• search
 • Live TV
ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಶೇಷ ಚೇತನ ಮಕ್ಕಳ ಶಾಲೆಗೆ ನೆರವಿನ ಹಸ್ತ ಚಾಚಿದ ಕಿಚ್ಚ ಸುದೀಪ್‌

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜೂನ್‌ 2: ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲಿ ದೇಶದ ಅನೇಕ ನಟ-ನಟಿಯರು ಬಡವರ ನೆರವಿಗೆ ಧಾವಿಸಿ ತಮ್ಮ ಹೃದಯ ವೈಶಾಲ್ಯತೆಯನ್ನು ಮೆರೆದಿದ್ದಾರೆ. ಎಷ್ಟೋ ಕಡೆಗಳಲ್ಲಿ ಸರ್ಕಾರದ ನೆರವಿಗಿಂತ ಮೊದಲೇ ನಟ-ನಟಿಯರು ನೆರವಿನ ಹಸ್ತ ಚಾಚಿ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

ಅದೇ ರೀತಿ ನಮ್ಮ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಕೂಡ ನೆರವು ನೀಡುವುದರಲ್ಲಿ ಹಿಂದೆ ಬಿದ್ದಿಲ್ಲ. ಚಾಮರಾಜನಗರ ಜಿಲ್ಲೆಯ 40ಕ್ಕೂ ಹೆಚ್ಚು ಮಕ್ಕಳಿರುವ ಪೃಥ್ವಿ ವಿಶೇಷ ಚೇತನರ ಶಾಲೆಗೆ ನೆರವು ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಮಾನಸಿಕ ವಿಶೇಷ ಚೇತನ ಶಾಲೆಯ ಮಕ್ಕಳಿರುವ ಕಟ್ಟಡ ಮಳೆ ಬಂದರೆ ಸೋರುತ್ತದೆ. ಲಾಕ್‌ಡೌನ್ ವೇಳೆ ಆಹಾರಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದನ್ನು ಮನಗಂಡಿದ್ದ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ನೆರವಿಗೆ ಧಾವಿಸಿದೆ.

ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಈಗ ಗುಂಡ್ಲುಪೇಟೆಯಲ್ಲಿರುವ ಪೃಥ್ವಿ ವಿಶೇಷ ಚೇತನ ಮಕ್ಕಳ ಪಾಲಿಗೆ ಬೆಳಕಾಗುತ್ತಿದೆ. ಮಂಗಳವಾರ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ರಾಜ್ಯ ಮುಖಂಡ ರಮೇಶ್ ಕಿಟ್ಟಿ ಹಾಗೂ ಜಿಲ್ಲಾ ಮುಖಂಡರಾದ ಸೋಮ ನಾಯಕ, ಪರಶಿವ ಅವರ ತಂಡ ಶಾಲೆಗೆ ಭೇಟಿ ನೀಡಿತ್ತು. ಒಂದು ತಿಂಗಳಿಗಾಗುವಷ್ಟು ಆಹಾರದ ಕಿಟ್ ವಿತರಿಸಿ, ವಸತಿ ಶಾಲೆಯ ಮೂಲಸೌಕರ್ಯ ಅಭಿವೃದ್ಧಿ ಮಾಡಲೂ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ವಸತಿ ಶಾಲೆಯು ಬಾಡಿಗೆ ಕಟ್ಟಡದಲ್ಲಿದ್ದು, ಅವಕಾಶ ಕೊಟ್ಟರೇ ಇದೇ ಕಟ್ಟಡವನ್ನು ದುರಸ್ತಿ ಮಾಡಿಸಲಾಗುವುದು. ಇಲ್ಲವೇ ಬೇರೆ ಕಟ್ಟಡ ನೋಡಿ ಶಾಲೆಯನ್ನು ಸ್ಥಳಾಂತರಿಸುವ ಕೆಲಸವನ್ನು ಚಾರಿಟೇಬಲ್ ಸೊಸೈಟಿ ಮಾಡಲಿದೆ. ಜತೆಗೆ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಶಾಶ್ವತ ಪರಿಹಾರವೊಂದನ್ನು ಒದಗಿಸಲು ಚಿಂತನೆ ನಡೆದಿದೆ.

Recommended Video

   ಭಾರತವನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುವುದು ಹೇಗೆ | Sonia Gandhi | Oneindia Kannada

   ಕಳೆದ ವಾರ ಒಂದು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿದ್ದ ಮಂಗಳಮುಖಿಯರು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿಗೆ ಕರೆ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದ್ದರು. ತಕ್ಷಣವೇ ನೆರವಿಗೆ ಬಂದ ಕಿಚ್ಚನ ಚಾರಿಟೇಬಲ್ ಸೊಸೈಟಿ, ಚಿತ್ರದುರ್ಗದ ಮಂಗಳಮುಖಿಯರ ಮನೆಗೆ ದಿನಸಿ ಕಿಟ್‌ಗಳನ್ನು ವಿತರಿಸಿದ್ದಾರೆ.

   English summary
   Kichcha Sudeep Charitable Trust has provided assistance to Prithvi School for more than 40 Handicapped children in Gundlupete in Chamarajanagar district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X