ತಗ್ಗಿದ ಕಾವೇರಿ ಹೊರಹರಿವು: ಪ್ರವಾಹದಿಂದ ಪಾರಾದ ಕೊಳ್ಳೇಗಾಲ ತಾಲ್ಲೂಕಿನ 9 ಗ್ರಾಮಗಳು

ಚಾಮರಾಜನಗರ, ಜುಲೈ, 30: ಭಾರೀ ಮಳೆಯಿಂದಾಗಿ ಕಾವೇರಿ ಅಪಾಯದ ಮಟ್ಟದಲ್ಲಿ ಹರಿದಿದ್ದು, ಈ ಹಿನ್ನೆಲೆ ಚಾಮರಾಜನಗರ ಜಿಲ್ಲೆಯ ಕೆಲವು ಗ್ರಾಮಗಳ ಜನರಿಗೆ ಪ್ರವಾಹದ ಭೀತಿ ಎದುರಾಗಿತ್ತು. ಆದರೆ ಇದೀಗ ಕಾವೇರಿ ಹೊರಹರಿವು ಕಡಿಮೆಯಾದ ಹಿನ್ನೆಲೆ ಪ್ರವಾಹ ಭೀತಿಯಲ್ಲಿದ್ದ ಕೊಳ್ಳೇಗಾಲ ತಾಲೂಕಿನ 9 ಗ್ರಾಮಗಳ ಜನರು ನೆಮ್ಮದಿಯ ನಿಟ್ಟುಸಿರು ಬಿಡಯವಂತಾಗಿದೆ.

ಕಾವೇರಿ ನದಿ ಪಾತ್ರದಲ್ಲಿ ಬರುವ ಕೊಳ್ಳೇಗಾಲ ತಾಲೂಕಿನ ದಾಸನಪುರ, ಮುಳ್ಳೂರು, ಹಳೆ ಅಣಗಳ್ಳಿ, ಹಳೆ ಹಂಪಾಪುರ ಮತ್ತು ಹರಳೆ ಗ್ರಾಮದ ಪ್ರದೇಶಗಳಲ್ಲಿ ಪ್ರವಾಹ ನೀರಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಿದೆ. ಕೆಆರ್‌ಎಸ್ ಮತ್ತು ಕಬಿನಿ ಜಲಾಶಯದಿಂದ ಹೊರಬಿಡುವ ನೀರಿನ ಪ್ರಮಾಣ ಕಡಿಮೆಯಾಗಿದ್ದು, 9 ಗ್ರಾಮಗಳು ಪ್ರವಾಹದಿಂದ ಪಾರಾಗಿದೆ.

Kaveri River Outflow Has decreased Kollegala taluk s These villages People are happy

ಪ್ರಸ್ತುತ ಕಾವೇರಿ ಜಲಾನಯನ ದಂಡೆಯಲ್ಲಿ ಕಂಡು ಬರುವ ಯಾವುದೇ ಗ್ರಾಮಗಳಲ್ಲಿ ಪ್ರವಾಹದ ಪರಿಸ್ಥಿತಿ ಇಲ್ಲ. ಪ್ರಾಥಮಿಕ ವರದಿಯಂತೆ ಯಾವುದೇ ಮೂಲ ಸೌಕರ್ಯ ಹಾನಿಯ ಬಗ್ಗೆ ವರದಿಯಾಗಿಲ್ಲ. ಪ್ರವಾಹದಿಂದ ಯಾವುದೇ ಜೀವ ಜಾನುವಾರಿಗೆ ಹಾನಿಯಾಗಿರುವುದಿಲ್ಲ. ಪ್ರಾಥಮಿಕ ವರದಿಯಂತೆ ವಾಸದ ಮನೆಗಳಿಗೆ ಯಾವುದೇ ಹಾನಿಯಾಗಿರುವ ಬಗ್ಗೆ ವರದಿಯಾಗಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾಹಿತಿ ನೀಡಿದ್ದಾರೆ.

ಕೃಷಿ, ತೋಟಗಾರಿಕೆ ಮತ್ತು ಕಂದಾಯ ಅಧಿಕಾರಿಗಳಿಂದ ಪ್ರವಾಹದಿಂದಾದ ಬೆಳೆಯ ಹಾನಿಯ ಬಗ್ಗೆ ಸರ್ವೆ ಕಾರ್ಯ ನಡೆಸಲಾಗುತ್ತಿದೆ. ಜಿಲ್ಲಾಡಳಿತದ ವತಿಯಿಂದ ಪ್ರವಾಹದ ವಿಸ್ತಾರ ಮತ್ತು ಪರಿಮಾಣವನ್ನು ಮತ್ತು ಪ್ರವಾಹದ ಪ್ರಭಾವಗಳನ್ನು ತಿಳಿಯುವ ಸಲುವಾಗಿ ಡ್ರೋನ್ ಸರ್ವೆ ಕಾರ್ಯಗಳನ್ನು ಕೈಗೊಳ್ಳಲಾಗಿದೆ.

ಇನ್ನು ನದಿ ಪಾತ್ರಗಳಲ್ಲಿ ಸಾರ್ವಜನಿಕರು ಯಾವುದೇ ಕಾರಣಕ್ಕೂ ತೆರಳದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಮುಂದುವರೆಸಲಾಗಿದೆ. ನದಿ ದಂಡೆಯಲ್ಲಿ ಹಾಗೂ ದಾಸನಪುರ ಸೇತುವೆಗಳಲ್ಲಿ ಪೊಲೀಸ್ ಭದ್ರತೆಯನ್ನು ನಿಯೋಜಿಸಿ ಸೆಲ್ಫಿ, ಫೋಟೊ ತೆಗೆಯಲು ಬರುವ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ.

ಸಾಗರ ರೂಪ ತಾಳಿದ ಕಾವೇರಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬರೆಯುತ್ತಿರುವ ಪರಿಣಾಮ ಅನೇಕ ಜಲಮೂಲಗಳು ತುಂಬಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹಾಗೆಯೇ ಭಾರತದ ನಯಾಗರ ಎಂದೇ ಕರೆಯುವ ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವ ಹನೂರು ತಾಲೂಕಿನ ಹೊಗೆನಕಲ್ ಜಲಪಾತದಲ್ಲಿ ಕಾವೇರಿ ಅಕ್ಷರಶಃ ರುದ್ರ ತಾಂಡವ ಆಡುತ್ತಿದ್ದು, ಸಾಗರದ ಮಾದರಿ ಇಡೀ ಪರಿಸರ ಗೋಚರಿಸುತ್ತಿದೆ.

ಕಲ್ಲು ಬಂಡೆಗಳ ಮೇಲೆ ಧುಮ್ಮಿಕ್ಕುತ್ತಿದ್ದ ನೀರು ಈಗ ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ಧುಮ್ಮಿಕ್ಕುವ ದೃಶ್ಯ ಕಣ್ಮರೆಯಾಗಿದ್ದು, ಜಲಪಾತವೇ ಕಾವೇರಿ ಆರ್ಭಟಕ್ಕೆ ಮುಳುಗಡೆಯಾಗಿದೆ. ‌ನಯಾಗರ ಜಲಪಾತದಂತೆ ಕಲ್ಲು ಬಂಡೆಗಳಿಂದ ಧುಮ್ಮಿಕ್ಕುತ್ತಿದ್ದ ನೀರು ಈಗ ಡ್ರೋಣ್ ದೃಶ್ಯದಲ್ಲಿ ಸಾಗರದಂತೆ ಗೋಚರಿಸುತ್ತಿದ್ದು, 1.20 ಲಕ್ಷ ಕ್ಯೂಸೆಕ್ ನೀರಿನ ಹರಿವಿದ್ದು, ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದೆ.

ಕರ್ನಾಟಕದ ರೀತಿ ತಮಿಳುನಾಡಿನಲ್ಲೂ ಕಾವೇರಿ ಪ್ರವಾಹ ಭೀತಿ ಎದುರಾಗಿದ್ದು, ಧರ್ಮಪುರಿ, ಕೃಷ್ಣಗಿರಿ, ಸೇಲಂ, ಈರೋಡ್, ನಾಮಕ್ಕಲ್, ಕರೂರ್, ತಿರುಚಿ, ತಂಜಾವೂರು ಭಾಗಗಳಲ್ಲಿ ಎಚ್ಚರಿಕೆ ವಹಿಸುವಂತೆ ಅಲ್ಲಿನ ಸಿಡಬ್ಲೂಸಿ ಎಂಜಿನಿಯರ್ ಪನ್ನೀರಸೆಲ್ವಂ ಹೇಳಿದ್ದಾರೆ.

ಕೊಳ್ಳೇಗಾಲ ಭಾಗದಲ್ಲಿ ಪ್ರವಾಹ ಭೀತಿ: ಕಾವೇರಿ ಹೊರಹರಿವು ಹೆಚ್ಚಾದಂತೆ ಕೊಳ್ಳೇಗಾಲ ತಾಲೂಕಿನ ದಾಸನಪುರ, ಹಳೇ ಹಂಪಾಪುರ, ಸರಗೂರು, ಅಗ್ರಹಾರ, ಹಳೇ ಹಂಪಾಪುರ ಸೇರಿದಂತೆ 9 ಊರುಗಳಲ್ಲಿ ಆತಂಕ ಎದುರಾಗಿದ್ದು, ಕಾಳಜಿ ಕೇಂದ್ರಗಳಿಗೆ ಜನರೆಲ್ಲರೂ ಬರುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದು, ಜಾನುವಾರುಗಳಿಗಾಗಿ ಗೋಶಾಲೆ ತೆರೆಯಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+