ವರುಣದಲ್ಲಿ ಸೋಮಣ್ಣಗೆ ಮಣ್ಣುಮುಕ್ಕಿಸಲು ಚಕ್ರವ್ಯೂಹ ರಚಿಸಿದ ಕಾಂಗ್ರೆಸ್, ಇಲ್ಲಿದೆ ವಿವರ
ಚಾಮರಾಜನಗರ, ಏಪ್ರಿಲ್, 13: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ, ಬಿಜೆಪಿ ಬಿಡುಗಡೆ ಮಾಡಿದ ಮೊದಲನೇ ಪಟ್ಟಿಯಲ್ಲೇ ಸೋಮಣ್ಣ ಅವರಿಗೆ ಎರಡು ಕ್ಷೇತ್ರಗಳ ಹೊಣೆಯನ್ನು ಹೊರಿಸಲಾಗಿದೆ. ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿ ಪ್ರತಿಷ್ಟೆ ಪಣಕ್ಕಿಡಲು ತೆರಳುತ್ತಿರುವ ವಸತಿ ಸಚಿವ ವಿ.ಸೋಮಣ್ಣ ಅವರನ್ನು ಕಟ್ಟಿಹಾಕಲು ಕಾಂಗ್ರೆಸ್ ರಣತಂತ್ರ ಹೆಣೆಯುತ್ತಿದ್ದು, ವರುಣಕ್ಕೆ ಹೆಚ್ಚು ತೆರಳದಂತೆ ಚಕ್ರವ್ಯೂಹ ಹೆಣೆಯುತ್ತಿದೆ.
ಸೋಮಣ್ಣಗೆ ವರುಣದಿಂದ ಟಿಕೆಟ್ ಕೊಡಲು ಕಾರಣ ಏನು?
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಬಲ ಸ್ಪರ್ಧೆ ಮಾಡಲು ಬಿಜೆಪಿ ಸೋಮಣ್ಣಗೆ ಟಿಕೆಟ್ ಕೊಟ್ಟಿದೆ. ಆದರೆ, ವರುಣಗೆ ಸೋಮಣ್ಣ ಹೋಗಲಾರದೇ ಚಾಮರಾಜನಗರದಲ್ಲೇ ಕಟ್ಟಿಹಾಕಲು ಕಾಂಗ್ರೆಸ್ ಮುಂದಾಗಿದ್ದು, ಇದಕ್ಕೇ ಬಿಜೆಪಿ ಬಂಡಾಯವೇ ಬಂಡವಾಳವಾಗಿದೆ. ಸೋಮಣ್ಣಗೆ ಚಾಮರಾಜನಗರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಭಿನ್ನಮತ ಸ್ಪೋಟವಾಗಿದೆ.

ಟಿಕೆಟ್ ವಂಚಿತ ನಾಗಶ್ರೀ ಪ್ರತಾಪ್ ಅವರ ಬೆಂಬಲಿಗರು ಈಗಾಗಲೇ ಕೆರಳಿ ಕೆಂಡವಾಗಿದ್ದು, ಸಾಲುಸಾಲು ಸಭೆ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ಕೆಆರ್‌ಐಡಿಎಲ್ ಅಧ್ಯಕ್ಷ ರುದ್ರೇಶ್ ಬಹಿರಂಗವಾಗಿಯೇ ಸೋಮಣ್ಣ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೇ ಸೋಮಣ್ಣನವರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೇಳಿಕೇಳಿ ಚಾಮರಾಜನಗರ ಹಾಗೂ ವರುಣದಲ್ಲಿ ಲಿಂಗಾಯತ ಪ್ರಾಬಲ್ಯ ಇದ್ದು, ಸೋಮಣ್ಣ ಅವರು ಲಿಂಗಾಯತ ನಾಯಕರನ್ನು ತುಳಿಯುತ್ತಿದ್ದಾರೆ. ಯಡಿಯೂರಪ್ಪ ಬಗ್ಗೆ ಇಲ್ಲಸಲ್ಲದ ಮಾತು ಆಡುತ್ತಾರೆ ಎಂಬ ರುದ್ರೇಶ್ ಆರೋಪ ಈಗಾಗಾಲೇ ಸಮುದಾಯದ ಜನರಲ್ಲಿ ಕಿಚ್ಚು ಹೊತ್ತಿಸಿದೆ.

ಇದು ಚುನಾವಣೆ ಹೊತ್ತಲ್ಲಿ ಅಂಡರ್ ಕರೆಂಟಾಗಿ ಕೆಲಸ ಮಾಡಲಿದೆ ಎಂಬುದು ಸೋಮಣ್ಣ ಹಾದಿಯಾಗಿ ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ. ಇದನ್ನು ಶಮನ ಮಾಡುವುದರಲ್ಲೇ ಸೋಮಣ್ಣ ಕಾಲ ಕಳೆಯಬೇಕಾಗುತ್ತದೆ. ವರುಣದತ್ತ ಗಮನ ಹರಿಸುವುದು ಅಸಾಧ್ಯವಾಗಲಿದೆ ಎಂದು ಕೈ ಪಡೆಯ ರಣತಂತ್ರವಾಗಿದೆ.
ವರುಣದಲ್ಲಿ ಸೋಮಣ್ಣನವರ ಗಮನ ಕಡಿಮೆಯಾದಷ್ಟು ಕಾಂಗ್ರೆಸ್‌ಗೆ ವರವಾಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ಆಧಾರದ ಮೇಲೆ ಚಾಮರಾಜನಗರದಲ್ಲಿನ ಬಂಡಾಯವನ್ನು ಹಾಗೇ ಉಳಿಸಲು ಕಾಂಗ್ರೆಸ್ ಈಗ ಮುಂದಾಗಿದೆ. ಚಾಮರಾಜನಗರದ ನಾಲ್ಕು ವಿಧಾನಸಭಾ ಕ್ಷೇತ್ರದಲ್ಲೂ ಅಸಮಾಧಾನ ಇದ್ದು, ಇವುಗಳನ್ನು ಪರಿಹರಿಸುವ ಜವಾಬ್ದಾರಿ ಸೋಮಣ್ಣನವರ ಮೇಲಿದೆ. ಬಂಡಾಯ ಶಮನ ಮಾಡುವುದೋ ಅಥವಾ ವರುಣದಲ್ಲಿ ಯುದ್ಧ ಮಾಡುವುದೋ ಎಂಬ ಸಂಧಿಗ್ಧತೆಗೆ ಸೋಮಣ್ಣರನ್ನು ದೂಡುವುದೇ ಕಾಂಗ್ರೆಸ್‌ನ ಸದ್ಯದ ತಂತ್ರವಾಗಿದೆ.
ಕಾಂಗ್ರೆಸ್‌ನ ಮಾಸ್ ಲೀಡರ್ ಜೊತೆ ಸ್ಪರ್ಧೆ
ಟಿಕೆಟ್ ಘೋಷಣೆಯಾದ ಬಳಿಕ ಮೈಸೂರಿನ ವರುಣ ಹಾಗೂ ಚಾಮರಾಜನಗರಕ್ಕೆ ಸೋಮಣ್ಣ ಬರುತ್ತಿದ್ದಾರೆ. ಜೊತೆಗೆ, ಚಾಮರಾಜನಗರದ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರದ ಹೊಣೆಯನ್ನೂ ಹೊತ್ತಿದ್ದಾರೆ. ಕೊಳ್ಳೇಗಾಲದಲ್ಲಿ ಕಿನಕಹಳ್ಳಿ ರಾಚಯ್ಯ, ಗುಂಡ್ಲುಪೇಟೆಯಲ್ಲಿ ಎಂ.ಪಿ.ಸುನೀಲ್, ಹನೂರಲ್ಲಿ ಮೂವರು ಹಾಗೂ ಚಾಮರಾಜನಗರದಲ್ಲಿ ಪ್ರೊ. ಮಲ್ಲಿಕಾರ್ಜುನಪ್ಪ, ನಾಗಶ್ರೀ ಪ್ರತಾಪ್, ರುದ್ರೇಶ್ ಅಸಮಾಧಾನಗೊಂಡಿದ್ದಾರೆ. ಇದಕ್ಕೆಲ್ಲಾ ಸೋಮಣ್ಣನವರೇ ತೇಪೆ ಹಚ್ಚಬೇಕಿದೆ. ಜೊತೆಗೆ ಕಾಂಗ್ರೆಸ್‌ನ ಮಾಸ್ ಲೀಡರ್ ಜೊತೆಯೂ ಸ್ಪರ್ಧೆ ಮಾಡಬೇಕಿದೆ.
ಈಗಾಗಲೇ ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಚಾಮರಾಜನಗರ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಚಾಮರಾಜನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ರುದ್ರೇಶ್ ಅವರು ಸೋಮಣ್ಣ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೆ ಸೋಮಣ್ಣನವರ ಇಂಚಿಂಚು ಕರ್ಮಕಾಂಡಗಳನ್ನು ಬಿಚ್ಚಿಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಚಾಮರಾಜನಗರದ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿದ ಅವರು, ರಾಮನಗರದಲ್ಲಾಗಲಿ ಹಾಗೂ ಚಾಮರಾಜನಗರದಲ್ಲಾಗಲಿ ಸೋಮಣ್ಣ ಅವರು ಪಕ್ಷ ಸಂಘಟನೆಗೆ ಒಂದಿಂಚೂ ಕೂಡ ಶ್ರಮಿಸಿಲ್ಲ. ಅವರ ತವರಲ್ಲೇ ಅವರು ಪಕ್ಷ ಸಂಘಟಿಸಿಲ್ಲ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭೆ ಚುನಾವಣೆಯಲ್ಲಿ ಪ್ರಚಾರಕ್ಕೆ ಬಂದಿಲ್ಲ. ಈ ರೀತಿ ವ್ಯಕ್ತಿಗೆ ಎರಡು ಕ್ಷೇತ್ರದ ಟಿಕೆಟ್ ಕೊಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಿ.ಸೋಮಣ್ಣ ವಿರುದ್ಧ ರುದ್ರೇಶ್ ಆರೋಪ
ಪಕ್ಷ ಸಂಘಟನೆಗೆ ಕರೆದರೇ ನನಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ, ನಾನು ಸರ್ಕಾರದ ಸಚಿವ ಎಂದು ಹೇಳುತ್ತಿದ್ದರು. ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದ ಸೋಮಣ್ಣ ಅವರು ಕೆಲ ಷರತ್ತುಗಳಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಚಾಮರಾಜನಗರದಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಲು ಸೋಮಣ್ಣ ಅವರೇ ಕಾರಣರಾಗಿದ್ದರು. ಇದೀಗ ಸೋಮಣ್ಣ ಅವರೇ ಅಭ್ಯರ್ಥಿ ಆಗಿರುವುದು ವಿಪರ್ಯಾಸವೇ ಸರಿ ಎಂದು ಬೇಸರ ವ್ಯಕ್ತಪಡಿಸಿದ್ದರು.
ಕಳೆದ ಬಾರಿ ಪ್ರೊ.ಮಲ್ಲಿಕಾರ್ಜುನಪ್ಪ ಸೋಲಲು ಸೋಮಣ್ಣ ಕಾರಣ, ಇದಕ್ಕೆ ಸಂಬಂಧಿಸಿದಂತೆ ಆಡಿಯೋ ಕೂಡ ಇದೆ, ಚಾಮರಾಜನಗರದಲ್ಲಿ ಎಲ್ಲರನ್ನೂ ಸೋಲಿಸಿ ಅವರೂ ಮಾತ್ರ ಗೆಲ್ಲುತ್ತಾರೆ, ಗೆದ್ದ ಬಳಿಕ ಸಿದ್ದರಾಮಯ್ಯ ಜೊತೆ ಕೈ ಜೋಡಿಸಿ ಕಾಂಗ್ರೆಸ್ ಗೆ ಹೋಗುತ್ತಾರೆಂಬ ಅನುಮಾನ ಇದೆ ಗಂಭೀರ ಆರೋಪ ಹಾಕಿದ್ದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications