BJP Candidates List: ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳ ಘೋಷಣೆ, ವಿವರ ಇಲ್ಲಿದೆ
ಚಾಮರಾಜನಗರ, ಏಪ್ರಿಲ್, 12: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ, ಮಂಗಳವಾರ ರಾತ್ರಿ ಬಿಜೆಪಿಯು ಅಭ್ಯರ್ಥಿಗಳ ಮೊದಲನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದೇ ರೀತಿ ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಿಗೂ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಚಾಮರಾಜನಗರ ವಿ.ಸೋಮಣ್ಣ, ಹನೂರು ಡಾ.ಪ್ರೀತಂ ನಾಗಪ್ಪ, ಕೊಳ್ಳೇಗಾಲ ಎನ್.ಮಹೇಶ್, ಗುಂಡ್ಲುಪೇಟೆಯಿಂದ ಸಿ.ಎಸ್.ನಿರಂಜನ್‌ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದೆ.
ಚಾಮರಾಜನಗರ ಜಿಲ್ಲೆಯಿಂದ ಸ್ಪರ್ಧಿಸಬೇಕೆಂಬ ವಸತಿ ಸಚಿವ ವಿ. ಸೋಮಣ್ಣ ಅವರ ಬಹುಕಾಲದ ಕನಸು ನನಸಾಗಿದ್ದು, ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರ ಬಿಟ್ಟುಕೊಟ್ಟು, ಗಡಿ ಜಿಲ್ಲೆ ಚಾಮರಾಜನಗರ ರಾಜಕೀಯ ಅಖಾಡಕ್ಕೆ ಕಾಲಿಟ್ಟಿದ್ದಾರೆ. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ವರುಣಾ ಮತ್ತು ಚಾಮರಾಜನಗರ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹ್ಯಾಟ್ರಿಕ್ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರನ್ನು ಒಮ್ಮೆಗೆ ಎದುರಿಸಲು ಸಜ್ಜಾಗಿದ್ದಾರೆ.

ಕ್ಷೇತ್ರವಾರು ಬಿಜೆಪಿ ಟಿಕೆಟ್ ಘೋಷಣೆಯ ವಿವರ
ಈ ಕ್ಷೇತ್ರದಿಂದ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ವಿಧಾನಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ. ನಾಗಶ್ರೀ ಪ್ರತಾಪ್, ಎಂ. ರಾಮಚಂದ್ರ, ಕಾಡಾ ಮಾಜಿ ಅಧ್ಯಕ್ಷ ಜಿ. ನಿಜಗುಣರಾಜು, ರೈತ ಮುಖಂಡ ಅಮ್ಮನಪುರ ಮಲ್ಲೇಶ್, ಕಿವಿ ಮೂಗು ಗಂಟಲು ತಜ್ಞರ ಸಂಘದ ರಾಜ್ಯಾಧ್ಯಕ್ಷ ಡಾ.ಎ.ಆರ್. ಬಾಬು, ಮಾಜಿ ಜಿಲ್ಲಾಧ್ಯಕ್ಷ ಸುಂದರ್, ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯನೂರೊಂದು ಶೆಟ್ಟಿ, ಕೆಆರ್‌ಐಡಿಎಲ್ ಅಧ್ಯಕ್ಷ ರುದ್ರೇಶ್ ಟಿಕೆಟ್ ಬಯಸಿದವರಾಗಿದ್ದರು.
ಆದರೆ ಆರಂಭದಿಂದಲೂ ಸಚಿವ ವಿ.ಸೋಮಣ್ಣನವರ ಹೆಸರು ಮಾತ್ರ ಪ್ರಬಲವಾಗಿ ಕೇಳಿ ಬರುತ್ತಿತ್ತು. ಸೋಮಣ್ಣ ಅವರಿಗೆ ಟಿಕೆಟ್ ತಪ್ಪಿಸುವ ಸಲುವಾಗಿ ಸಾಕಷ್ಟು ಪ್ರಯತ್ನಗಳು ನಡೆಸಿದ್ದು, ಕೊನೆಗೂ ಹೈಕಮಾಂಡ್ ಮಾತ್ರ ಸೋಮಣ್ಣ ಅವರ ಕೈ ಹಿಡಿದಿದೆ. ಇನ್ನು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಿಂದ ಹಾಲಿ ಬಿಜೆಪಿ ಶಾಸಕ ಸಿ.ಎಸ್.ನಿರಂಜನ್‌ಕುಮಾರ್ ಮತ್ತು ಚಾಮುಲ್ ನಿರ್ದೇಶಕ ಎಂ.ಪಿ. ಸುನೀಲ್ ಟಿಕೆಟ್‌ಗಾಗಿ ಪೈಪೋಟಿ ನಡೆಸಿದ್ದರು. ಆದರೆ ನಿರಂಜನ್‌ಕುಮಾರ್ ಅವರಿಗೆ 5ನೇ ಬಾರಿಗೆ ಟಿಕೆಟ್ ಒಲಿದಿದೆ.
ಇನ್ನು ಕೊಳ್ಳೇಗಾಲದಿಂದ ಹಾಲಿ ಶಾಸಕ ಎನ್.ಮಹೇಶ್ ಮತ್ತು ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಕಿನಕಹಳ್ಳಿ ರಾಚಯ್ಯ ನಡುವೆ ಟಿಕೆಟ್ ಬಯಸಿದ್ದರು. ಕಳೆದ ಬಾರಿ ಬಿಎಸ್ಪಿಯಿಂದ ಆಯ್ಕೆಯಾಗಿ ಬಿಜೆಪಿ ಸೇರಿದ್ದ ಎನ್.ಮಹೇಶ್ ಅವರಿಗೆ ಟಿಕೆಟ್ ನೀಡಲಾಗಿದೆ. ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಅವರು ಚುನಾವಣೆ ದಿನಾಂಕ ಘೋಷಣೆ ಆಗುವ ಮುನ್ನವೇ ಕಾಂಗ್ರೆಸ್ ಸೇರ್ಪಡೆ ಆಗಿದ್ದರಿಂದ ಮಹೇಶ್ ಟಿಕೆಟ್ ಘೋಷಣೆಗೆ ಮುನ್ನ ಪ್ರಚಾರ ಆರಂಭಿಸಿದ್ದರು.
ಹನೂರಿನಿಂದ ಮಾಜಿ ಸಚಿವ ಎಚ್. ನಾಗಪ್ಪ ಮತ್ತು ಮಾಜಿ ಶಾಸಕಿ ಪರಿಮಳಾ ನಾಗಪ್ಪ ಅವರ ಪುತ್ರ ಡಾ. ಪ್ರೀತಂ ಅವರಿಗೆ ಎರಡನೇ ಬಾರಿಗೆ ಬಿಜೆಪಿ ಟಿಕೆಟ್ ಒಲಿದಿದೆ. ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಕಡಿಮೆ ಮತಗಳ ಅಂತರದಲ್ಲಿ ಸೋಲನುಭವಿಸಿದ್ದರು. ಬಿಜೆಪಿಯಿಂದ ಡಾ. ಪ್ರೀತಂ, ಡಾ. ದತ್ತೇಶ್‌ಕುಮಾರ್, ಜನದ್ವನಿ ಬಿ. ವೆಂಕಟೇಶ್ ಮತ್ತು ನಿಶಾಂತ್ ಟಿಕೆಟ್ ಬಯಸಿದ್ದರೂ, ಎರಡನೇ ಬಾರಿಗೆ ಡಾ. ಪ್ರೀತನ್‌ಗೆ ಟಿಕೆಟ್ ಸಿಕ್ಕಿದೆ.
ಈ ಮೂಲಕ ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಿಗೆ ಮೊದಲನೇ ಪಟ್ಟಿಯಲ್ಲಿ ಬಿಜೆಪಿ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡುವ ಮೂಲಕ ಗಡಿ ಜಿಲ್ಲೆಯ ಚುನಾವಣಾ ಕಣವನ್ನು ಮತ್ತಷ್ಟು ರಂಗೇರುವಂತೆ ಮಾಡಿದೆ.
ವಿ.ಸೋಮಣ್ಣಗೆ ಡಬಲ್ ಹೊಣೆ
ಹಾಗೆಯೇ ಚಾಮರಾಜನಗರ ಮತ್ತು ವರುಣದಲ್ಲಿ ವಿ.ಸೋಮಣ್ಣ ಬಿಜೆಪಿ ಕಲಿ ಆಗಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಈ ಎರಡೂ ಕ್ಷೇತ್ರಗಳಲ್ಲಿ ಲಿಂಗಾಯತರ ಪ್ರಾಬಲ್ಯವಿದ್ದರೂ ಕಾಂಗ್ರೆಸ್ ಭದ್ರ ನೆಲೆಯೂರಿದೆ. ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲೇಬೇಕೆಂದು ಪಣ ತೊಟ್ಟಿರುವ ಕೇಸರಿ ಪಡೆಗೆ ವಿ.ಸೋಮಣ್ಣ ಸಾರಥಿ ಆಗಿದ್ದಾರೆ. ಆದ್ದರಿಂದ ಎರಡು ಕ್ಷೇತ್ರದ ಟಿಕೆಟ್‌ಗಳನ್ನು ವಸತಿ ಸಚಿವಗೆ ಸೋಮಣ್ಣಗೇ ನೀಡಿ ಡಬಲ್ ಹೊಣೆ ಹೊರಿಸಿದೆ.
ಸೋಮಣ್ಣಗೆ ಎರಡು ಕ್ಷೇತ್ರದ ಟಿಕೆಟ್
ವಿ. ಸೋಮಣ್ಣ ಅವರು ಮಗ ಹಾಗೂ ತಮಗೆ ಸೇರಿ ಎರಡು ಟಿಕೆಟ್‌ಗಳನ್ನು ಕೇಳಿದ್ದರು. ಆದರೆ, ಹೈ ಕಮಾಂಡ್ ಏನೋ 2 ಟಿಕೆಟ್ ಅನ್ನು ಸೋಮಣ್ಣನವರಿಗೆ ನೀಡಿದೆ. ಆದ್ದರಿಂದ ಸೋಮಣ್ಣ ಎರಡೂ ಕ್ಷೇತ್ರಗಳಲ್ಲಿಯೂ ಸ್ಪರ್ಧೆ ಮಾಡಬೇಕಾದ ಅನಿವಾರ್ಯ ಮತ್ತು ತಮ್ಮ ವರ್ಚಸ್ಸನ್ನು ತೋರಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ಅದರಲ್ಲೂ ಲಿಂಗಾಯತ ಸಮುದಾಯದ ನಾಯಕನಾಗಿರುವ ವಿ.ಸೋಮಣ್ಣ ಕಾಂಗ್ರೆಸ್‌ನ ಮಾಸ್ ಲೀಡರ್ ಸಿದ್ದರಾಮಯ್ಯರನ್ನು ಮಣಿಸುವುದರ ಜೊತೆಗೆ ಕಳೆದ ಮೂರು ಸಾಲಿನಿಂದ ಕೈ ವಶದಲ್ಲಿರುವ ಚಾಮರಾಜನಗರದಲ್ಲಿ ಕಮಲ ಅರಳಿಸುವ ಡಬಲ್ ಟಾರ್ಗೆಟ್ ಕೊಡಲಾಗಿದೆ.
ಸಾಂಪ್ರದಾಯಿಕ ಎದುರಾಳಿಗೆ ಟಿಕೆಟ್
ಚಾಮರಾಜನಗರ ಜಿಲ್ಲೆಯ ಹನೂರು ಕ್ಷೇತ್ರದಲ್ಲಿ ಆರಂಭದಿಂದಲೂ ಎರಡು ಕುಟುಂಬಗಳ ನಡುವೆಯೇ ಫೈಟ್ ನಡೆಯಲಿದ್ದು, ಇದು ಈ ಬಾರಿಯೂ ಮುಂದುವರೆಯಲಿದೆ. ಕಾಂಗ್ರೆಸ್‌ನಿಂದ ಆರ್.ನರೇಂದ್ರ ಕಣಕ್ಕಿಳಿಯಲಿದ್ದು, ಬಿಜೆಪಿಯಿಂದ ಸಾಂಪ್ರದಾಯಿಕ ಎದುರಾಳಿ ಡಾ.ಪ್ರೀತಂ ನಾಗಪ್ಪನನ್ನು ಕಣಕ್ಕಿಳಿಸಲು ಬಿಜೆಪಿ ಗ್ರೀನ್ ಸಿಗ್ನಲ್ ಕೊಟ್ಟಿದೆ. ಇನ್ನು, ನಿರೀಕ್ಷೆಯಂತೆ ಕೊಳ್ಳೇಗಾಲದಲ್ಲಿ ಹಾಲಿ ಶಾಸಕ ಎನ್.ಮಹೇಶ್ ಮತ್ತು ಗುಂಡ್ಲುಪೇಟೆಯಲ್ಲಿ ಹಾಲಿ ಶಾಸಕ ನಿರಂಜನಕುಮಾರ್ ಕಮಲ ಕಲಿಗಳಾಗಿ ರಣರಂಗಕ್ಕೆ ಇಳಿಯಲಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications