ವಿಷಪ್ರಸಾದ ಸೇವಿಸಿ ಮೃತರಾದವರ ಕುಟುಂಬಕ್ಕೆ ರಾಜ್ಯ ಕಾಂಗ್ರೆಸ್‌ನಿಂದ 1 ಲಕ್ಷ
Recommended Video

ಮೈಸೂರು, ಡಿಸೆಂಬರ್ 15: ಚಾಮರಾಜನಗರದ ಸುಳ್ವಾಡಿ ಗ್ರಾಮದ ಕಿಚ್ಚಗತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಮೃತರಾದ ಕುಟುಂಬಕ್ಕೆ ರಾಜ್ಯ ಕಾಂಗ್ರೆಸ್ ವತಿಯಿಂದ ತಲಾ ಒಂದು ಲಕ್ಷ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗಿಗಳನ್ನು ಭೇಟಿ ಮಾಡಿ, ವೈದ್ಯರೊಂದಿಗೆ ಮಾತನಾಡಿದ್ದೇವೆ, ಸರ್ಕಾರವು ಪರಿಹಾರ ಘೋಷಿಸಿದೆ ಜೊತೆಗೆ ಕೆಪಿಸಿಸಿ ಸಹ ಪರಿಹಾರ ನೀಡುತ್ತದೆ ಎಂದು ಅವರು ಹೇಳಿದರು.

ಸಿದ್ದರಾಮಯ್ಯ ಅವರು ಸಹ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಸ್ಥಿತಿ-ಗತಿ ನೋಡಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಫುಡ್ ಪಾಯ್ಸನ್‌ನಿಂದ ಆಗಿರುವ ಘಟನೆ ಅಲ್ಲವೆಂದು ವೈದ್ಯರು ಹೇಳುತ್ತಿದ್ದಾರೆ. ಯಾರೋ ಪಾತಕಿಗಳು ಉದ್ದೇಶಪೂರ್ವಾಕವಾಗಿ ವಿಷ ಬೆರೆಸಿರುವ ಅನುಮಾನ ಇದೆ, ಸರ್ಕಾರ ಈಗಾಗಲೆ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದರು.
ನಾನು ಕೂಡ ಸಿಎಂ ಬಳಿ ಮಾತನಾಡಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುತ್ತೇನೆ. ಈ ಕೃತ್ಯ ಎಸಗಿದ ಪಾತಕಿಗೆ ಕಠಿಣ ಶಿಕ್ಷೆ ಆಗಲೇ ಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದರು.












Click it and Unblock the Notifications