆ 5ನೇ ಬಾರಿಗೆ ಟಿಕೆಟ್ ಒಲಿದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+