ಚಾಮರಾಜನಗರ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಒತ್ತಾಯಿಸಿ ಕರವೇ ಧರಣಿ
ಚಾಮರಾಜನಗರ, ಜುಲೈ, 01: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಸಂಬಂಧ ಸಮಗ್ರ ಕಾಯ್ದೆ ರೂಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ಬಣದ ಜಿಲ್ಲಾ ಘಟಕದ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಡಳಿತ ಭವನ ಎದುರು ವೇದಿಕೆ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ನೇತೃತ್ವದಲ್ಲಿ ಜಮಾಯಿಸಿದ ಸಂಘಟನೆ ಕಾರ್ಯಕರ್ತರು ಧರಣಿ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾಹುಡೇದ ಅವರ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ವೇಳೆ ಜಿಲ್ಲಾಧ್ಯಕ್ಷ ನವೀನ್‌ಕುಮಾರ್ ಮಾತನಾಡಿ, ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶ ಕಾಯ್ದೆ 1946ರ ಅನ್ವಯ ರಾಜ್ಯ ಸರ್ಕಾರ ಬಿಲಿಷ್ಠವಾದ ಕಾನೂನು ರೂಪಿಸಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸಬೇಕು. ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ.ದರ್ಜೆಯ ಶೇಕಡ 100ರಷ್ಠು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು. ಎಲ್ಲ ಖಾಸಗಿ ಸಂಸ್ಥೆಗಳ ಇತರ ಹುದ್ದೆಗಳಲ್ಲಿ ಶೇಕಡ 80ರಷ್ಠು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು ಎಂದು ಆಗ್ರಹಿಸಿದರು.
ನಿಯಮಾವಳಿ ಪಾಲಿಸದ ಸಂಸ್ಥೆಗಳಿಗೆ ನೀಡಿರುವ ಮಾನ್ಯತೆ ರದ್ದುಗೊಳಿಸಿ ಅವುಗಳಿಗೆ ಭೂಮಿ ನೀಡಲಾಗಿದ್ದರೆ, ವಾಪಸ್ ಪಡೆಯುವ ಮೂಲಕ ಆ ಸಂಸ್ಥೆಗಳಿಗೆ ನೀಡಿರುವ ಎಲ್ಲಾ ಸವಲತ್ತುಗಳನ್ನು ಹಿಂದಕ್ಕೆ ಪಡೆಯುವ ನಿಯಮವನ್ನು ರೂಪಿಸಬೇಕು. ನಿಮಯಾವಳಿ ಪಾಲಿಸದ ಸಂಸ್ಥೆಗಳಿಗೆ ದಂಡ ವಿಧಿಸಬೇಕು ಮತ್ತು ಕ್ರಿಮಿನಲ್ ಮೊಕದ್ದೆಮೆ ಹೂಡಬೇಕು ಎಂದು ಒತ್ತಾಯಿಸಿದರು.
ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು ಅದರಂತೆಯೇ ಜಿಲ್ಲೆಯಲ್ಲೂ ಧರಣಿ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ನಮ್ಮ ಬೇಡಿಕೆಗಳ ಈಡೇರಿಕೆಗೆ ಹಂತ ಹಂತವಾಗಿ ಹೋರಾಟ ಮಾಡಲಾಗುತ್ತದೆ ಎಂದರು.
ನೀರಿಗಾಗಿ ಹೋರಾಟ: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಗಣೇಶ ದೇವಾಲಯ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನೀರಿಗಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ತಹಶೀಲ್ದಾರ್ ಸಿ.ರಾಜೇಶ್ ಕುಮಾರ್ ಭೇಟಿ ನೀಡಿದರು. ಆದರೆ ರೈತರನ್ನು ಮನವೊಲಿಸಲ್ಲಿ ವಿಫಲರಾಗಿದ್ದಾರೆ.
ಧರಣಿ ನಿರತ ರೈತರನ್ನು ಉದ್ದೇಶಿಸಿ ಮಾತನಾಡಿರುವ ತಹಶೀಲ್ದಾರ್ ರಾಜೇಶ್ ಕುಮಾರ್ ಅವರು ಈಗಾಗಲೇ ಜೆಜೆ ಹಳ್ಳಿ ಹೋಬಳಿಯ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರಿನ ಕಾಮಗಾರಿ ಪ್ರಗತಿಯಲ್ಲಿದೆ. ಶೀಘ್ರದಲ್ಲೇ ನೀರಾವರಿ ಇಲಾಖೆ ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಗೆ ಸಭೆ ನಡೆಸಿ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು. ಆಗಾಗಿ ತಾವುಗಳು ಈ ಧರಣಿಯನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿಕೊಂಡರು.
ಮಳೆಗಾಲ ಆರಂಭ ಆಗಿರುವುದರಿಂದ ತಮ್ಮ ತಮ್ಮ ಜಮೀನುಗಳಲ್ಲಿ ಬಿತ್ತನೆ ಕಾರ್ಯ ಸೇರಿದಂತೆ ಇನ್ನಿತರ ಕೃಷಿ ಚಟುವಟಿಕೆಗಳ ಬಹಳಷ್ಟು ಇದ್ದು, ಆ ಕಡೆ ಗಮನ ಹರಿಸಿ ಎಂದು ಮನವಿ ಮಾಡಿದರು. ಆದರೆ ಧರಣಿ ನಿರತರ ರೈತರು ತಹಶೀಲ್ದಾರ್ ಮನವಿಗೆ ಮಣಿಯದೇ, ಹೋರಾಟದ ಮುಂದುವರೆಸಿದರು.
ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಕೆಟಿ ತಿಪ್ಪೇಸ್ವಾಮಿ ಮಾತನಾಡಿ ಜೆಜೆ ಹಳ್ಳಿ ಹೋಬಳಿಯು ಕಲ್ಲುವಳ್ಳಿ ಎಂದು ಹೆಸರಾಗಿದ್ದು, ಈ ಪ್ರದೇಶ ಸಂಪೂರ್ಣ ಕಲ್ಲು, ಹುಬ್ಬು ತಗುಗಳಿಂದ ಕೂಡಿದ್ದು, ಇಲ್ಲಿನ ವ್ಯವಸಾಯ ಮಾಡುವುದಕ್ಕೆ ಅಂತರ್ಜಲ ಸಂಪೂರ್ಣ ಕುಸಿದಿದೆ. ಈಗಾಗಲೇ ಇಲ್ಲಿನ ತೋಟ ತುಡಿಕೆಗಳು ಒಣಗಿ ಹೋಗಿದ್ದು, ರೈತರು ಜೀವನ ನಡೆಸುವುದೇ ಕಷ್ಟಕರವಾಗಿದೆ ಎಂದರು.
ರೈತರ ನೀರಿನ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಪ್ರಾರಂಭವಾಗಿ 13 ದಿನ ಕಳೆಯಿತು. ರೈತರು ಮಳೆ ಗಾಳಿ, ಅನ್ನ ನೀರು ಅನ್ನದೆ, ಹೆಂಡತಿ ಮಕ್ಕಳು, ಕೆಲಸ ಕಾರ್ಯಗಳನ್ನು ಬಿಟ್ಟು ಧರಣಿಯಲ್ಲಿ ಭಾಗಿಯಾಗಿದ್ದಾರೆ. ಆದರೆ ಸಚಿವರು, ಶಾಸಕರು, ಜಿಲ್ಲಾಡಳಿ ಹಾಗೂ ತಾಲೂಕು ಆಡಳಿತ ಇದರ ಬಗ್ಗೆ ಗಮನ ಹರಿಸದೆ ಇರುವುದು ತುಂಬಾ ನೋವಿನ ವಿಚಾರ ಎಂದು ಬೇಸರ ವ್ಯಕ್ತಪಡಿಸಿದರು.
ರೈತರ ಬಗ್ಗೆ ಇರುವ ಕಾಳಜಿಯೇ ಇಲ್ಲದವರು ನಾವು ರೈತರ ಪರವಾಗಿ ಇರುತ್ತವೆ ಎನ್ನುತ್ತಾರೆ.
ದೇಶದ ಜನರಿಗೆ ಅನ್ನ ನೀಡುವ ರೈತ ಕೃಷಿ ಚಟುವಟಿಕೆಯನ್ನು ಬಿಟ್ಟು ಬಂದು ಬೀದಿಯಲ್ಲಿ ಕುಳಿತರೂ ಕೂಡ ಆಳುವ ಸರ್ಕಾರಗಳು ಮತ್ತು ಅಧಿಕಾರಿಗಳು ಬದ್ಧತೆ ತೋರದೆ ನಿರ್ಲಕ್ಷಿಸುತ್ತಿರುವುದು ಖಂಡನೀಯ ಎಂದರು.
ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ಸಭೆ ನಡೆಸಿ, ಸರ್ಕಾರದ ಗಮನಕ್ಕೆ ತರಬೇಕು ಅಲ್ಲದೆ ಈ ಭಾಗಕ್ಕೆ ನೀರು ಹರಿಸಲು ಸರ್ಕಾರದ ಆದೇಶ ಕೊಡಿಬೇಕು ಎಂದರು.
ಈ ಭಾಗದಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಹನಿ ನೀರಾವರಿ ಕಾಮಗಾರಿ ನಡೆಯುತ್ತಿದ್ದು, ಕೂಡಲೇ ಇದನ್ನು ಸ್ಥಗಿತಗೊಳಿಸಬೇಕು ಎಂದು ಹಲವಾರು ಬಾರಿ ಮನವಿ ಮಾಡಿದರು ಕಾಮಗಾರಿ ಸ್ಥಗಿತಗೊಳಿಸುವ ಯಾವುದೇ ಪ್ರಯತ್ನ ಮಾಡಿಲ್ಲ. ಮೊದಲು ಈ ಭಾಗದ ಕೆರೆಗಳಿಗೆ ನೀರು ತುಂಬಿಸಬೇಕು. ಕೆರೆಗಳಿಗೆ ನೀರು ತುಂಬಿಸುವ ಸರ್ಕಾರದ ಆದೇಶ ಸಿಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾರಪ್ಪ, ಸಿದ್ದರಾಮಣ್ಣ, ಈರಪ್ಪ, ಮಹಾಲಿಂಗಪ್ಪ, ಓದೋ ಮಾರಪ್ಪ, ಚಿತ್ತಪ್ಪ, ರಾಮಣ್ಣ, ಶಿವಣ್ಣ ಚಿಕ್ಕಪ್ಪ, ಈರಣ್ಣ, ಬಸವರಾಜು, ಬಾಲರಾಮಯ್ಯ, ಜಯಣ್ಣ, ಚನ್ನಬಸಪ್ಪ, ಯಶೋಧರ್, ಚಂದ್ರಶೇಖರ್, ಶಿವಣ್ಣ, ರಾಮಕೃಷ್ಣ, ಈರಣ್ಣ ಸೇರಿದಂತೆ ಮೂಡ್ಲಹಟ್ಟಿ ಗ್ರಾಮಸ್ಥರು ಭಾಗಿಯಾಗಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications