ಹನೂರು: ಕರ್ನಾಟಕ-ತಮಿಳುನಾಡು ರಸ್ತೆ ಸಂಪರ್ಕ ಬಂದ್‌-ಕಾರಣ ಏನು?

ಚಾಮರಾಜನಗರ, ಜುಲೈ, 22: ಭಾರೀ ಗಾಳಿ-ಮಳೆಗೆ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಬಿದ್ದು, ಅಂತರರಾಜ್ಯ ಸಂಚಾರ ಅಸ್ತವ್ಯಸ್ತವಾಗಿರುವ ಘಟನೆ ಕರ್ನಾಟಕ-ತಮಿಳುನಾಡು ಗಡಿಯಾದ ಹನೂರು ತಾಲೂಕಿನ‌ ಆಂಡಿಪಾಳ್ಯದಲ್ಲಿ ನಡೆದಿದೆ.

ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಕಳೆದ 4 ತಾಸಿನಿಂದಲೂ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.

Karnataka-Tamil Nadu road connectivity closed

ಕೊಳ್ಳೇಗಾಲದಿಂದ ತಮಿಳುನಾಡಿನ ಸತ್ಯಮಂಗಲಂಗೆ ಹೋಗುವ ಮುಖ್ಯರಸ್ತೆ ಇದಾಗಿದ್ದು, ವಾಹನಗಳು ಚಲಿಸಲಾಗದೇ ನಿಂತಲ್ಲೇ ನಿಂತಿದೆ. ಎರಡು ರಾಜ್ಯಗಳ ವಾಹನಗಳು ಬೆಳಗ್ಗೆ 11 ಗಂಟೆಯವರೆಗೂ ಸಂಚಾರ ಸ್ಥಗಿತಗೊಂಡು ಪರದಾಡಿದರು.

ಬೆಳಗಾವಿ-ಗೋವಾ ಸಂಪರ್ಕ ಕಲ್ಪಿಸುವ ರಸ್ತೆ ಬಂದ್‌: ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರುಸಿ ಬೊಬ್ಬೆರೆದ ಪರಿಣಾಮ ನದಿ, ಕೆರೆ-ಕಟ್ಟೆಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಅಲ್ಲದೆ, ರಸ್ತೆಗಳು ಕೂಡ ಜಲಾವೃತವಾಗಿರುವ ಘಟನೆಗಳು ನಡೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಹಾಗೆಯೇ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿಯ ಜಾಂಬೋಟಿ, ಚೋರ್ಲಾದಲ್ಲಿ ಹಲವು ಸೇತುವೆಗಳು ಶಿಥಿಲಗೊಂಡಿರುವ ಹಿನ್ನೆಲೆಯಲ್ಲಿ ಬೆಳಗಾವಿ-ಗೋವಾ ನಡುವೆ ಸಂಚರಿಸುವ ವಾಹನ ಸವಾರರಿಗೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದೆ.

ಬೆಳಗಾವಿಯಿಂದ ತೆರಳುವವರು ಪೀರನವಾಡಿಯಿಂದ ಎಡಕ್ಕೆ ತಿರುವು ಪಡೆದುಕೊಂಡು, ಖಾನಾಪುರ ಮಾರ್ಗವಾಗಿ ಗೋವಾಗೆ ಹೋಗುವಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸೂಚನೆ ನೀಡಿದ್ದಾರೆ.

ದೂಧ್​ ಸಾಗರ ದೇವಸ್ಥಾನದ ಹತ್ತಿರದಲ್ಲಿರುವ ಅನ್ಮೋದ್ ಘಾಟ್‌​ನಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ಬೆಳಗಾವಿ-ಗೋವಾ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಪರಿಣಾಮ ಇಡೀ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇನ್ನು ಇದೀಗ ರಸ್ತೆ ಮೇಲೆ ಬಿದ್ದ ಬಂಡೆ ಮತ್ತು ಮಣ್ಣು ತೆರವು ಕಾರ್ಯಚರಣೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+