ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಂಬಿ ಹರಿಯುತ್ತಿರುವ ಮೂಲೆಹೊಳೆ ಹಳ್ಳ; ಕೇರಳ-ಕರ್ನಾಟಕ ಸಂಚಾರ ಬಂದ್

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಆಗಸ್ಟ್‌ 08: ಕೇರಳದ ವೈನಾಡಿನಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವ ಕಾರಣ ಚಾಮರಾಜನಗರ ಜಿಲ್ಲೆಯ ಮೂಲೆಹೊಳೆ ಹಳ್ಳ ಉಕ್ಕಿ ಹರಿಯುತ್ತಿದೆ.

Recommended Video

Kerala Rains : ವರುಣನ ಅಬ್ಬರಕೆ ಬೆಚ್ಚಿಬಿದ್ದ ದೇವರ ನಾಡು | Oneindia Kannada

ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದ ಮೂಲೆಹೊಳೆಯು ನಿರಂತರ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದು, ತಾತ್ಕಾಲಿಕವಾಗಿ ಕರ್ನಾಟಕ-ಕೇರಳ ಸಂಚಾರವನ್ನು ಬಂದ್ ಮಾಡಿದ್ದಾರೆ.

ಕಬಿನಿಯಿಂದ ನೀರು ಬಿಡುಗಡೆ; ಹೆದ್ದಾರಿಗೇ ಹರಿದ ನೀರುಕಬಿನಿಯಿಂದ ನೀರು ಬಿಡುಗಡೆ; ಹೆದ್ದಾರಿಗೇ ಹರಿದ ನೀರು

ಕೇರಳ-ಕರ್ನಾಟಕದ ಗಡಿ ಮೂಲೆಹೊಳೆ ಸಮೀಪದ ರಸ್ತೆಯಲ್ಲೆಲ್ಲಾ ನೀರು ಹರಿಯುತ್ತಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅನಾಹುತ ಸಂಭವಿಸದಂತೆ ತಡೆಯುವ ಉದ್ದೇಶದಿಂದ ಅರಣ್ಯಾಧಿಕಾರಿಗಳು ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಿದ್ದಾರೆ. ಈ ಕಾರಣ ನಿನ್ನೆ ಕೇರಳ ಕರ್ನಾಟಕ ಸಂಚರಿಸುವ ಸರಕು ಸಾಗಣೆ ಮಾಡುವ ವಾಹನಗಳು ಮದ್ದೂರು ಚೆಕ್ ಪೋಸ್ಟ್ ನಲ್ಲೇ ಸಾಲುಗಟ್ಟಿ ನಿಂತಿದ್ದವು.

Chamarajanagar: Karnataka Kerala Vehicle Transportation Stopped As Mulehole River Overflowing

ಮಳೆ ಕಡಿಮೆಯಾಗುವವರೆಗೂ ಯಾವುದೇ ವಾಹನಗಳನ್ನು ಈ ಮಾರ್ಗದಲ್ಲಿ ಸಂಚರಿಸಲು ಬಿಡದಂತೆ ಅರಣ್ಯಾಧಿಕಾರಿಗಳು ನಿರ್ಧಾರ ಮಾಡಿದ್ದಾರೆ. ಜಿಲ್ಲೆಯ ಪಕ್ಕದ ಮೈಸೂರಿನ ಗ್ರಾಮಾಂತರ ಪ್ರದೇಶಗಳಲ್ಲೂ ನದಿ ನೀರಿನ ಮಟ್ಟ ಏರಿಕೆಯಾಗಿ ಪ್ರವಾಹ ಉಂಟಾಗಿದೆ. ಹುಣಸೂರಿನಲ್ಲಿ ಜಮೀನುಗಳಿಗೆ ನೀರು ನುಗ್ಗಿದ್ದು, ರೈತರು ತಾವು ಬೆಳೆದ ಶುಂಠಿ ತಮ್ಮ ಬೆಳೆಗಳನ್ನು ಕಾಪಾಡಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.

English summary
Karnataka Kerala Vehicle Transportation Stopped As Mulehole River Overflowing in chamarajanagar district,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X