ಚಾಮರಾಜನಗರ: ಮಲೆ ಮಹದೇಶ್ವರದ ಲಾಡು ಬೆಲೆ ಹೆಚ್ಚಳ
ಚಾಮರಾಜನಗರ, ನವೆಂಬರ್ 9: ಲಾಡು ತಯಾರಿಕಾ ವೆಚ್ಚ ಏರಿಕೆಯಾದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಲಾಡುಗಳ ಮಾರಾಟ ದರದಲ್ಲಿ ಏರಿಕೆ ಮಾಡಲಾಗಿದೆ.
100 ಗ್ರಾಂ ತೂಕದ ಲಾಡುಗೆ ಇಂದಿನಿಂದ 25 ರೂಪಾಯಿ ದರ ನಿಗದಿ ಮಾಡಿದ್ದು, ಈ ಹಿಂದೆ 100 ಗ್ರಾಂ ಲಾಡು ಬೆಲೆ 20 ರೂ. ಇತ್ತು. ಲಾಡು ತಯಾರಿಕಾ ವೆಚ್ಚ ಹಾಗೂ ಕಚ್ಚಾ ವಸ್ತುಗಳ ಬೆಲೆ ಏರಿಕೆಯಿಂದ 5 ರೂಪಾಯಿ ಏರಿಕೆ ಮಾಡಲಾಗಿದೆ.

ರಾಜ್ಯದಲ್ಲಿಯೇ ಅತಿ ಹೆಚ್ಚು ಆದಾಯ ತಂದು ಕೊಡುವ ದೇವಾಲಯಗಳ ಪೈಕಿ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಎರಡನೇ ಸ್ಥಾನದಲ್ಲಿದೆ.

ಅತಿ ಹೆಚ್ಚು ಭಕ್ತರನ್ನು ಹೊಂದಿರುವ ಮಾದಪ್ಪನ ಸನ್ನಿಧಿಯಲ್ಲಿ ಸಿಗುವ ಲಾಡುಗಳ ದರವನ್ನು 2015 ರಿಂದಲೂ ಏರಿಕೆ ಮಾಡಿರಲಿಲ್ಲ. ಲಾಡು ತಯಾರಿಕೆಯ ಕಚ್ಚಾ ವಸ್ತು ಬೆಲೆ ಏರಿಕೆ, ನೌಕರರ ಸಂಬಳ ಹೆಚ್ಚಾಗಿರುವ ಹಿನ್ನಲೆಯಲ್ಲಿ ಈ ತೀರ್ಮಾನ ಮಾಡಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ.
Recommended Video
Muniratna vs Kusuma : RR Nagar ಕಣದಲ್ಲಿ ಗೆಲ್ಲೋದು ಯಾರು, ಎರಡೂ ಪಕ್ಷಗಳ ಜಿದ್ದಾಜಿದ್ದಿ | Oneindia Kannada












Click it and Unblock the Notifications