ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಷಪ್ರಸಾದ ಸೇವಿಸಿ ಮೃತರಾದವರ ಕುಟುಂಬಕ್ಕೆ ರಾಜ್ಯ ಕಾಂಗ್ರೆಸ್‌ನಿಂದ 1 ಲಕ್ಷ

|
Google Oneindia Kannada News

Recommended Video

Chamarajanagar Temple Tragedy : ಕೆಪಿಸಿಸಿ, ಸರ್ಕಾರದಿಂದ ನೊಂದವರಿಗೆ ಸಹಾಯ

ಮೈಸೂರು, ಡಿಸೆಂಬರ್ 15: ಚಾಮರಾಜನಗರದ ಸುಳ್ವಾಡಿ ಗ್ರಾಮದ ಕಿಚ್ಚಗತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಮೃತರಾದ ಕುಟುಂಬಕ್ಕೆ ರಾಜ್ಯ ಕಾಂಗ್ರೆಸ್‌ ವತಿಯಿಂದ ತಲಾ ಒಂದು ಲಕ್ಷ ನೀಡುವುದಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗಿಗಳನ್ನು ಭೇಟಿ ಮಾಡಿ, ವೈದ್ಯರೊಂದಿಗೆ ಮಾತನಾಡಿದ್ದೇವೆ, ಸರ್ಕಾರವು ಪರಿಹಾರ ಘೋಷಿಸಿದೆ ಜೊತೆಗೆ ಕೆಪಿಸಿಸಿ ಸಹ ಪರಿಹಾರ ನೀಡುತ್ತದೆ ಎಂದು ಅವರು ಹೇಳಿದರು.

KPCC giving 1 lakh to compensation to the deceased family in Chamarajanagar

ಸಿದ್ದರಾಮಯ್ಯ ಅವರು ಸಹ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಸ್ಥಿತಿ-ಗತಿ ನೋಡಿ ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು.

ವಿಷಯುಕ್ತ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆಯುತ್ತಿರುವವನ್ನು ಕಟ್ಟಿಹಾಕಿದ್ದಾರೆ ವೈದ್ಯರು! ಏಕೆ? ವಿಷಯುಕ್ತ ಪ್ರಸಾದ ಸೇವಿಸಿ ಚಿಕಿತ್ಸೆ ಪಡೆಯುತ್ತಿರುವವನ್ನು ಕಟ್ಟಿಹಾಕಿದ್ದಾರೆ ವೈದ್ಯರು! ಏಕೆ?

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕೇವಲ ಫುಡ್‌ ಪಾಯ್ಸನ್‌ನಿಂದ ಆಗಿರುವ ಘಟನೆ ಅಲ್ಲವೆಂದು ವೈದ್ಯರು ಹೇಳುತ್ತಿದ್ದಾರೆ. ಯಾರೋ ಪಾತಕಿಗಳು ಉದ್ದೇಶಪೂರ್ವಾಕವಾಗಿ ವಿಷ ಬೆರೆಸಿರುವ ಅನುಮಾನ ಇದೆ, ಸರ್ಕಾರ ಈಗಾಗಲೆ ತನಿಖೆ ನಡೆಸುತ್ತಿದೆ ಎಂದು ಅವರು ಹೇಳಿದರು.

ವಿಷಪ್ರಸಾದ: ಪತ್ನಿ, 2 ತಿಂಗಳ ಹಸುಗೂಸಿನೆದುರಲ್ಲೇ ಕುಸಿದು ಮೃತನಾದ ಪತಿವಿಷಪ್ರಸಾದ: ಪತ್ನಿ, 2 ತಿಂಗಳ ಹಸುಗೂಸಿನೆದುರಲ್ಲೇ ಕುಸಿದು ಮೃತನಾದ ಪತಿ

ನಾನು ಕೂಡ ಸಿಎಂ ಬಳಿ ಮಾತನಾಡಿ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುತ್ತೇನೆ. ಈ ಕೃತ್ಯ ಎಸಗಿದ ಪಾತಕಿಗೆ ಕಠಿಣ ಶಿಕ್ಷೆ ಆಗಲೇ ಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದರು.

English summary
Chamarajanagar temple food poison case: KPCC announce 1 lakh compensation to the deceased family. KPCC president Dinesh Gundu rao announce the compensation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X