ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಜನರಿಗೆ ಗಾಯ
ಚಾಮರಾಜನಗರ, ಏಪ್ರಿಲ್, 27: ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲಿವೆ. ಹಾಗೆಯೇ ಇದೀಗ ಕೆಎಸ್‌ಆರ್‌ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಳುಬೆಟ್ಟ ಮಹದೆಶ್ವರಬೆಟ್ಟ ಮಾರ್ಗ ಸಮೀಪ ಶನಿವಾರ ರಾತ್ರಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಈ ಬಸ್ ಚಾಲಕನ ನಿಯಂತ್ರಣ ತಪ್ಪಿ ತಾಳುಬೆಟ್ಟ ಮಹದೆಶ್ವರಬೆಟ್ಟ ಮಾರ್ಗ ಸಮೀಪ ಪಲ್ಟಿಯಾಗಿದೆ. ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರ ಪೈಕಿ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮುಡುಕನಪುರ ಗ್ರಾಮದ ರಾಜಮಣಿ, ಕೃತಿಕಾ ರುಕ್ಮಿಣಿ ಮಂಜುನಾಥ್ ಸಂಜೀವ್ ಮಹೇಶ್ ಕಾವ್ಯಾ ಪ್ರತಾಪ್ ಕಾವ್ಯಾ ಪ್ರತಾಪ್ ಮಹೇಶ್, ನಿಂಗಯ್ಯ, ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಮೆಲ್ಲಳ್ಳಿ ಗ್ರಾಮದ ಜ್ಯೋತಿ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬಸ್ ಪಲ್ಟಿಯಾಗುತ್ತಿದ್ದಂತೆ ಸ್ಥಳದಲ್ಲಿನ ಜನರು ಆಂಬುಲೆನ್ಸ್ ಹಾಗೂ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆದರೆ, ತುಂಬಾ ಹೊತ್ತಾದರೂ ಆಂಬುಲೆನ್ಸ್ ಸಿಗದ ಕಾರಣ ಪ್ರಯಾಣಿಕರು ಗಾಬರಿಗೊಂಡಿದ್ದರು. ನಂತರ ಪ್ರಾಧಿಕಾರದ ಆಂಬುಲೆನ್ಸ್ ಸೇರಿ ಗಾಯಾಳುಗಳನ್ನು ಖಾಸಗಿ ವಾಹನಗಳ ಮೂಲಕ ಮಹದೇಶ್ವರಬೆಟ್ಟ ಕೊಳ್ಳೇಗಾಲದ ಆಸ್ಪತ್ರೆ ಗೆ ಚಿಕಿತ್ಸೆಗೆಂದು ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಓರ್ವ ಸಾವು: ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿ ಬಸ್‌ನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
ಕೋಲಾರ ಜಿಲ್ಲೆ ಶ್ರೀನಿವಾಸಪುರ ಗುಂಟಪಲ್ಲಿ ಕ್ರಾಸ್ ಬಳಿ ನಿನ್ನೆ ಅಂದರೆ ಮಾರ್ಚ್ 11ರ ತಡರಾತ್ರಿ ಈ ಘಟನೆ ನಡೆದಿತ್ತು. ಅಪಘಾತದಲ್ಲಿ ಆಂದ್ರಪ್ರದೇಶ ಮೂಲದ ಮದನಪಲ್ಲಿಯ ಗಂಗಾಧರ್ ಎಂಬ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಅತೀ ವೇಗವಾಗಿದ್ದ ಖಾಸಗಿ ಬಸ್ ಓವರ್ ಟೆಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಆಂದ್ರಪ್ರದೇಶದ ಮದನಪಲ್ಲಿ ಹಾಗೂ ಕೋಲಾರ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಇನ್ನು ಸ್ಥಳಕ್ಕೆ ರಾಯಲ್ಪಾಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದರು.
ಭೀಕರ ಅಪಘಾತ: ಕಾರು ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಐವರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಕೊಳ್ಳೇಗಾಲ ತಾಲೂಕಿನಲ್ಲಿ ಚಿಕ್ಕಿಂದುವಾಡಿ ಬಳಿಯ ಮುಖ್ಯ ರಸ್ತೆಯಲ್ಲಿ ಇತ್ತೀಚೆಗಷ್ಟೇ ಈ ಅಪಘಾತ ಸಂಭವಿಸಿದೆ.
ಕಾರಿನಲ್ಲಿದ್ದ ಮೂವರು ಪುರುಷರು, ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಇವರು ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವದ ನಡೆಯುತ್ತಿದ್ದು, ಈ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿತ್ತು.
ಸ್ಥಳೀಯರ ಮಾಹಿತಿ ಮೇರೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮತ್ತೊಂದೆಡೆ, ಲಾರಿ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ 8 ಜನ ಸಾವನ್ನಪ್ಪಿದ್ದ, 33 ಮಂದಿ ಭೀಕರವಾಗಿ ಗಾಯಗೊಂಡ ಘಟನೆ ಕೆಲವು ತಿಂಗಳುಗಳ ಹಿಂದೆಯಷ್ಟೇ ಧ್ರಪ್ರದೇಶದಲ್ಲಿ ನಡೆದಿತ್ತು.
ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೊಘಲಿ ಘಾಟ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿತ್ತು. ಗಾಯಾಳುಗಳನ್ನು ಚಿತ್ತೂರು ಜಿಲ್ಲೆಯ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿತ್ತು.












Click it and Unblock the Notifications