ಹನೂರು: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿ
ಚಾಮರಾಜನಗರ, ಮಾರ್ಚ್, 13: ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆ (KSRTC) ಬಸ್ ಪಲ್ಟಿಯಾದ ಘಟನೆ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪ ನಡೆದಿದೆ.
ಈ ವೇಳೆ ಬಸ್‌ನಲ್ಲಿ 30 ಮಂದಿ ಪ್ರಯಾಣಿಕರಲ್ಲಿ ಶಿಕ್ಷಕರೇ ಹೆಚ್ಚು ಮಂದಿ ಇದ್ದರು. ಅದೃಷ್ಟವಶಾತ್ 6-7 ಮಂದಿ ಸಣ್ಣಪುಟ್ಟ ಗಾಯಗಳಾಗಿರುವುದು ಬಿಟ್ಟರೇ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ಚಾಮರಾಜನಗರ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಭಾಗದಲ್ಲೇ ಅತೀ ಹೆಚ್ಚಾಗಿ ಸಾರಿಗೆ ಬಸ್‌ಗಳನ್ನು ಅಪಘಾತಕ್ಕೀಡಾಗಿವೆ. ಹಾಗೆಯೇ ಇನ್ನೂ ಇದೀಗ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು, ಇದಕ್ಕೆ ಕಾರಣ ಬಸ್ ಕಂಡಕ್ಟರ್ ಬಸ್ ಚಲಾಯಿಸಿದ್ದು ಎಂದು ತಿಳಿದುಬಂದಿದೆ. ಇನ್ನು ಇಲಾಖೆ ಈ ಘಟನೆ ಬಗ್ಗೆ ಯಾವ ರೀತಿ ಕ್ರಮ ಜರುಗಿಸಲಿದೆ ಎಂದು ಕಾದುನೋಡಬೇಕಿದೆ.

ಹನೂರು ತಾಲೂಕಿನ ಲೋಕ್ಕನಹಳ್ಳಿ ಮಾರ್ಗವಾಗಿ ಒಡೆಯರ್ ಪಾಳ್ಯ ಕಡೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಆನೆ ಕಾರಿಡಾರ್ ರಸ್ತೆಗೆ ಇಳಿದಿದೆ. ಕೂಡಲೇ ಸ್ಥಳೀಯರು ದೌಡಾಯಿಸಿ ಬಸ್ಸಿನಲ್ಲಿದ್ದವರನ್ನು ಹೊರಕ್ಕೆ ಕರೆತಂದಿದ್ದು, ಕಿಟಕಿ ಬಳಿ ಕುಳಿತಿದ್ದವರಿಗೆ 6-7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಈ ಘಟನೆ ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು, ಕಂಡಕ್ಟರ್ ಬಸ್ ಅನ್ನು ಓಡಿಸುತ್ತಿದ್ದರಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ.












Click it and Unblock the Notifications