ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರೋಹಿಣಿ ಸಿಂಧೂರಿಗೆ ಅಧಿಕ ಪ್ರಸಂಗಿ ಎಂದ ಶಾಸಕ ಎನ್.ಮಹೇಶ್

By ಮೈಸೂರು ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜೂನ್ 4: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಅಧಿಕ ಪ್ರಸಂಗಿ ಎಂದು ಕೊಳ್ಳೇಗಾಲ ಶಾಸಕ ಎನ್.ಮಹೇಶ್ ವಾಗ್ದಾಳಿ ನಡೆಸಿದರು.

Recommended Video

ಯಾಕೊ Rohini sindhuri ಟೈಮ್ ಸರಿ ಇಲ್ಲ ಅನ್ಸುತ್ತೆ | N Mahesh | Oneindia Kannada

ಚಾಮರಾಜನಗರದಲ್ಲಿ ಮಾತನಾಡಿದ ಶಾಸಕ ಎನ್.ಮಹೇಶ್, ಕೊರೊನಾ ಸಂಕಷ್ಟದಲ್ಲಿ ಇಬ್ಬರು ಅಧಿಕಾರಿಗಳ ಕೆಸರೆರಚಾಟ ಸರಿಯಲ್ಲ. ಮಾಧ್ಯಮದ ಮೂಲಕ ಕಚ್ಚಾಟದಲ್ಲಿ ತೊಡಗಿರುವುದು ದುರಾದೃಷ್ಟಕರ ಎಂದು ಕಿಡಿಕಾರಿದರು.

ಮೈಸೂರು ಜಿಲ್ಲಾಧಿಕಾರಿಗೆ ಹೆದರಿ ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ಯಾಕೆ ಕೊಡಬೇಕು? ಆಕ್ಸಿಜನ್ ದುರಂತದ ಸಮಯದಲ್ಲಿ ಚಾಮರಾಜನಗರದ ಜನತೆ ಕ್ಷಮೆ ಕೇಳಬೇಕು ಎಂದು ಅಸಂಬದ್ಧ ಹೇಳಿಕೆ ನೀಡಿದ್ದ ರೋಹಿಣಿ ಸಿಂಧೂರಿ ಹೇಳಿದ್ದರು.‌ ಕ್ಷಮೆ ಕೇಳಲು ಇವರೇನು ಮೈಸೂರು ಮಹಾರಾಜರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.

Kollegala MLA N Mahesh Reactions To DC Rohini Sindhuri And Shilpa Nag Dispute

ಅಲ್ಲದೇ, ಸರ್ಕಾರ ಈ ಇಬ್ಬರು ಅಧಿಕಾರಿಗಳನ್ನ ನಿಯಂತ್ರಣದಲ್ಲಿಡಬೇಕು. ಇಬ್ಬರು ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಬುದ್ಧಿವಾದ ಹೇಳಬೇಕು ಎಂದು ಶಾಸಕ ಎನ್.ಮಹೇಶ್ ಹೇಳಿದರು.

English summary
Kollegala MLA N Mahesh has responded to a dispute with IAS officers in Mysuru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X