ದೀಪಾವಳಿ ಹಬ್ಬದಂದೇ ದುರಂತ: ಹಳ್ಳಕ್ಕೆ ಉರುಳಿದ ಸಾರಿಗೆ ಬಸ್
ಚಾಮರಾಜನಗರ, ಅಕ್ಟೋಬರ್ 26: ಭಕ್ತರನ್ನು ಕರೆತರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಘಟನೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ನಡೆದಿದೆ.
ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ. ಘಟನೆಯಲ್ಲಿ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಚಾಲಕ ಚಂದ್ರಶೇಖರ್ ಕೈ ಮತ್ತು ಹೊಟ್ಟೆ ಭಾಗಕ್ಕೆ ಬಲವಾದ ಪೆಟ್ಟುಬಿದ್ದಿದೆ. ಇನ್ನು ಬಸ್ ನಿರ್ವಾಹಕರ ಬೆನ್ನಿಗೆ ಮತ್ತು ಹೊಟ್ಟೆಗೆ ಪೆಟ್ಟು ಬಿದ್ದಿದ್ದು, ಇಬ್ಬರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.

ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಗಾಯಾಳುಗಳನ್ನು ಮೈಸೂರು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಇನ್ನುಳಿದ 21 ಮಂದಿಯನ್ನು ಕೊಳ್ಳೇಗಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೀಡಾಗಿರುವ ಬಸ್ KA:57 F:866 ಸಂಖ್ಯೆಯ ಬಸ್ ಮದ್ದೂರು ಘಟಕದ್ದಾಗಿದ್ದು, 51 ಪ್ರಯಾಣಿಕರು ಇದ್ದರು ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ.












Click it and Unblock the Notifications