Get Updates
Get notified of breaking news, exclusive insights, and must-see stories!

"ಅನಿಸುತಿದೆ ಯಾಕೋ ಇಂದು, ನೀನೇನೆ ನನ್ನವಳೆಂದು" ಹಾಡಿದ ಟಿಬೆಟಿಯನ್ ಮಹಿಳೆ

ಚಾಮರಾಜನಗರ, ನವೆಂಬರ್‌, 01: ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದ್ದು, ಈ ವೇಳೆ ಹನೂರು ತಾಲೂಕಿನ ಒಡೆಯರಪಾಳ್ಯ ಟಿಬೆಟಿಯನ್ ಕ್ಯಾಂಪ್‌ನ ಜನರು ಕೂಡ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದಾರೆ.

ಸಾಂಪ್ರದಾಯಿಕ ಟಿಬೆಟಿಯನ್ ದಿರಿಸು ಧರಿಸಿ ಟಿಬೆಟಿಯನ್ನರು ಕನ್ನಡ ಬಾವುಟ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ. ಜೊತೆಗೆ, ಜಿಗ್ಮೆ ಚೋಡಾನ್ ಎಂಬಾಕೆ "ಅನಿಸುತಿದೆ ಯಾಕೋ ಇಂದು, ನೀನೇನೆ ನನ್ನವಳೆಂದು" ಎಂಬ ಹಾಡನ್ನು ಹಾಡಿ ಸಭಿಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿದ್ದಾರೆ.

Karnataka rajyotsava: A Tibetan woman who attracted attention by singing a Kannada song in Hanur

ಗಡಿಜಿಲ್ಲೆಯಲ್ಲಿ ಕರುನಾಡ ಹಬ್ಬದ ಸಂಭ್ರಮ

ಚಾಮರಾಜನಗರ ಜಿಲ್ಲಾಡಳಿತದ ವತಿಯಿಂದ ಇಂದು ಡಾ.ಬಿ.ಆರ್‌.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕರುನಾಡಿನ ಹಬ್ಬ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು ಕನ್ನಡ ಧ್ವಜವನ್ನು ಧ್ವಜಾರೋಹಣ ಮಾಡಿದರು. ಈ ವೇಳೆ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ, ಡಿಸಿ ಶಿಲ್ಪನಾಗ್, ಎಸ್ಪಿ ಪದ್ಮಿನಿ ಸಾಹು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ಇನ್ನು, ವೇದಿಕೆಯನ್ನು ಕೆಂಪು-ಹಳದಿ ಬಣ್ಣದ ಹೂವುಗಳಿಂದ ಸಿಂಗರಿಸಲಾಗಿತ್ತು. ಜೊತೆಗೆ ಪರೇಡ್ ಕಮಾಂಡ್ ಅನ್ನು ಕನ್ನಡದಲ್ಲೇ ನೀಡಲಾಯಿತು. ಈ ವೇಳೆ ಪೊಲೀಸ್, ಗೃಹರಕ್ಷಕ ದಳ, ಅರಣ್ಯ, ಸ್ಕೌಟ್ ಮತ್ತು ಗೈಡ್ಸ್ ಸೇರಿದಂತೆ ವಿವಿಧ ಶಾಲೆಗಳ ತುಕಡಿಗಳು ಆಕರ್ಷಕ ಪಥ ಸಂಚಲನ ನಡೆಸಿ ಸಚಿವರಿಗೆ ಗೌರವ ವಂದನೆ ಸಲ್ಲಿಸಿದರು.

ಚಿತ್ರದುರ್ಗದಲ್ಲಿ ಮೊಳಗಿದ ಕನ್ನಡದ ಕಹಳೆ

ಕರ್ನಾಟಕ ಎಂದು ನಾಮಕರಣಗೊಂಡ ಸುವರ್ಣ ಸಂಭ್ರಮದ ನಡುವೆ ಕೋಟೆ ನಾಡು ಚಿತ್ರದುರ್ಗ ನಗರದಲ್ಲಿ‌ 68ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ನೆರವೇರಿಸುವರು. ಇದಕ್ಕೂ ಮುನ್ನ ನಗರದ ನೀಲಕಂಠೇಶ್ವರ ದೇವಸ್ಥಾನದ ಬಳಿ ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ 'ತಾಯಿ ಭುವನೇಶ್ವರಿ ದೇವಿ' ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಆಕರ್ಷಕ ಸ್ತಬ್ದಚಿತ್ರದ ಮೆರವಣಿಗೆಗೆ ಚಾಲನೆ ನೀಡಿದರು‌.

ಶಿಕ್ಷಣದ ಶಕ್ತಿ ಸಾರಿದ ಚಂದ್ರಯಾನ

ಶಿಕ್ಷಣದ ಶಕ್ತಿ ಸಾರುವ ಶಾಲಾ ಶಿಕ್ಷಣ ಇಲಾಖೆಯ ಸ್ತಬ್ದಚಿತ್ರ, ದೇಶದಲ್ಲಿ ವೈಜ್ಞಾನಿಕ ಮನೋಭಾವ ಮೂಡಿಸುವ ಮೂಲಕ ಚಂದ್ರಯಾನ ಸಾಧನೆ ಶಿಕ್ಷಣ ಹೇಗೆ ಇಂಬು ನೀಡಿದೆ ಎಂಬುದನ್ನು ಸಾಬೀತುಪಡಿಸಿತು. ಇದರೊಂದಿಗೆ ಶಾಲಾ ಶಿಕ್ಷಣ ಇಲಾಖೆ‌ ಯೋಜನೆಗಳ ಬಗ್ಗೆ ಮಾಹಿತಿ ನೀಡಿತು.

ಗಮನ ಸೆಳೆದ ನಾರಿಶಕ್ತಿ ಹಾಗೂ ಶಕ್ತಿಯೋಜನೆ

ಪ್ರವಾಸೋದ್ಯಮ ಇಲಾಖೆಯ ದೇಶದ ನಾರಿಯರ ಸಾಧನೆ ಅನಾವರಣಗೊಳಿಸಿದ ನಾರಿಶಕ್ತಿಯ ಸ್ತಬ್ಧಚಿತ್ರ ಎಲ್ಲರ ಗಮನ ಸೆಳೆಯಿತು. ದೇಶದ ಪ್ರಸ್ತುತ ರಾಷ್ಟ್ರಪತಿ ದ್ರೌಪದಿ ಮುರ್ಮು, ಶರಣೆ ಅಕ್ಕಮಹಾದೇವಿ, ವೀರ ವನಿತೆ ಒನಕೆ ಓಬವ್ವ, ಸಾಲುಮರದ ತಿಮ್ಮಕ್ಕ, ಬಾಹ್ಯಾಕಾಶ ಯಾತ್ರಿ ಕಲ್ಪನಾ ಚಾವ್ಲಾ, ಒಲಂಪಿಕ್ ಪದಕ ವಿಜೇತ ಬಾಕ್ಸಿಂಗ್ ಪಟು ಮೇರಿ ಕೋಮ್ ಅವರ ಭಾವಚಿತ್ರಗಳು ನಾರಶಕ್ತಿ ಸ್ತಬ್ದಚಿತ್ರದಲ್ಲಿ ಕಂಗೊಳಿಸಿದವು. ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಕರ್ಯ ಕಲ್ಪಿಸಿದ ಸರ್ಕಾರದ ಮಹತ್ವಾಕಾಂಕ್ಷೆ ಶಕ್ತಿ ಯೋಜನೆ ಮಹತ್ವವನ್ನು ಸಾರಿಗೆ ಇಲಾಖೆ ಸ್ತಬ್ದಚಿತ್ರ ಗಮನ ಸೆಳೆಯಿತು.

ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ‌ ರಕ್ಷಣ ಘಟಕದ ವತಿಯಿಂದ ನಿರ್ಮಿಸಲಾದ ಸ್ತಬ್ದಚಿತ್ರ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎನ್ನುವುದನ್ನು ಎಚ್ಚರಿಸಿತು. ಬಾಲ್ಯ ವಿವಾಹಕ್ಕೆ ಕಾರಣರಾದರೆ ಕಾನೂನಿ ಪ್ರಕಾರ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಮಕ್ಕಳ ಹಕ್ಕುಗಳನ್ನು ಗೌರವಿಸಿ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಹಕಾರಿಯಾಗಲು ಸರ್ಕಾರ ತಂದಿರುವ ಯೋಜನೆಗಳ ಮಾಹಿತಿ ನೀಡಿತು.

ಬೆಸ್ಕಾಂನ ಗೃಹಜ್ಯೋತಿ, ಆರೋಗ್ಯ ಇಲಾಖೆಯ ಸ್ತನ್ಯಪಾನ ಮಹತ್ವ ಸಾರುವ ಹಾಗೂ ಅರಣ್ಯ, ಕೃಷಿ, ಅಬಕಾರಿ ಇಲಾಖೆ, ನಗರ ಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ತಬ್ದಚಿತ್ರಗಳು ಸರ್ಕಾರ‌ ಯೋಜನೆಯ ಮಾಹಿತಿ ನೀಡಿದವು. ಪೂರ್ಣಕುಂಭ ಹೊತ್ತ ಮಹಿಳೆಯರು, ಶಾಲೆ ಮಕ್ಕಳು, ಕಹಳೆ, ಡೋಲು ಸೇರಿದಂತೆ ಸಾಂಸ್ಕೃತಿಕ ಕಲಾ ತಂಡಗಳು ಸ್ಥಬ್ದಚಿತ್ರ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಗಾಂಧಿ ವೃತ್ತ, ಎಸ್.ಬಿ.ಎಂ ವೃತ್ತ, ಓಬವ್ವ ವೃತ್ತದ ಮೂಲಕ ಮೆರವಣಿಗೆ ಪೊಲೀಸ್ ಕವಾಯತು ಮೈದಾನ ತಲುಪಿತು.

ಶಿಕ್ಷಣ ಇಲಾಖೆ ಚಂದ್ರಯಾನ, ಸಾರಿಗೆ ಇಲಾಖೆ ಶಕ್ತಿ ಯೋಜನೆ, ಅರಣ ಇಲಾಖೆ ವನ್ಯಜೀವಿ ಸಂರಕ್ಷಣೆ ಮಹತ್ವ ಸಾರಿದ ಸ್ತಬ್ದಚಿತ್ರಗಳು ಅನುಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವು.

ಈ ಸಂದರ್ಭದಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂಧರ್ ಮೀನಾ, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ನಗರಸಭೆ ಆಯುಕ್ತೆ ರೇಣುಕಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+