ದಸರಾ ಆಚರಣೆ ವೇಳೆ ಶಾಸಕ ಎನ್. ಮಹೇಶ್ ಡಾನ್ಸ್:ಕ್ಯಾಮರಾದಲ್ಲಿ ಸೆರೆ
ಕೊಳ್ಳೇಗಾಲ, ಅಕ್ಟೋಬರ್ 08: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದ ದಸರಾ ಆಚರಣೆ ವೇಳೆ ಶಾಸಕ ಎನ್ ಮಹೇಶ್ ಅವರು ನೃತ್ಯ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸೋಮವಾರ ನಡೆದ ದಸರಾ ಆಚರಣೆ ವೇಳೆ ಕೊಳ್ಳೇಗಾಲ ಶಾಸಕ ಎನ್ ಮಹೇಶ್ ಅವರು ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು.

ಹತ್ತು ದಿನಗಳ ದಸರಾ ಆಚರಣೆ ಕೊಳ್ಳೇಗಾಲದಲ್ಲೂ ನಡೆಯುತ್ತಿದ್ದು, ಸೋಮವಾರ ಆಯುಧ ಪೂಜೆ ನಿಮಿತ್ತ ವಿಶೇಷ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಎನ್ ಮಹೇಶ್ ನೃತ್ಯ ಮಾಡಿದರು.
2018 ರ ವಿಧಾನಸಭೆ ಚುನಾವಣೆಯಲ್ಲಿ ಕೊಳ್ಳೆಗಾಲ ಕ್ಷೇತ್ರದಿಂದ ಬಿ ಎಸ್ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎನ್ ಹೇಶ್, ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಸಮ್ಮಿಶ್ರ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
#WATCH Chamarajanagar: Karnataka MLA N Mahesh dances at #Dasara celebrations at Kollegal. (07.10) pic.twitter.com/bJJSrAaGuO
— ANI (@ANI) October 8, 2019
ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದ್ದ ಎನ್ ಮಹೇಶ್, ಸಮ್ಮಿಶ್ರ ಸರ್ಕಾರದಲ್ಲಿ ಉಂಟಾದ ಗೊಂದಲದ ವಾತಾವರಣದ ಸಮಯದಲ್ಲಿ ತಮ್ಮ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ ಕುಮಾರಸ್ವಾಮಿ ಅವರ ವಿಶ್ವಾಸಮತ ಯಾಚನೆಯ ಸಮಯದಲ್ಲಿ ಗೈರಾಗಿದ್ದ ಅವರನ್ನು ಪಕ್ಷದ ಅಧ್ಯಕ್ಷೆ ಮಾಯಾವತಿ ಪಕ್ಷದಿಂದ ಉಚ್ಛಾಟಿಸಿದ್ದರು.












Click it and Unblock the Notifications