Get Updates
Get notified of breaking news, exclusive insights, and must-see stories!

ಕುಣಗಳ್ಳಿ: ಅಂತರ್ಜಾತಿ ವಿವಾಹ ಆಗಿದ್ದಕ್ಕೆ ದಂಪತಿಗೆ 6 ಲಕ್ಷ ದಂಡ, ಗ್ರಾಮದಿಂದ ಬಹಿಷ್ಕಾರ

ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಅಂತರ್ ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಯಜಮಾನರು 3 ಲಕ್ಷ ದಂಡ ಹಾಕಿದ್ದಾರೆ. ಅಲ್ಲದೇ ನಮ್ಮನ್ನು ಗ್ರಾಮದಿಂದ ಹೊರ ಉಳಿಯುವಂತೆ ಬಹಿಷ್ಕಾರ ಹಾಕಿದ್ದಾರೆ ಎಂದು ನಗರದ ಡಿ.ವೈ.ಎಸ್.ಪಿ ಕಚೇರಿಗೆ ಬಂದು ದಂಪತಿಗಳು ದೂರು ನೀಡಿದ್

ಚಾಮರಾಜನಗರ, ಮಾರ್ಚ್‌, 05: ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿ ಗ್ರಾಮದಲ್ಲಿ ಅಂತರ್ ಜಾತಿ ವಿವಾಹ ಆಗಿದ್ದಕ್ಕೆ ಗ್ರಾಮದ ಯಜಮಾನರು 3 ಲಕ್ಷ ದಂಡ ಹಾಕಿದ್ದಾರೆ. ಅಲ್ಲದೇ ನಮ್ಮನ್ನು ಗ್ರಾಮದಿಂದ ಹೊರ ಉಳಿಯುವಂತೆ ಬಹಿಷ್ಕಾರ ಹಾಕಿದ್ದಾರೆ ಎಂದು ನಗರದ ಡಿ.ವೈ.ಎಸ್.ಪಿ ಕಚೇರಿಗೆ ಬಂದು ದಂಪತಿಗಳು ದೂರು ನೀಡಿದ್ದಾರೆ.

ಕುಣಗಳ್ಳಿ ಗ್ರಾಮದ ಗೋವಿಂದರಾಜು ಎಂಬುವವರು ಮಳವಳ್ಳಿ ತಾಲೂಕಿನ ಹೂವಿನ ಕೊಪ್ಪಲು ಗ್ರಾಮದ ದಲಿತ ಜನಾಂಗಕ್ಕೆ ಸೇರಿದ ಪ್ರಕಾಶ್ ಎಂಬುವವರ ಮಗಳಾದ ಶ್ವೇತ ಜೊತೆ ಪರಸ್ಪರ ಪ್ರೀತಿಸಿ ವಿವಾಹ ನೋಂದಣಿ ಮಾಡಿಸಿಕೊಂಡಿದ್ದಾರೆ. ಮನೆಯವರ ಸಮ್ಮುಖದಲ್ಲಿ 5 ವರ್ಷಗಳ ಹಿಂದೆ ಮಳವಳ್ಳಿಯ ಸಬ್ ರಿಜಿಸ್ಟರ್ ಕಚೇರಿಯಲ್ಲಿ ವಿವಾಹ ನೊಂದಣಿ ಮಾಡಿಸಿಕೊಂಡಿದ್ದರು. ಗೋವಿಂದರಾಜು ಮಳವಳ್ಳಿಯಲ್ಲಿ ಮನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಆದಾಗ ಗೋವಿಂದರಾಜು ಹಾಗೂ ಶ್ವೇತಾ ಕುಣಗಳ್ಳಿ ಗ್ರಾಮಕ್ಕೆ ಬಂದು ಹೋಗುತ್ತಿದ್ದು, ಹೀಗೆ ಐದು ವರ್ಷದಿಂದ ಜೀವನ ನಡೆಸುತ್ತಿದ್ದರು.

Kunagalli: Intercaste marriage, 6 lakhs fined to couple

ಅಂತರ್ಜಾತಿ ವಿವಾಹ, ಗ್ರಾಮಸ್ಥರಿಂದ ಕಿರುಕುಳ

ಆದರೆ ಗೋವಿಂದರಾಜು ಅವರ ಮನೆಯಲ್ಲಿ ಅಂತರ್ ಜಾತಿ ವಿವಾಹ ಎಂದು ತಿಳಿದಿದ್ದರೂ ಸಹ ಮನೆಯವರು ಯಾರು ಸಹ ತೊಂದರೆ ನೀಡಲಿಲ್ಲ. ತಿಂಗಳಿಗೆ 2 ರಿಂದ 3 ಬಾರಿ ಗ್ರಾಮಕ್ಕೆ ಬಂದು ಹೋಗುತ್ತಿದ್ದರು. ಆದರೆ ಗೋವಿಂದರಾಜು ಅವರ ಅಕ್ಕಪಕ್ಕದ ನಿವಾಸಿಗಳು ಅಂತರ್ ಜಾತಿ ವಿವಾಹದ ಬಗ್ಗೆ ಮಾಹಿತಿಯನ್ನು ಪಡೆದು ಶ್ವೇತಾ ನಮ್ಮ ಜಾತಿ ಅವಳಲ್ಲ. ಅವಳು ದಲಿತ ಜನಾಂಗಕ್ಕೆ ಸೇರಿದವಳು ಎಂದು ಪಕ್ಕದ ಮನೆಯವರಾದ ಜಯಲಕ್ಷ್ಮಿ, ಮಧು, ರಂಗಸ್ವಾಮಿ, ಕುಳ್ಳ, ಮಹದೇವಪ್ಪ ಮಹದೇವ ಶೆಟ್ಟಿ ಇವರು ಗ್ರಾಮದ ಯಜಮಾನರಿಗೆ ಮಾಹಿತಿ ನೀಡಿದ್ದರು.

ಆಗ ಎರಡರಿಂದ ಮೂರು ಬಾರಿ ಪಂಚಾಯಿತಿ ನಡೆಸಿ ದಂಡ ಕಟ್ಟಬೇಕು ಎಂದು ನಮ್ಮ ಮಾವನವರಾದ ವೆಂಕಟಶೆಟ್ಟಿ ಮತ್ತು ಸಂಗಮ್ಮ ಅವರಿಗೆ ಆದೇಶ ನೀಡಿ ಕಿರುಕುಳ ನೀಡುತ್ತಿದ್ದರು. ನಂತರ ಗ್ರಾಮದ ಯಜಮಾನರು ಬಹಿಷ್ಕಾರ ಹಾಕಿ ನೀವು ಗ್ರಾಮಸ್ಥರ ಜೊತೆ ಮಾತನಾಡುವಂತಿಲ್ಲ. ಅಂಗಡಿಗಳಲ್ಲಿ ಅಕ್ಕಿ, ತರಕಾರಿ, ಹಾಲು ನೀಡುವಂತಿಲ್ಲ. ಹಾಗೂ ನೀರನ್ನು ಸಹ ತೆಗೆದುಕೊಳ್ಳುವಂತಿಲ್ಲ ಎಂದು ತೀರ್ಪು ನೀಡಿದ್ದರು.

3 ಲಕ್ಷ ದಂಡ ಕಟ್ಟಬೇಕೆಂದು ಆದೇಶ

ಗ್ರಾಮದ ಯಜಮಾನರಾದ ವೆಂಕಟಶೆಟ್ಟಿ ,ಮಹದೇವ, ಮೊಂಡಶೆಟ್ಟಿ, ಕಣ್ಣಪ್ಪ, ನಂಜಶೆಟ್ಟಿ, ಮಹದೇವ ಶೆಟ್ಟಿ, ಸಿದ್ದೇಶ್, ಪಂಚಾಯಿತಿ ಮಾಡಿ ನೀವು ತಪ್ಪು ಮಾಡಿದ್ದೀರ. ಆದ್ದರಿಂದ 3 ಲಕ್ಷ ದಂಡ ಕಟ್ಟಬೇಕೆ ಎಂದು ಮಾರ್ಚ್ 1ಕ್ಕೆ ಕೊನೆಯ ದಿನಾಂಕ ನೀಡಿದ್ದರು. ನೀವು ದಂಡ ಕಟ್ಟಿದರೂ ಸಹ ನಿಮ್ಮ ಸೊಸೆ, ಮಗ ಗ್ರಾಮಕ್ಕೆ ಪ್ರವೇಶ ಮಾಡುವಂತಿಲ್ಲ. ನೀವು ಅವರ ಜೊತೆ ಮಾತನಾಡುವಂತಿಲ್ಲ. ಈಗ 3 ಲಕ್ಷ ಕಟ್ಟಿದರೆ ಗ್ರಾಮದವರು ಎಂದಿನಂತೆ ನಿಮ್ಮನ್ನು ಮಾತನಾಡಿಸುತ್ತಾರೆ ಎಂದು ಬಹಿಷ್ಕಾರ ಹಾಕಿದ್ದರು.

Kunagalli: Intercaste marriage, 6 lakhs fined to couple

ದಂಡವನ್ನು 6 ಲಕ್ಷಕ್ಕೆ ಏರಿಸಿದ ಗ್ರಾಮಸ್ಥರು

ನಮ್ಮ ಮಾವನವರು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಅವರ ಬಳಿ 3 ಲಕ್ಷ ಇಲ್ಲ. ಹಾಗಾಗಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಡಿವೈಎಸ್‌ಪಿ ಅವರಿಗೆ ದೂರು ನೀಡಿದ್ದಾರೆ. ಶ್ವೇತಾ ಹಾಗೂ ಗೋವಿಂದರಾಜು ದೂರು ನೀಡಿದ ವಿಷಯ ಗ್ರಾಮದ ಯಜಮಾನರಿಗೆ ತಿಳಿದಿದೆ. ಆಗ ತಕ್ಷಣ ಗ್ರಾಮದ ಯಜಮಾನರು ಮತ್ತೆ 3 ಲಕ್ಷ ದಂಡ ಕಟ್ಟುವಂತೆ ಹೇಳಿದ್ದಾರೆ. ಒಟ್ಟು 6 ಲಕ್ಷ ದಂಡವನ್ನು ಕಟ್ಟಬೇಕು ಎಂದು ಆದೇಶ ನೀಡಿದ್ದಾರೆ ಎಂದು ಶ್ವೇತಾ ಹಾಗೂ ಗೋವಿಂದರಾಜು ಅಳಲು ತೋಡಿಕೊಂಡಿದ್ದಾರೆ.

ಮಾರ್ಚ್ 1ರಂದು ನಮ್ಮ ಕಚೇರಿಗೆ ಬಂದು ದೂರು ನೀಡಿದ್ದಾರೆ. ನಾನು ಅಂದು ಕಚೇರಿಯಲ್ಲಿ ಇರಲಿಲ್ಲ. ಹಾಗಾಗಿ ಅರ್ಜಿಯನ್ನು ನೋಡಿ ಇದರ ಬಗ್ಗೆ ತನಿಖೆ ನಡೆಸಿ ಮಾಹಿತಿಯನ್ನು ಪಡೆದುಕೊಂಡು ಬರಬೇಕು ಎಂದು ಸಿಪಿಐ ಕೃಷ್ಣಪ್ಪ ಅವರಿಗೆ ಸೂಚನೆ ನೀಡಿದ್ದೇನೆ. ಒಂದು ವೇಳೆ ಬಹಿಷ್ಕಾರ ಹಾಕಿದ್ದರೆ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಡಿವೈಎಸ್‌ಪಿ ಸೋಮೇಗೌಡ ಭರವಸೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+